ಅಪರಾಧಪ್ರಚಲಿತ

ಕಾರು,ಲಾರಿ ನಡುವೆ ಭೀಕರ ಅಪಘಾತ ; ನಾಲ್ವರಿಗೆ ಗಂಭೀರ ಗಾಯ!!

ಲಾರಿ ಮತ್ತು ಕಾರು ಡಿಕ್ಕಿಯಾಗಿ ನಾಲ್ವರು ಗಂಭೀರ ಗಾಯಗೊಂಡ ಘಟನೆ ನಿನ್ನೆ ರಾತ್ರಿ ನಡೆದಿದೆ‌.

ಈ ಸುದ್ದಿಯನ್ನು ಶೇರ್ ಮಾಡಿ

ಬೆಳ್ತಂಗಡಿ: ಚಾರ್ಮಾಡಿ ಘಾಟಿಯ 3ನೇ ತಿರುವಿನಲ್ಲಿ ಭಾನುವಾರ ತಡರಾತ್ರಿ ಲಾರಿ ಮತ್ತು ಕಾರು ಡಿಕ್ಕಿಯಾಗಿ ನಾಲ್ವರು ಗಾಯಗೊಂಡ ಘಟನೆ ನಡೆದಿದೆ.

maithri

ಮೂಡಿಗೆರೆಯಿಂದ ಉಜಿರೆ ಕಡೆ ಬರುತ್ತಿದ್ದ ಕಾರು ಹಾಗೂ ಕೊಟ್ಟಿಗೆಹಾರ ಕಡೆ ತೆರಳುತ್ತಿದ್ದ ಲಾರಿ ಡಿಕ್ಕಿಯಾಗಿದ್ದು ಕಾರಿನಲ್ಲಿ ಉಜಿರೆ ಕಡೆ ಪ್ರಯಾಣಿಸುತ್ತಿದ್ದ ಹಂಪೆಯ ವೇದಮ್ಮ(55) ಜ್ಞಾನಮ್ಮ(70), ಮಂಜುಳಾ(50) ಮತ್ತು ರೇಣುಕಾ(26) ಗಂಭೀರವಾಗಿ ಗಾಯಗೊಂಡಿದ್ದು ಉಜಿರೆಯ ದಾಖಲಾಗಿದ್ದಾರೆ.

ಖಾಸಗಿ ಆಸ್ಪತ್ರೆಯಲ್ಲಿ  ಕಾರಿನಲ್ಲಿದ್ದ ಚಾಲಕ ಮತ್ತು ಇಬ್ಬರು ಮಕ್ಕಳು ಯಾವುದೇ ರೀತಿಯ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದ್ದಾರೆಂದು ತಿಳಿದು ಬಂದಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

1 of 143