tamanvi
ಪ್ರಚಲಿತ

ಹಳಿ ತಪ್ಪಿ ಕಾಲೋನಿಗೆ ನುಗ್ಗಿದ ಗೂಡ್ಸ್ ರೈಲು… ಭಯಭೀತರಾಗಿ ಓಡಿದ ಜನರು!!

ಗೂಡ್ಸ್‌ ರೈಲೊಂದು ಹಳಿ ತಪ್ಪಿ ಪಕ್ಕದಲ್ಲಿದ್ದ ಜನವಸತಿ ಪ್ರದೇಶಕ್ಕೆ ನುಗ್ಗಿದ ಘಟನೆ ಒಡಿಶಾದ ರೂರ್ಕೆಲಾದಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಭುವನೇಶ್ವ‌ರ್: ಗೂಡ್ಸ್‌ ರೈಲೊಂದು ಹಳಿ ತಪ್ಪಿ ಪಕ್ಕದಲ್ಲಿದ್ದ ಜನವಸತಿ ಪ್ರದೇಶಕ್ಕೆ ನುಗ್ಗಿದ ಘಟನೆ ಒಡಿಶಾದ ರೂರ್ಕೆಲಾದಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದೆ.

ಬೆಳಗಿನ ಜಾವಾ ಅವಘಡ ಸಂಭವಿಸಿದ್ದು ಪರಿಣಾಮ ಗೂಡ್ಸ್‌ ರೈಲಿನ ಮೂರೂ ಬೋಗಿಗಳು ಹಳಿ ತಪ್ಪಿ ಬಸಂತಿ ಕಾಲೋನಿಗೆ ನುಗ್ಗಿದೆ ಜೋರಾದ ಸದ್ದು ಕೇಳುತ್ತಿದ್ದಂತೆ ಕಾಲೋನಿಯ ಕೆಲ ನಿವಾಸಿಗಳು ಭಯಭೀತರಾಗಿ ಓಡಿದ್ದಾರೆ. ಘಟನೆಯಿಂದ ಯಾವುದೇ ಕಾಲೋನಿಯಲ್ಲಿದ್ದ ಯಾವುದೇ ಮನೆಗಳಿಗೆ ಡಿಕ್ಕಿ ಹೊಡೆಯದ ಪರಿಣಾಮ ದೊಡ್ಡ ಅನಾಹುತ ತಪ್ಪಿದಂತಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.

ಅಪಘಾತದಿಂದ ರೈಲಿನ ಮೂರೂ ಬೋಗಿಗಳು ಬಸಂತಿ ಕಾಲೋನಿಯ ರಸ್ತೆ ಮದ್ಯದಲ್ಲಿ ನಿಂತ ಪರಿಣಾಮ ಸಂಚಾರ ಅಸ್ತವ್ಯಸ್ತಗೊಂಡಿದೆ. ಘಟನಾ ಸ್ಥಳಕ್ಕೆ ರೈಲ್ವೆ ಸಿಬ್ಬಂದಿ ಹಾಗೂ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿ. ಕೆಲ ಸಮಯದ ಬಳಿಕ ಸುರಕ್ಷಿತ ಸಂಚಾರಕ್ಕೆ ಅನುವು ಮಾಡಿ ಕೊಟ್ಟರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿನಲ್ಲಿ ಸಂಭ್ರಮದ 28ನೇ ವರ್ಷದ ‘ಶ್ರೀಕೃಷ್ಣಲೋಕ’ ;1,250ಕ್ಕೂ ಅಧಿಕ ಪುಟಾಣಿ ಕೃಷ್ಣ-ರಾಧೆಯರಿಂದ ವೈಭವದ ಶೋಭಾಯಾತ್ರೆ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಪರ್ಲಡ್ಕ ಶಿವಪೇಟೆಯ ವಿವೇಕಾನಂದ…

ಸೆ.18ರಂದು ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ; ಕರಾವಳಿ ಅಭಿವೃದ್ಧಿ ಪ್ರಸ್ತಾವನೆಗಳಿಗೆ ಸಿಗಲಿದೆ ಆದ್ಯತೆ

ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಡಳಿತವನ್ನು ಜನರ ಬಳಿಗೆ ಕೊಂಡೊಯ್ಯುವ…

ಪುತ್ತೂರು: ₹3 ಲಕ್ಷ ಮೌಲ್ಯದ ಚಿನ್ನ, ಹಣವಿದ್ದ ಪರ್ಸ್ ವಾರಸುದಾರರಿಗೆ ಹಸ್ತಾಂತರ; ಆಟೋ ಚಾಲಕನ ಪ್ರಾಮಾಣಿಕತೆಗೆ ಮೆಚ್ಚುಗೆ

ಪುತ್ತೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಕ್ಕ ಪರ್ಸ್‌ವೊಂದನ್ನು ಅದರ ವಾರಸುದಾರರನ್ನು…