ಪ್ರಚಲಿತ

ದ್ವಾರಕಾ ಪ್ರತಿಷ್ಠಾನದಿಂದ ನೆಲಪ್ಪಾಲ್ ಉದ್ಯಾನವನ ದಲ್ಲಿ ‘ನೃತ್ಯೋಲ್ಲಾಸ’ ಉದ್ಘಾಟನೆ

ದ್ವಾರಕಾ ಕಾರ್ಪೊರೇಷನ್ ಪ್ರೈ ಲಿ ಇದರ ಅಂಗ ಸಂಸ್ಥೆಯಾದ ದ್ವಾರಕಾ ಪ್ರತಿಷ್ಠಾನ ಪುತ್ತೂರು ವತಿಯಿಂದ ನೆಲಪ್ಪಾಲ್ ಉದ್ಯಾನವನದಲ್ಲಿ ನೃತ್ಯೋಲ್ಲಾಸ ಕಾರ್ಯಕ್ರಮದ ಉದ್ಘಾಟನೆಯನ್ನು ಫೆ.9ರಂದು ಪುತ್ತೂರು ನಗರಸಭೆ ಸದಸ್ಯ ಜೀವಂಧರ್‌ ಜೈನ್ ಅವರು ಉದ್ಘಾಟಿಸಿ, ಶುಭ ಹಾರೈಸಿದರು

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ದ್ವಾರಕಾ ಕಾರ್ಪೊರೇಷನ್ ಪ್ರೈ ಲಿ ಇದರ ಅಂಗ ಸಂಸ್ಥೆಯಾದ ದ್ವಾರಕಾ ಪ್ರತಿಷ್ಠಾನ ಪುತ್ತೂರು ವತಿಯಿಂದ ನೆಲಪ್ಪಾಲ್ ಉದ್ಯಾನವನದಲ್ಲಿ ನೃತ್ಯೋಲ್ಲಾಸ ಕಾರ್ಯಕ್ರಮದ ಉದ್ಘಾಟನೆಯನ್ನು ಫೆ.9ರಂದು ಪುತ್ತೂರು ನಗರಸಭೆ ಸದಸ್ಯ ಜೀವಂಧರ್‌ ಜೈನ್ ಅವರು ಉದ್ಘಾಟಿಸಿ, ಶುಭ ಹಾರೈಸಿದರು.

akshaya college

ಈ ಸಂದರ್ಭದಲ್ಲಿ ಸಂಸ್ಥೆಯ ಸ್ಥಾಪಕಾಧ್ಯಕ್ಷರಾದ ಗೋಪಾಲಕೃಷ್ಣ ಭಟ್, ಪುತ್ತೂರು ನಗರಸಭೆ ಅಧ್ಯಕ್ಷ ಲೀಲಾವತಿ ಅಣ್ಣು ನಾಯ್ಕ, ಪುತ್ತೂರು ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಸುಂದರ ಪೂಜಾರಿ ಬಡಾವು, ಪುತ್ತೂರು ಮೂಕಾಂಬಿಕಾ ಕಲ್ಚರಲ್ ಅಕಾಡೆಮಿಯ ವಿದ್ವಾನ್ ಗಿರೀಶ್ ಕುಮಾರ್ ಸಭೆಯಲ್ಲಿ ಉಪಸ್ಥಿತರಿದ್ದರು.

ಗಣ್ಯರನ್ನು ಸಂಸ್ಥೆಯ ಸ್ಥಾಪಕಾಧ್ಯಕ್ಷರಾದ ಗೋಪಾಲಕೃಷ್ಣ ಭಟ್ ಕೃತಜ್ಞತಾಪೂರ್ವಕವಾಗಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಗಣ್ಯರು ಮಾತಾಡುತ್ತಾ, ಪುತ್ತೂರು ನಗರದಲ್ಲಿರುವ ಎಲ್ಲಾ ಉದ್ಯಾನವನಗಳಲ್ಲಿ ಇಂತಹ ಕಾರ್ಯಕ್ರಮಗಳು ನಡೆದು ಇನ್ನೂ ಹೆಚ್ಚಿನ ಅಭಿವೃದ್ಧಿ ಆಗಲಿ ಎಂದು ಆಶಿಸುತ್ತಾ ದ್ವಾರಕಾ ಪ್ರತಿಷ್ಠಾನದ ಈ ಕೆಲಸವನ್ನು ಪ್ರಶಂಶಿಸಿದರು.

ಸಭಾ ಕಾರ್ಯಕ್ರಮದ ನಂತರ ಅಂತರಾಷ್ಟ್ರೀಯ ಮಟ್ಟದ ನೃತ್ಯ ಕಲಾವಿದೆ ವಿದುಷಿ ದಿವ್ಯ ಪ್ರಭಾತ್ ಬೆಂಗಳೂರು ಇವರಿಂದ ನೃತ್ಯೋಲ್ಲಾಸ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಕಾರ್ಯಕ್ರಮದ ನಿರೂಪಣೆ ಮತ್ತು ಸ್ವಾಗತ ಭಾಷಣವನ್ನು ಸಂಸ್ಥೆಯ ಸಿಬ್ಬಂದಿಯಾದ ದುರ್ಗಾ ಗಣೇಶ್‌ ನಡೆಸಿಕೊಟ್ಟರು, ಸಂಸ್ಥೆಯ ಅಧ್ಯಕ್ಷರಾದ ಗೋಪಾಲಕೃಷ್ಣ ಭಟ್ ವಂದಿಸಿದರು. ಈ ಸಂದರ್ಭದಲ್ಲಿ ಬಂಧುಗಳು, ಕಲಾಭಿಮಾನಿಗಳು ಮತ್ತು ಸಂಸ್ಥೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಕಾಲೇಜು ವಿದ್ಯಾರ್ಥಿಗಳಿಗೆ 6 ವಿಶೇಷ AI ಸಾಧನ ಉಡುಗೊರೆ ನೀಡಿದ ಗೂಗಲ್ | ಐದು ದೇಶದ ವಿದ್ಯಾರ್ಥಿಗಳಿಗೆ ಉಚಿತ ಚಂದಾ ಆಫರ್!!

ಗೂಗಲ್ ಫಾರ್ ಎಜುಕೇಷನ್ ಎಂಬ ಧ್ಯೇಯದಡಿ ಗೂಗಲ್ ಕಾಲೇಜು ವಿದ್ಯಾರ್ಥಿಗಳಿಗೆ 6 ಹೊಸ ಪರಿಕರಗಳನ್ನು…

ಜುಲೈ 12ರಂದು ರಾಷ್ಟ್ರೀಯ ಲೋಕ ಅದಾಲತ್ | ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಪುತ್ತೂರಿನ ನ್ಯಾಯಾಧೀಶರು

ಪುತ್ತೂರು: ರಾಜೀ ಸಂದಾನದ ಮೂಲಕ ಬಗೆಹರಿಸಿಕೊಳ್ಳಬಹುದಾದ ವ್ಯಾಜ್ಯಗಳನ್ನು ಬಗೆಹರಿಸಿಕೊಳ್ಳಲು…