ಮಂಗಳೂರು: ಕಾರ್ ಸ್ಟ್ರೀಟ್ ಬಳಿ ಕಾರ್ಯಾಚರಿಸುತ್ತಿದ್ದ
ಜುಗಾರಿ ಕಳಕ್ಕೆ ಶುಕ್ರವಾರ ರಾತ್ರಿ ದಾಳಿ ನಡೆಸಿದ ಬಂದರು ಠಾಣೆ ಪೊಲೀಸರು ಇಸ್ಪೀಟ್ ಆಟದಲ್ಲಿ ತೊಡಗಿದ್ದ 12 ಮಂದಿಯನ್ನು ಬಂಧಿಸಿದ್ದಾರೆ.
ಬಂಧಿತರನ್ನು ವಿಠೋಭ ದೇವಸ್ಥಾನದ ಬಳಿಯ ನಾಗರಾಜ್ ಭಂಡಾರಿ ಹಾಗೂ ಆತನ ನಿಕಟವರ್ತಿಗಳು ಎಂದು ತಿಳಿದು ಬಂದಿದೆ.
ಜೂಜಾಟದಲ್ಲಿ ತೊಡಗಿಸಿಕೊಂಡಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ.
ಬಂಧಿತರಿಂದ ನಗದು ವಶಪಡಿಸಿಕೊಳ್ಳಲಾಗಿದೆ. ನಗರದ ಬಂದರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ