ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ದರ್ಶನ್ ಜಾಮೀನು ಪ್ರಶ್ನಿಸಿ ಬೆಂಗಳೂರು ಪೊಲೀಸರು ಸುಪ್ರೀಂಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ. ಅರ್ಜಿ ವಿಚಾರಣೆ ಮಾರ್ಚ್‌ನಲ್ಲಿ ನಡೆಯಲಿರುವ ಕಾರಣ ದರ್ಶನ್‌ರ ಕಾನೂನು ತಂಡ ಈಗಾಗಲೇ ಕಪಿಲ್ ಸಿಬಲ್ ಅವರನ್ನು ಭೇಟಿಯಾಗಿ ಹೈಕೋರ್ಟ್‌ನ ವಾದ-ಪ್ರತಿವಾದ, ಪ್ರಕರಣ ಸಂಪೂರ್ಣ ಮಾಹಿತಿ ನೀಡಿದ್ದು ಕೋರ್ಟ್ ಶುಲ್ಕದ ಬಗ್ಗೆಯೂ ಚರ್ಚೆ ನಡೆದಿದೆ. ಒಂದು ವೇಳೆ ದರ್ಶನ್ ಪರ ವಾದಕ್ಕೆ ಒಪ್ಪಿಗೆ ನೀಡಿದರೆ ಮಾ.18 ರಂದು ಕಪಿಲ್ ಸಿಬಲ್ ನ್ಯಾಯಾಲಯಕ್ಕೆ ಹಾಜರಾಗುವ ಸಾಧ್ಯತೆಯಿದೆ. ಹೈಕೋರ್ಟ್‌ನಲ್ಲಿ ದರ್ಶನ್ ಪರ ಹಿರಿಯ ವಕೀಲ ಸಿ.ವಿ.ನಾಗೇಶ್ ವಾದ ಮಂಡನೆ ಮಾಡಿದ್ದರು.
ಡಿಸೆಂಬರ್ 13 ರಂದು ಪೊಲೀಸರು ಪೂರ್ಣಾವಧಿ ಜಾಮೀನು ನೀಡಿದರ ಕುರಿತು ಸುಪ್ರೀಂಕೋರ್ಟ್‌ಗೆ ಮೇಲ್ಮನವಿಯನ್ನು ಸಲ್ಲಿಸಿದ್ದಾರೆ.