tamanvi
ಅಪರಾಧಪ್ರಚಲಿತ

ಪೋಳ್ಯ: ಚಾಲಕನ ನಿಯಂತ್ರಣ ತಪ್ಪಿ ಕಾರುಗಳ ಮಧ್ಯೆ ಅಪಘಾತ: ಮೂವರಿಗೆ ಗಂಭೀರ ಗಾಯ!!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪೋಳ್ಯ: ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮೂವರು ಗಾಯಗೊಂಡ ಘಟನೆ ಪೋಳ್ಯ ಸಮೀಪದ ಪುಳಿತ್ತಡಿ ಎಂಬಲ್ಲಿ ನಡೆದಿದೆ.

maithri

ಬಿ.ಸಿ.ರೋಡ್ ಸಾಗರ್ ಆಡಿಟೋರಿಯಂ ನಲ್ಲಿ ನಡೆಯುತ್ತಿದ್ದ ಮದುವೆ ಸಮಾರಂಭಕ್ಕೆ ತೆರಳುತ್ತಿದ್ದ ಕೆಮ್ಮಾಯಿ ಸಮೀಪದ ನಿವಾಸಿಗಳಿದ್ದ ಕಾರು ಹಾಗೂ ಮಂಗಳೂರಿನಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ಕಾರಿನ ಮಧ್ಯೆ ಈ ಅಪಘಾತ ಸಂಭವಿಸಿದೆ.

ಮದುವೆಗೆ ತೆರಳುತ್ತಿದ್ದ ಕಾರಿನ ಮುಂಭಾಗದಲ್ಲಿ ಹೂವಿನ ಬೊಕ್ಕೆಯಿಂದ ಅಲಂಕಾರ ಮಾಡಿದ್ದು, ಗಾಳಿಗೆ ಹೂವಿನ ಬೊಕ್ಕೆ ಚಾಲಕನ ಸೈಡಿನ ಗಾಜಿಗೆ ಬಡಿದ ಹಿನ್ನೆಲೆಯಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ವಿರುದ್ಧ ದಿಕ್ಕಿಗೆ ಸಂಚರಿಸಿ ಮುಂಭಾಗದಲ್ಲಿ ಬರುತ್ತಿದ್ದ ಇನ್ನೊಂದು ಕಾರಿಗೆ ಡಿಕ್ಕಿಯಾಗಿದೆ.

ಡಿಕ್ಕಿಯ ರಭಸಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಕಾರಿನ ಮುಂಭಾಗ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಮೂವರಿಗೆ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಿಂದಾಗಿ ಅಲ್ಪ ಹೊತ್ತು ರಸ್ತೆ ಸಂಚಾರ ವ್ಯತ್ಯಯವಾಗಿದ್ದು ಪುತ್ತೂರು ಸಂಚಾರಿ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ವಾಹನಗಳನ್ನು ತೆರವು ಮಾಡಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ನಿಂತ್ರೆ ನಿಂತ ಹಾಗೇ – ಬೆಲ್ ಬಾಟಂ ಸಿನಿಮಾ ಮಾದರಿಯ ಡ್ರಗ್!! ಇಬ್ಬರು ಯುವಕರ ವಿಚಿತ್ರ ವರ್ತನೆಗೆ ಸಾರ್ವಜನಿಕರ ಆತಂಕ!

ರಾಜಸ್ಥಾನ: ಶ್ರೀ ಗಂಗಾನಗರದಲ್ಲಿ ಇಬ್ಬರು ಯುವಕರು ರಸ್ತೆಬದಿಯಲ್ಲಿ ಯಾವುದೇ ಚಲನೆಯಿಲ್ಲದೆ…

1 of 150