Gl jewellers
ಪ್ರಚಲಿತ

ರೈಲು ಡಿಕ್ಕಿ:ಮೂವರ ಸಾವು!!

ಸಂಜೆ ಕೆಲಸ ಮುಗಿಸಿ ಮನೆಗೆ ಬರುತ್ತಿದ್ದಾಗ ರೀಲ್ಸ್ ಮಾಡಲು ಮುಂದಾಗಿದ್ದಾರೆ. ರೈಲು ಡಿಕ್ಕಿಯಾದ ರಭಸಕ್ಕೆ ಮೃತದೇಹಗಳು ಛಿದ್ರ ಛಿದ್ರವಾಗಿ ಬಿದ್ದಿವೆ.

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ರೀಲ್ಸ್ ಮಾಡುವಾಗ ರೈಲು ಡಿಕ್ಕಿಯಾಗಿ ಮೂವರು

ಮೃತಪಟ್ಟ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಹೊರವಲಯದ ಸಿದ್ದನಾಯಕನಹಳ್ಳಿ ರೈಲ್ವೇ ಹಳಿ ಬಳಿ ನಡೆದಿದೆ.

ಉತ್ತರ ಪ್ರದೇಶ ಮೂಲದ ರಾಹುಲ್ (18) ಬಿಕೇಶ್ (20) ಲಲನ್ (24) ಮೃತಪಟ್ಟವರು. ಮೂವರೂ ಕಾರ್ಪೆಂಟರ್ ಆಗಿ ಕೆಲಸ ಮಾಡುತ್ತಿದ್ದರು.

ಸಂಜೆ ಕೆಲಸ ಮುಗಿಸಿ ಮನೆಗೆ ಬರುತ್ತಿದ್ದಾಗ ರೀಲ್ಸ್ ಮಾಡಲು ಮುಂದಾಗಿದ್ದಾರೆ. ರೈಲು ಡಿಕ್ಕಿಯಾದ ರಭಸಕ್ಕೆ ಮೃತದೇಹಗಳು ಛಿದ್ರ ಛಿದ್ರವಾಗಿ ಬಿದ್ದಿವೆ.

ಸತ್ಯಸಾಯಿ ಪ್ಯಾಸೆಂಜರ್ ರೈಲು ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಯಶವಂತಪುರ ರೈಲ್ವೇ ಪೊಲೀಸರು ಪರಿಶೀಲನೆ ನಡೆಸಿ ಮೃತದೇಹಗಳನ್ನು ವಶಕ್ಕೆ ಪಡೆದಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

Related Posts