Thursday, November 21
Share News

ಪುತ್ತೂರು: ಮಂಗಳೂರು ಕೃಷಿಕರ ಸಹಕಾರಿ ಸಂಘ ಮಂಗಳೂರು ಇವರಿಂದ ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಹಯೋಗದಲ್ಲಿ ಸಹಕಾರ ರತ್ನ ಡಾ। ಎಂ ಎನ್ ರಾಜೇಂದ್ರ ಕುಮಾರ್ ಇವರ ಸಹಕಾರದೊಂದಿಗೆ ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆವರಣದಲ್ಲಿ ಅಡಿಕೆ ಖರೀದಿ ಕೇಂದ್ರದ ಉದ್ಘಾಟನೆ ನಡೆಯಲಿದೆ ಎಂದು ಮಾಸ್ ಲಿಮಿಟೆಡ್ ನ ಅಧ್ಯಕ್ಷ ಕೆ ಸೀತಾರಾಮ ರೈ ಸವಣೂರು

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸಕ ಅಶೋಕ್ ಕುಮಾರ್ ರೈ ಅವರು ಅಡಿಕೆ ಕೇಂದ್ರವನ್ನು ಉದ್ಘಾಟಿಸಲಿದ್ದಾರೆ. ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೋಟ್ಟು ಮತ್ತು ಎಸ್ ಬಿ ಜಯರಾಮ ರೈ ಮತ್ತು ಅರಿಯಡ್ಕ ಗ್ರಾ.ಪಂ ಅಧ್ಯಕ್ಷ ಸಂತೋಷ್‌ ಮಣಿಯಾಣಿ ಅತಿಥಿಯಾಗಿ ಭಾಗವಹಿಸಲಿದ್ದಾರೆ.

ಖರೀದಿ ಮಾಡಿದ ಹೆಚ್ಚು ಅಡಿಕೆಗಳನ್ನು ಸಂಸ್ಕರಣೆ ಮಾಡುವ ಬಗ್ಗೆ ಈಗಾಗಲೇ ಇರುವ ನಮ್ಮ ಸುಳ್ಯ ಶಾಖೆಯಲ್ಲಿ ಎಪಿಎಂಸಿ ಯವರಿಂದ ಒಂದು ಹೆಚ್ಚುವರಿ ಗೋದಾಮು ಪಡೆದು ಒಂದು ಸುಸಜ್ಜಿತ ಅಡಿಕೆ ಸಂಸ್ಕರಣೆ ವಿಭಾಗ ಅತಿ ಶೀಘ್ರದಲ್ಲಿ ಪ್ರಾರಂಭಿಸಲಿದ್ದೇವೆ ಎಂದು ಸೀತಾರಾಮ ರೈ ಸವಣೂರು ಹೇಳಿದರು.

ಅಡಿಕೆ ಖರೀದಿ ಕೇಂದ್ರ ಉದ್ಘಾಟನೆಯ ದಿನ ಮಾರುಕಟ್ಟೆ ದರಕ್ಕಿಂತ ಅಡಿಕೆ ಖರೀದಿಯಲ್ಲಿ ರೂ.2 ಹೆಚ್ಚಳ ನೀಡಲಾಗುವುದು ಎಂದು ಕೆ ಸೀತಾರಾಮ ರೈ ಸವಣೂರು ಅವರು ತಿಳಿಸಿದ್ದಾರೆ.

ಪತ್ರಿಕಾಗೋಷ್ಟಿಯಲ್ಲಿ ಕಾವು ಸಿ ಎ ಬ್ಯಾಂಕ್ ಅಧ್ಯಕ್ಷ ನನ್ಯ ಅಚ್ಚುತ ಮೂಡೆತ್ತಾಯ, ಮಾಸ್ ಸಂಸ್ಥೆಯ ನಿರ್ದೇಶಕ ರಾಜಾರಾಮ ಶೆಟ್ಟಿ ಕೋಲ್ಪೆಗುತ್ತು, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಟಿ ಮಹಾಬಲೇಶ್ವರ ಭಟ್, ಮುಖ್ಯ ಮಾರುಕಟ್ಟೆ ಅಧಿಕಾರಿ ಕೆ ಎಂ ಲೋಕೇಶ್ ಉಪಸ್ಥಿತರಿದ್ದರು.


Share News

Comments are closed.

Exit mobile version