Share News

ವಿಟ್ಲ: ವೀರಕಂಬ ಗ್ರಾಮದ ಬಾಯಿಲ ನಿವಾಸಿ ಪದ್ಮನಾಭ ನಾಯ್ಕ ಅವರ ಪುತ್ರ ಧನರಾಜ್( 28) ನಾಪತ್ತೆಯಾದ ಆಟೋ ಚಾಲಕ ನಾಪತ್ತೆಯಾಗಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನವೆಂಬರ್ 28 ರಂದು ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಬಾಯಿಲದಿಂದ ಬೆಳಿಗ್ಗೆ 8.30 ಗಂಟೆಗೆ ಅಟೋರಿಕ್ಷಾವನ್ನು ತೆಗೆದುಕೊಂಡು ಬಾಡಿಗೆಗೆ ಹೋಗುತ್ತೇನೆಂದು ಹೇಳಿ ಹೋದವನು ನವೆಂಬರ್ 3 ರವರೆಗೂ ಮನೆಗೆ ಬಂದಿರುವುದಿಲ್ಲ. ಈ ಬಗ್ಗೆ ಸಂಬಂದಿಕರಲ್ಲಿ, ನೆರೆಕರೆಯವರಲ್ಲಿ ಹಾಗೂ ಸ್ನೇಹಿತರಲ್ಲಿ ವಿಚಾರಿಸಲಾಗಿ ಎಲ್ಲಿಯೂ ಪತ್ತೆಯಾಗದೆ ಕಾಣೆಯಾಗಿರುತ್ತಾನೆ. ಧನರಾಜ್‌ನ ರಿಕ್ಷಾ ಮಾತ್ರ ಉಪ್ಪಿನಂಗಡಿಯಲ್ಲಿದ್ದು ಆತನ ಮೊಬೈಲ್ ನಂಬ್ರ 9008117093ನೇಯದ್ದು ಸ್ವೀಚ್‌ ಆಫ್ ಆಗಿರುತ್ತದೆ. ಮನೆಗೂ ಬಾರದೆ ಸಂಭಂದಿಕರ ಹಾಗೂ ಸ್ನೇಹಿತರ ಮನೆಗೂ ಹೋಗದೆ ಕಾಣೆಯಾದ ಧನರಾಜ್‌ನ ಪತ್ತೆಗಾಗಿ  ಹುಡುಕಾಡುತಿದ್ದಾರೆ ಮನೆಯವರು.


Share News

Comments are closed.

Exit mobile version