Share News

ಪುತ್ತೂರು: ಬಲ್ನಾಡು ವಲಯದ ಬಿಳಿಯೂರುಕಟ್ಟೆ ಒಕ್ಕೂಟದಲ್ಲಿ ವಿಶ್ವ ಮಾದಕ ವಸ್ತು ವಿರೋಧಿ ದಿನಾಚರಣೆಯನ್ನು ಆಚರಿಸಲಾಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಸರಕಾರಿ ಆಸ್ಪತ್ರೆಯ ನಿವೃತ್ತ ಮೇಲ್ವಿಚಾರಕ ಜಯರಾಮ ಪೂಜಾರಿ ಅವರು ಮಾದಕ ವಸ್ತುಗಳಿಂದ ಸಮಾಜ ಮತ್ತು ಯುವಜನತೆ ಮೇಲಾಗುವ ದುಷ್ಪರಿಣಾಮಗಳ ಬಗ್ಗೆ ಮಾಹಿತಿ ನೀಡಿದರು.

ಮುಖ್ಯ ಅತಿಥಿಯಾಗಿದ್ದ ವಲಯ ಜನಜಾಗೃತಿ ವೇದಿಕೆ ಅಧ್ಯಕ್ಷ ಪ್ರವೀಣ್ ಚಂದ್ರ ಆಳ್ವ ಮಾತನಾಡಿ, ಮಾದಕವಸ್ತುಗಳಿಂದ ಯುವಜನತೆ ದೂರವಿರುವ ಬಗ್ಗೆ ಮಾಹಿತಿ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಒಕ್ಕೂಟದ ಅಧ್ಯಕ್ಷ ಸದಾನಂದ ಅಂಚನ್ ವಹಿಸಿದ್ದರು.

ಕಾರ್ಯಕ್ರಮದಲ್ಲಿ ವಲಯದ ಮೇಲ್ವಿಚಾರಕರ ಪ್ರಶಾಂತ್ ಕುಮಾರ್, ಕೃಷಿ ಮೇಲ್ವಿಚಾರಕ ಶಿವರಂಜನ್, ಒಕ್ಕೂಟದ ಪದಾಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

ಸೇವಾ ಪ್ರತಿನಿಧಿ ಇಗ್ನೇಶಿಯಸ್ ಡಿ ಸೋಜಾ ಕಾರ್ಯಕ್ರಮ ನಿರೂಪಿಸಿ, ಒಕ್ಕೂಟದ ಕಾರ್ಯದರ್ಶಿ ಸುಮಿತ್ರ ಸ್ವಾಗತಿಸಿ, ಕೋಶಾಧಿಕಾರಿ ಸೌಮ್ಯ ವಂದಿಸಿದರು.


Share News

Comments are closed.

Exit mobile version