ಬೆಂಗಳೂರು: ರಾಜ್ಯ ಪಠ್ಯಕ್ರಮದ ಸರಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ 5, 8, 9 ಹಾಗೂ 11ನೇ ತರಗತಿಗಳಿಗೆ, ರಾಜ್ಯಮಟ್ಟದ ಬೋರ್ಡ್ ಪರೀಕ್ಷೆ ನಡೆಸುವ ಸಂಬಂಧ ರಾಜ್ಯ ಸರಕಾರ ಹೊರಡಿಸಿದ್ದ ಸುತ್ತೋಲೆ ಯನ್ನು ರದ್ದುಪಡಿಸಿದ್ದ ಹೈಕೋರ್ಟ್ ಏಕಸದಸ್ಯ ನ್ಯಾಯಪೀಠದ ಆದೇಶವನ್ನು ಗುರುವಾರ ವಿಭಾಗೀಯ ಪೀಠ ರದ್ದು ಪಡಿಸಿ ಮಧ್ಯಂತರ ಆದೇಶ ನೀಡಿದೆ. ಇದರಿಂದಾಗಿ ಪರೀಕ್ಷೆಗಳು ನಿಗದಿಯಂತೆ ನಡೆಯಲಿವೆ.
ರಾಜ್ಯಮಟ್ಟದ ಬೋರ್ಡ್ ಪರೀಕ್ಷೆ ನಡೆಸುವ ಸಂಬಂಧ ರಾಜ್ಯ ಸರಕಾರ ಹೊರಡಿಸಿದ್ದ ಸುತ್ತೋಲೆ ಯನ್ನು ಹೈಕೋರ್ಟ್ ರದ್ದುಪಡಿಸಿತ್ತು.ಇದು ಬೋರ್ಡ್ ಪರೀಕ್ಷೆ ನಡೆಸಲು ಮುಂದಾಗಿದ್ದ ರಾಜ್ಯ ಸರಕಾರದ ಪ್ರಯತ್ನಕ್ಕೆ ಹಿನ್ನಡೆ ಎನ್ನಲಾಗಿತ್ತು.
ಏಕಸದಸ್ಯ ನ್ಯಾಯಪೀಠದ ಆದೇಶ ಪ್ರಶ್ನಿಸಿ, ರಾಜ್ಯ ಸರಕಾರ ಗುರುವಾರ (ಮಾ. 7) ಮೇಲ್ಮನವಿ ಸಲ್ಲಿಸಲಿತ್ತು. ಅರ್ಜಿ ವಿಚಾರಣೆ ನಡೆಸಿದ ವಿಭಾಗೀಯ ಪೀಠ ಏಕಸದಸ್ಯ ನ್ಯಾಯಪೀಠದ ಆದೇಶವನ್ನು ರದ್ದು ಮಾಡಿದೆ.
11ನೇ ತರಗತಿಯ (ಪ್ರಥಮ ಪಿಯು) ಅಂತಿಮ ಪರೀಕ್ಷೆ ಪೂರ್ಣಗೊಂಡಿದ್ದು, ಉಳಿದ ತರಗತಿಗಳ ಬೋರ್ಡ್ ಪರೀಕ್ಷೆ ಮಾ. 11ರಿಂದ ಆರಂಭ ಗೊಳ್ಳಲಿದೆ.