Share News

ಪುತ್ತೂರು: ಸಣ್ಣ ಮಟ್ಟದ ಮಣ್ಣು ತಪಾಸಣೆ ಯಂತ್ರವನ್ನು ಕ್ಯಾಂಪ್ಕೊ ಖರೀದಿಸಿದ್ದು, ಮೊಬೈಲ್ ಕೇಂದ್ರವನ್ನು ಪುತ್ತೂರಿನಲ್ಲಿ ಸ್ಥಾಪಿಸಲಾಗುವುದು.1.45 ಲಕ್ಷ ಸದಸ್ಯರಿದ್ದು, ಎಲ್ಲರ ಹಿತಕಾಯುವ ನಿಟ್ಟಿನಲ್ಲಿ ಆಡಳಿತ ಮಂಡಳಿ ಬದ್ಧವಾಗಿದೆ ಎಂದು ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ಹೇಳಿದರು.

ಮಹಮಾಯಾ ದೇವಸ್ಥಾನದ ಸಭಾಂಗಣದಲ್ಲಿ ಕೇಂದ್ರ ಅಡಿಕೆ ಮತ್ತು ಕೊಕ್ಕೋ ಮಾರಾಟ ಮತ್ತು ಪರಿಷ್ಕರಣ ಸಹಕಾರಿ (ಕ್ಯಾಂಪ್ಕೊ) ಪುತ್ತೂರು ನವಿಕೃತ ಕಚೇರಿ ಉದ್ಘಾಟನೆ ಮತ್ತು ಸದಸ್ಯ ಬೆಳೆಗಾರರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮನುಷ್ಯ ಆಕ್ರಮಣದಿಂದ ಕಾಡು ಪ್ರಾಣಿಗಳು ನಾಡಿನತ್ತ ಬರುವುದು ಹೆಚ್ಚಾಗುತ್ತಿದೆ. ಮಂಗನಿಗೆ ಮಂಕಿ ಪಾರ್ಕ್, ಸಂತಾನ ಹರಣ ಚಿಕಿತ್ಸೆ ಮಾಡುವ ಘೋಷಣೆ ಸರ್ಕಾರದಿಂದ ನಡೆದಿದ್ದು, ಕಾರ್ಯಗತವಾಗಿಲ್ಲ. ಕೋತಿಯನ್ನು ಅಂಡಮಾನ್ ದ್ವೀಪಕ್ಕೆ ಬಿಟ್ಟು ಬರುವಂತೆ ಸರ್ಕಾರಕ್ಕೆ ಮನವಿ ನೀಡುವ ಕಾರ್ಯವಾಗಿದೆ. ರೈತರ ಸಮಸ್ಯೆಗೆ ಸ್ಪಂದಿಸುವ ನಿಟ್ಟಿನಲ್ಲಿ ಸಿಪಿಸಿಆರ್‌ಐ ನಿರ್ದೇಶಕರಲ್ಲಿ ಈಗಾಗಲೇ ಮಾತುಕತೆ ಮಾಡಲಾಗಿದೆ. ಕೊಬ್ಬರಿಯ ಜತೆಗೆ ತೆಂಗಿನ ಕಾಯಿ ಖರೀದಿಸುವ ಚಿಂತನೆಯಿದೆ ಎಂದು ತಿಳಿಸಿದರು.

ಶಾಖೆಯನ್ನು ಹಿರಿಯ ಸದಸ್ಯ ಬೆಳೆಗಾರರಾದ ಎನ್. ಎಸ್. ಹರಿಹರ್ ರಾವ್ ಕೊಡಿಪ್ಪಾಡಿ, ಸುರೇಶ್ ಬಲ್ನಾಡು, ಬಿ. ಟಿ. ನಾರಾಯಣ ಭಟ್, ಕೆ. ಟಿ. ಭಟ್ ಉದ್ಘಾಟಿಸಿದರು.

ನಿರ್ದೇಶಕರಾದ ಎಸ್. ಆರ್. ಸತೀಶ್ಚಂದ್ರ, ಕೃಷ್ಣ ಪ್ರಸಾದ್ ಮಡ್ತಿಲ, ಕೆ. ಬಾಲಕೃಷ್ಣ ರೈ, ಜಯರಾಮ ಸರಳಾಯ, ಜಯಪ್ರಕಾಶ್ ನಾರಾಯಣ ಟಿ. ಕೆ., ರಾಧಾಕೃಷ್ಣನ್ ಕೆ., ಸತ್ಯನಾರಾಯಣ ಪ್ರಸಾದ್, ಸುರೇಶ್ ಕುಮಾರ್ ಶೆಟ್ಟಿ ಪಿ., ಜನರಲ್ ಮ್ಯಾನೇಜರ್ ರೇಶ್ಮಾ ಮಲ್ಯಾ, ಡಿ.ಜಿ.ಎಂ. ಪರಮೇಶ್ವರ್, ಮಾರುಕಟ್ಟೆ ವಿಭಾಗ ಮುಖ್ಯಸ್ಥ ಗೋವಿಂದ ಭಟ್, ಎ ಆರ್ ಡಿ ಎಫ್ ವಿಜ್ಞಾನಿ ಕೇಶವ ಭಟ್ ಮತ್ತಿತರರು ಉಪಸ್ಥಿತರಿದ್ದರು.

ನಿರ್ದೇಶಕ ರಾಘವೇಂದ್ರ ಭಟ್ ಕೆದಿಲ ಸ್ವಾಗತಿಸಿದರು. ವ್ಯವಸ್ಥಾಪಕ ನಿರ್ದೇಶಕ ಡಾ. ಬಿ. ವಿ. ಸತ್ಯನಾರಾಯಣ ಪ್ರಸ್ತಾವನೆಗೈದರು. ಉಪಾಧ್ಯಕ್ಷ ಶಂಕರನಾರಾಯಣ ಭಟ್ ಖಂಡಿಗೆ ವಂದಿಸಿದರು. ನಿತಿನ್ ಕೊಟ್ಯಾನ್ ಕಾರ್ಯಕ್ರಮ ನಿರೂಪಿಸಿದರು.


Share News

Comments are closed.

Exit mobile version