ಪೆರಿಯಶಾಂತಿ ಸಮೀಪ ವಾಲ್ತಾಜೆ ಸೇತುವೆ ಬಳಿ ಕಾರು ಹಾಗೂ ಆಟೋ ರಿಕ್ಷಾವೊಂದರ ನಡುವೆ ಡಿಕ್ಕಿ ಸಂಭವಿಸಿ ಆಟೋ ರಿಕ್ಷಾ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ಎ.20ರಂದು ಸಂಜೆ ನಡೆದಿದೆ.
ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ನಿನ್ನೆ ಸಂಜೆ ಘಟನೆ ನಡೆದಿದೆ. ಡಿಕ್ಕಿಯ ರಬ್ಬಸಕ್ಕೆ ಟಿಟಿ ವಾಹನದ ಟಾಪ್ ನಚ್ಚುಗುಜ್ಜಾಗಿದೆ. ಸಣ್ಣ ಪುಟ್ಟ ಗಾಯಗಳೊಂದಿಗೆ ಟಿಟಿ ಚಾಲಕ ಪಾರಾಗಿದ್ದಾರೆ.
ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮೇಲೆ ದುಷ್ಕರ್ಮಿಗಳು ಶೂಟೌಟ್ ನಡೆಸಿರುವ ಘಟನೆ ನಡೆದಿದೆ. ಬಿಡದಿಯಲ್ಲಿರುವ ಮುತ್ತಪ್ಪ ರೈ ಅವರ ನಿವಾಸದ ಮುಂಭಾಗದ ಕಾಂಪೌಂಡ್ ಬಳಿ ಈ ದಾಳಿ ನಡೆದಿದ್ದು, ರಿಕ್ಕಿ ರೈ ಅವರನ್ನು ಗುರಿಯಾಗಿಸಿಕೊಂಡು ಮೂರು ಸುತ್ತು ಗುಂಡುಗಳನ್ನು ಹಾರಿಸಲಾಗಿದೆ.
ಎನ್‌ಐಟಿಕೆ ಬೀಚ್‌ನಲ್ಲಿ ನೀರಾಟಕ್ಕೆ ಇಳಿದ ಮುಂಬೈ ಮೂಲದ ಇಬ್ಬರು ವಿದ್ಯಾರ್ಥಿಗಳಲ್ಲಿ ಓರ್ವ ನಾಪತ್ತೆಯಾಗಿದ್ದಾನೆ. ಮತ್ತೋರ್ವನನ್ನು ಲೈಫ್ ಗಾರ್ಡ್ ಸಮುದ್ರದಿಂದ ಮೇಲಕ್ಕೆತ್ತಿದರೂ ದುರಾದೃಷ್ಟವಶಾತ್ ಆತ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.
ಮೇಕೆಯನ್ನು ಬಲಿ ನೀಡಲು ತೆಗೆದುಕೊಂಡು ಹೋಗುತ್ತಿದ್ದ ವೇಳೆ ಕಾರು ಅಪಘಾತಕ್ಕೀಡಾಗಿದ್ದು, ಕಾರಿನಲ್ಲಿದ್ದವರೆಲ್ಲರೂ ಸಾವನ್ನಪ್ಪಿದ್ದು ಮೇಕೆ ಮಾತ್ರ ಬದುಕುಳಿದ ವಿಚಿತ್ರ ಘಟನೆಯೊಂದು ಮಧ್ಯಪ್ರದೇಶದ ಜಬಲ್ಪುರದಲ್ಲಿ ನಡೆದಿದೆ.
ಕುಂದಾಪುರ ಡಿಪೋಗೆ ಸೇರಿದ ಕೆಎಸ್‌ಆರ್ ಟಿಸಿ ಬಸ್ಸು ಧರ್ಮಸ್ಥಳದಿಂದ ಬೆಂಗಳೂರಿಗೆ ಹೋಗುತ್ತಿದ್ದ ವೇಳೆ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಗ್ರಾಮದ ಅಡ್ಡಹೊಳೆಯಲ್ಲಿ ಡಿವೈಡರ್ ಗೆ ಡಿಕ್ಕಿಯಾಗಿದೆ. ಎ.14ರಂದು ರಾತ್ರಿ 9.30ರ ವೇಳೆಗೆ ನಡೆದಿದೆ.
ಪೋಷಕರ ಜೊತೆ ಅಜ್ಜಿ ಮನೆಗೆ ಬಂದಿದ್ದ ಸಹೋದರಿಯರು ಆಟವಾಡುತ್ತಾ ಪೋಷಕರ ಕಣ್ಣು ತಪ್ಪಿಸಿ ಕಾರಿನೊಳಗೆ ಕುಳಿತು ಉಸಿರುಗಟ್ಟಿ ಮೃತಪಟ್ಟಿರುವ ಆಘಾತಕಾರಿ ಘಟನೆಯೊಂದು ತೆಲಂಗಾಣದ ರಂಗಾ ರೆಡ್ಡಿ ಜಿಲ್ಲೆಯಲ್ಲಿ ಸೋಮವಾರ(ಏ.14) ನಡೆದಿದೆ. ತನ್ಮಯಿಶ್ರೀ (5) ಮತ್ತು ಅಭಿನಯಶ್ರೀ (4) ಮೃತಪಟ್ಟ ಸಹೋದರಿಯರು. ಸೋಮವಾರ…
ಉಕ್ರೇನ್‌ನಲ್ಲಿ ಭಾರತೀಯ ಔಷಧ ಕಂಪನಿಯ ಗೋದಾಮಿನ ಮೇಲೆ ರಷ್ಯಾದ ಕ್ಷಿಪಣಿ ದಾಳಿ ಮಾಡಿದೆ ಎಂದು ಉಕ್ರೇನ್ ಶನಿವಾರ (ಏ.12) ತಿಳಿಸಿದೆ. ರಷ್ಯಾ ಉದ್ದೇಶಪೂರ್ವಕವಾಗಿ ಉಕ್ರೇನ್‌ನಲ್ಲಿರುವ ಭಾರತೀಯ ವ್ಯವಹಾರಗಳನ್ನು ಗುರಿಯಾಗಿಸಿಕೊಂಡಿದೆ ಎಂದು ಭಾರತದಲ್ಲಿನ ಉಕ್ರೇನ್ ರಾಯಭಾರ ಕಚೇರಿ ಆರೋಪಿಸಿದೆ.
ಬೆಳ್ತಂಗಡಿ: ನಾರಾವಿ ಕುತ್ತೂರಿನಲ್ಲಿ ಸಂಭವಿಸಿದ ಭೀಕರ ಬೈಕ್ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಶುಕ್ರವಾರ ತಡರಾತ್ರಿ ಸಂಭವಿಸಿದೆ. ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದವರನ್ನು ಪ್ರಶಾಂತ್ ಹಾಗೂ ದಿನೇಶ್ ಎನ್ನಲಾಗಿದೆ. ಕುತ್ತೂರು ಪುರುಷ ಗುಡ್ಡೆ ಸಮೀಪ ಕೊಕ್ರಾಡಿ ನಾರಾವಿ ರಸ್ತೆಯಲ್ಲಿ…
ರಾಷ್ಟ್ರೀಯ ಹೆದ್ದಾರಿ 66ರ ಕೆಪಿಟಿ ಬಳಿ ಮಂಗಳವಾರ ಮುಂಜಾನೆ 2.50ರ ವೇಳೆ ನಡೆದ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಓರ್ವ ಗಾಯಗೊಂಡಿದ್ದಾನೆ.
Welcome, Login to your account.
Welcome, Create your new account
A password will be e-mailed to you.