Gl jewellers

ಅಪರಾಧ

ಸೈಬ‌ರ್ ಅಪರಾಧ:  549 ಮಂದಿ ಮ್ಯಾನ್ಮಾರ್ ನಿಂದ  ಭಾರತಕ್ಕೆ ವಾಪಸ್‌!

ಮ್ಯಾನ್ಮಾರ್ ಮತ್ತು ಥಾಯ್ಲೆಂಡ್‌ ಗಡಿಯಲ್ಲಿ ಸೈಬ‌ರ್ ಅಪರಾಧಗಳಿಂದ ರಕ್ಷಿಸಿದ್ದ 549 ಮಂದಿ ಭಾರತೀಯರನ್ನು ಬುಧವಾರ ಮರಳಿ ಕರೆತರಲಾಗಿದೆ. 2 ಮಿಲಿಟರಿ ವಿಮಾನಗಳನ್ನು ಬಳಸಿ ಇವರನ್ನು ಭಾರತಕ್ಕೆ ಕರೆತರಲಾಗಿದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.

ಕರ್ನಾಟಕ ಬಿಜೆಪಿ ಮಹಿಳಾ ಜನರಲ್ ಸೆಕ್ರೆಟರಿ ಆತ್ಮಹತ್ಯೆ!

ಬೆಂಗಳೂರು: ಕರ್ನಾಟಕ ಬಿಜೆಪಿ ಜನರಲ್ ಸೆಕ್ರೆಟರಿ ಮಂಜುಳಾ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಾರ್ಚ್ 11 ಬೆಂಗಳೂರಿನ ಮತ್ತಿಕೆರೆಯ ನಿವಾಸದಲ್ಲೇ ಮಂಜುಳಾ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆಯಲ್ಲಿ ಡೆತ್ ನೋಟ್ ಸಹ ಪತ್ತೆಯಾಗಿದ್ದು, ನನ್ನ ಸಾವಿಗೆ ನಾನೇ ಕಾರಣ ಎಂದು…

ಪರೀಕ್ಷೆ ಬರೆಯಲು ತೆರಳುತ್ತಿದ್ದ ವಿದ್ಯಾರ್ಥಿಯ ಬೆರಳು ಕತ್ತರಿಸಿದ ದುಷ್ಕರ್ಮಿಗಳು!

ಪರೀಕ್ಷೆ ಬರೆಯಲು ತೆರಳುತ್ತಿದ್ದ ದಲಿತ ವಿದ್ಯಾರ್ಥಿಯೊಬ್ಬನನ್ನು ದುಷ್ಕರ್ಮಿಗಳ ತಂಡ ಒಂದು ತಡೆದು ಆತನ ಮೇಲೆ ಹಲ್ಲೆ ಮಾಡಿ ಬೆರಳನ್ನು ಕತ್ತರಿಸಿರುವಂತಹ ಕ್ರೂರ ಪ್ರಕರಣ ಒಂದು ಬೆಳಕಿಗೆ ಬಂದಿದೆ.

ಪುತ್ತೂರು: ದಾರಿ ಕೇಳುವ ನೆಪದಲ್ಲಿ ಚಿನ್ನ ಕಿತ್ತು ಪರಾರಿ!

ಪುತ್ತೂರು:ದಾರಿ ಕೇಳುವ ನೆಪದಲ್ಲಿ ಬಂದು ಚಿನ್ನದ ಉಂಗುರ ಎಳೆದು ಪರಾರಿಯಾದ ಘಟನೆ ಪುತ್ತೂರಿನ ರಾಗಿದಕುಮೇರ್ ಬಳಿಯ ಅಂದ್ರಟ್ಟ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ ಬಂದ ಅಪರಿಚಿತ ವ್ಯಕ್ತಿ ದಾರಿ ಕೇಳಿದ್ದಾನೆ ಈ ವೇಳೆ ದಾರಿ ಹೇಳಲು ಬಂದ ಮನೆಯವರ ಕೈಯಲ್ಲಿದ್ದ ಉಂಗುರವನ್ನು ಕಿತ್ತು ಬೈಕ್‌ ನಲ್ಲಿ…

ಉಪ್ಪಿನಂಗಡಿ: ನೇತ್ರಾವತಿಯಲ್ಲಿ ಆಟೋ ಚಾಲಕ ಗಗನ್ ಶವ ಪತ್ತೆ!

 ಆಟೋ ರಿಕ್ಷಾದಲ್ಲಿ ಬಾಡಿಗೆಗೆ ಹೋಗುತ್ತಿದ್ದೇನೆಂದು ಮನೆಯವರಿಗೆ ಹೇಳಿ ಹೋದ ಗೋಳಿತೊಟ್ಟುವಿನ ಆಟೋ ರಿಕ್ಷಾ ಚಾಲಕ ನಾಪತ್ತೆಯಾಗಿ ಇದೀಗ ಶವವಾಗಿ ಪತ್ತೆಯಾಗಿದ್ದಾನೆ.

ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ! ಲಾರಿ – ಪೈಪ್ ನಡುವೆ ಸಿಲುಕಿಕೊಂಡು, ಇಬ್ಬರು ಮೃತ್ಯು!

ಚಾಲಕನ ನಿಯಂತ್ರಣ ತಪ್ಪಿ ಕಬ್ಬಿಣದ ಪೈಪ್ ತುಂಬಿದ ಈಶರ್ ಲಾರಿ ಒಂದು ತಿರುವು ರಸ್ತೆಯಲ್ಲಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಲಾರಿ ಮಗುಚಿ ಬಿದ್ದು, ಇಬ್ಬರು ಮೃತಪಟ್ಟ ಘಟನೆ ಸಕಲೇಶಪುರ ತಾಲ್ಲೂಕಿನ ವಳಲಹಳ್ಳಿ ಗ್ರಾಮ ಪಂಚಾಯತ್‌ನ ಮೊಗನಹಳ್ಳಿ ಸಮೀಪ ನಡೆದಿದೆ.

ಬಸ್ – ದ್ವಿಚಕ್ರ ವಾಹನ ನಡುವೆ ಅಪಘಾತ; ಸವಾರ ವಿನ್ಯಾಸ್ ಮೃತ್ಯು!

ಉಪ್ಪಿನಂಗಡಿ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕೈಕಂಬ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವೀಚಕ್ರ ವಾಹನ ನಡುವೆ ಅಪಘಾತ ಸಂಭವಿಸಿ ಸ್ಕೂಟಿ ಸವಾರ ಮೃತಪಟ್ಟ ಘಟನೆ ಸೋಮವಾರ ನಡೆದಿದೆ.

ನಟಿ ಬಂಧನದ ಬೆನ್ನಲ್ಲೇ ಡಿಜಿಪಿ ರಾಮಚಂದ್ರ ರಾವ್ ವಿರುದ್ಧ ತನಿಖೆಗೆ ಆದೇಶ!

ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿ ಇದೀಗ ನಟಿ ರನ್ಯಾ ರಾವ್ ಮಲತಂದೆ ಡಿಜಿಪಿ ರಾಮಚಂದ್ರ ರಾವ್ ಅವರು ವಿಮಾನ ನಿಲ್ದಾಣದಲ್ಲಿ ನಟಿ ರನ್ಯಾಗೆ ಪ್ರೋಟೋಕಾಲ್ ನೀಡಿದ ಬಗ್ಗೆ ತನಿಖೆ ನಡೆಸಿ, ಒಂದು ವಾರದ ಒಳಗೆ ವರದಿ ಸಲ್ಲಿಸುವಂತೆ ಕರ್ನಾಟಕ ಗೃಹ ಇಲಾಖೆ ಮಂಗಳವಾರ ಆದೇಶಿಸಿದೆ.

ನಾಪತ್ತೆಯಾಗಿದ್ದ ಅಪ್ರಾಪ್ತ ವಿದ್ಯಾರ್ಥಿನಿ ಹಾಗೂ ಆಟೋ ಚಾಲಕ ಶವವಾಗಿ ಪತ್ತೆ!

ಮೂರು ವಾರಗಳ ಹಿಂದೆ ನಾಪತ್ತೆಯಾಗಿದ್ದ ಅಪ್ರಾಪ್ತ ವಿದ್ಯಾರ್ಥಿನಿ ಮತ್ತು ಆಟೋ ಚಾಲಕ ಶವವಾಗಿ ಪತ್ತೆ ಆಗಿರುವಂತಹ ಘಟನೆ ಕೇರಳದ ಕಾಸರಗೋಡು ಜಿಲ್ಲೆಯ ಮಂಡೆಕಾಪು ಗ್ರಾಮದ ಬಳಿ ನಡೆದಿದೆ.