ಪುತ್ತೂರು: ನಿವೃತ್ತ ಪ್ರಾಂಶುಪಾಲ, ಪುತ್ತೂರು ಕಸಬಾ ನಿವಾಸಿ ಎ.ವಿ. ನಾರಾಯಣ ಅವರ ಮನೆ ದರೋಡೆಗೆ ಯತ್ನಿಸಿದ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಬಂಧಿತರನ್ನು ಮುಡೂರು ನಿವಾಸಿ, ಪಂಜದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಕಾರ್ತಿಕ್ ರಾವ್ ಹಾಗೂ ಆತನ ಪತ್ನಿ ಕೆ.ಎಸ್. ಸ್ವಾತಿ ರಾವ್ ಎಂದು…
ಪುತ್ತೂರು: ಆರ್ಯಾಪು ಗ್ರಾಮದ ಕಲ್ಲರ್ಪೆಯಲ್ಲಿ ಬುಧವಾರ ಮುಂಜಾನೆ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಘಟನೆ ನಡೆದಿದೆ. ಘಟನೆಯಿಂದ ವಿದ್ಯುತ್ ಕಂಬ ತುಂಡಾಗಿದ್ದು, ವಿದ್ಯುತ್ ಕಡಿತ ಉಂಟಾಗಿದೆ. ಸ್ವಿಫ್ಟ್ ಕಾರಿಗೂ ಹಾನಿಯಾಗಿದೆ ಎಂದು ತಿಳಿದುಬಂದಿದೆ. ಮೆಸ್ಕಾಂ ತಂಡ ಸ್ಥಳಕ್ಕೆ ಆಗಮಿಸಿ ವಿದ್ಯುತ್…
ಮಂಗಳೂರು: ಮಂಗಳೂರು ನಗರ ಕಾರಾಗೃಹದಲ್ಲಿ ಸೋಮವಾರ ತಡರಾತ್ರಿ ಕಾರಾಗೃಹ ಅಧೀಕ್ಷಕರ ನೇತೃತ್ವದಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿ ದಿಢೀರ್ ತಪಾಸಣೆ ನಡೆಸಿದರು. ಈ ವೇಳೆ ಅಕ್ರಮವಾಗಿ ಇಟ್ಟುಕೊಂಡಿದ್ದ 2 ಮೊಬೈಲ್‌ಗಳು, 1 ಸಿಮ್ ಕಾರ್ಡ್ ಮತ್ತು 1 ಕೇಬಲ್ ರಹಿತ ಮೊಬೈಲ್ ಚಾರ್ಜರ್‌ಗಳನ್ನು ಪತ್ತೆಹಚ್ಚಿ ಜಪ್ತಿ…
ಡೆಹ್ರಾಡೂನ್: ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಪರಿಣಾಮ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ಉತ್ತರಾಖಂಡದ ಅಲ್ಮೋರಾ ಜಿಲ್ಲೆಯ ಭಿಖಿಯಾಸೈನ್ ಸಮೀಪ ಇಂದು (ಡಿ.30) ಬೆಳಿಗ್ಗೆ ಸಂಭವಿಸಿದೆ. ಖಾಸಗಿ ಬಸ್ ದ್ವಾರಹತ್‌ನಿಂದ ರಾಮನಗರಕ್ಕೆ ತೆರಳುತ್ತಿದ್ದ…
ಹುಲಿಕಲ್ ಘಾಟ್ ರಸ್ತೆಯಲ್ಲಿ ಖಾಸಗಿ ಬಸ್ ರಸ್ತೆ ಬದಿಯ ಧರೆಗೆ ಗುದ್ದಿದ ಪರಿಣಾಮ ಮಗು ಸಾವನ್ನಪ್ಪಿದ್ದು, ಹಲವು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ಡಿಸೆಂಬರ್ 29ರ ತಡರಾತ್ರಿ ನಡೆದಿದೆ. ಅಪಘಾತದ ವೇಳೆ ಬಸ್‌ನಲ್ಲಿ ಇದ್ದ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ…
ಉಜಿರೆ: ನಾಪತ್ತೆಯಾಗಿದ್ದ ಬೆಳಾಲಿನ ಪುರುಷರಬೆಟ್ಟು ನಿವಾಸಿ ಯುವಕ ರಾಜೇಶ್ ಪಿ. (30) ಅವರ ಮೃತದೇಹ ಮಂಗಳವಾರ ಬೆಳಾಲಿನ ಬಲಿಪೆಯ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಡಿ.27ರಂದು ಬೆಳಿಗ್ಗೆ ಮನೆಯಿಂದ ಹೊರಟ ರಾಜೇಶ್ ಅವರು ಬಳಿಕ ಮನೆಗೆ ವಾಪಸ್ ಆಗದೆ ನಾಪತ್ತೆಯಾಗಿದ್ದರು. ಆತಂಕಗೊಂಡ ಕುಟುಂಬಸ್ಥರು ಹಾಗೂ…
ಬಂಟ್ವಾಳ: ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಟೋಲ್ ಶುಲ್ಕ ಪಾವತಿಸಲು ನಿರಾಕರಿಸಿ, ಟೋಲ್ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣದ ಇಬ್ಬರು ಆರೋಪಿಗಳನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ. ಟೋಲ್ ಇಂಚಾರ್ಜ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಕಾಸರಗೋಡು ಜಿಲ್ಲೆಯ ಮುಳ್ಳೇರಿಯ ನಿವಾಸಿ ಪ್ರಶಾಂತ್…
ಪುತ್ತೂರು: ಪಾದಚಾರಿಯೋರ್ವರಿಗೆ ಟೆಂಪೋ ಡಿಕ್ಕಿಯಾಗಿ ಮೃತಪಟ್ಟ ಘಟನೆ ಕೊಯಿಲದ ಆತೂರಿನಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ. ಮೃತಪಟ್ಟವರನ್ನು ಕಡಬದ ಸುಂಕದಕಟ್ಟೆ ನಿವಾಸಿ ಅಬ್ದುಲ್ ಖಾದರ್ ಸಖಾಫಿ ಎಂದು ಗುರುತಿಸಲಾಗಿದೆ. ಇವರು ಕಾಸರಗೋಡಿನ ಮೈಮಾತ್ ಸಂಸ್ಥೆಯಲ್ಲಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.…
ಉಡುಪಿ: ಓದುವಂತೆ ತಾಯಿ ಬುದ್ಧಿವಾದ ಮಾಡಿದ ಹಿನ್ನೆಲೆಯಲ್ಲಿ ಮನನೊಂದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಿರೇಬೆಟ್ಟು ಗ್ರಾಮದ ಬಾಲ್ಕಟ್ಟು ಪ್ರದೇಶದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಬಾಲ್ಕಟ್ಟು ನಿವಾಸಿ ಮಲ್ಲಿಕಾ ಅವರ ಪುತ್ರಿ ಸಮನ್ವಿ ಎಂದು…
ಉಡುಪಿ: ಕುಂದಾಪುರದ ರಥಬೀದಿಯಲ್ಲಿರುವ ಕಟ್ಟಡದಲ್ಲಿ ಸೋಮವಾರ ಬೆಳಗಿನ ಜಾವ ಭಾರೀ ಅಗ್ನಿ ಅವಘಡ ಸಂಭವಿಸಿ, ಹಲವು ಅಂಗಡಿಗಳು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿವೆ. ಕಟ್ಟಡದಲ್ಲಿದ್ದ ಪಟಾಕಿ ಅಂಗಡಿಯಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡಿದ್ದು, ನಂತರ ಅದು ಪುಸ್ತಕ ಅಂಗಡಿ ಸೇರಿ ಇತರ ಅಂಗಡಿಗಳಿಗೆ ತ್ವರಿತವಾಗಿ…
Welcome, Login to your account.
Welcome, Create your new account
A password will be e-mailed to you.