ಅಪರಾಧ

ಅಂಕಲ್ ಸಹವಾಸ: ಒಂದೇ ಏಟಿಗೆ ಗಂಡ ಖಲಾಸ್!

ಅಕ್ರಮ ಸಂಬಂಧಕ್ಕೆ ಪತಿ ಅಡ್ಡಿ ಆಗ್ತಾನೆ ಎಂದು ಹೊಡೆಯಬಾರದ ಜಾಗಕ್ಕೆ ಹೊಡೆದಿದ್ದಾಳೆ. ಅಂಕಲ್ ಜೊತೆ ಸುಖವಾಗಿರಬಹುದು ಅಂದುಕೊಂಡವಳು, ಇದೀಗ ಕಂಬಿ ಹಿಂದೆ ಸೇರಿದ್ದಾಳೆ. ಇದು ನಡೆದಿರುವುದು ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಇಂದಿರಾನಗರದಲ್ಲಿ. ಸುಪನಾಮಿ ಶಿವಮ್ಮ ಆರೋಪಿ. ಮದ್ವೆಯಾಗಿ 13 ವರ್ಷ ಆಗಿತ್ತು.…

ದೆಹಲಿ ಕಾರು ಸ್ಫೋಟ ಘಟನೆಗೆ ಪುಲ್ವಾಮಾ ನಂಟು: ಉಗ್ರ ಕೈವಾಡದ ಕರಿಛಾಯೆ?

ದೆಹಲಿ: ಕೆಂಪುಕೋಟೆ ಬಳಿ ಸಂಭವಿಸಿದ ಕಾರು ಸ್ಫೋಟ ಪ್ರಕರಣದ ತನಿಖೆ ಭರದಿಂದ ಸಾಗಿದ್ದು, ಪ್ರಮುಖ ಬೆಳವಣಿಗೆಗಳು ಕಂಡುಬಂದಿವೆ. ಸ್ಫೋಟಗೊಂಡ HR 26 CE 7674 ನೋಂದಣಿಯ i20 ಕಾರು ಮೊಹಮ್ಮದ್ ಸಲ್ಮಾನ್ ಎಂಬುವವರ ಹೆಸರಿನಲ್ಲಿ ಹರಿಯಾಣದಲ್ಲಿ ನೋಂದಣಿಯಾಗಿತ್ತು. ಗುರುಗ್ರಾಮದ ಶಾಂತಿನಗರ ನಿವಾಸಿ ಸಲ್ಮಾನ್ ಅವರನ್ನು…

ದೆಹಲಿಯಲ್ಲಿ ಭಯಾನಕ ಕಾರು ಸ್ಫೋಟ: ಮೃತರ ಸಂಖ್ಯೆ 10ಕ್ಕೆ ಏರಿಕೆ! ಕರ್ನಾಟಕದಲ್ಲೂ ಹೈಅಲರ್ಟ್ ಘೋಷಣೆ!!

ದೆಹಲಿಯ ಕೆಂಪುಕೋಟೆಯ ಮೆಟ್ರೋ ನಿಲ್ದಾಣದ ಗೇಟ್ ಸಂಖ್ಯೆ 1ರ ಬಳಿ ಭಯಾನಕ ಕಾರು ಸ್ಫೋಟ ಸಂಭವಿಸಿದೆ. ಈ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿಕೆ ಆಗಿದ್ದು, 15ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ. ಸದ್ಯ ಎಲ್ಲೆಡೆ ಹೈಅಲರ್ಟ್ ಘೋಷಿಸಿದ್ದು, ಇತ್ತ ಕರ್ನಾಟಕದಲ್ಲೂ ಕಟ್ಟೆಚ್ಚರ ವಹಿಸುವಂತೆ…

ನೆಹರುನಗರದಲ್ಲಿ ರಿಕ್ಷಾ – ಕಾರು ಅಪಘಾತ : ಐವರಿಗೆ ಗಾಯ

ಪುತ್ತೂರು: ನೆಹರುನಗರ ಬಳಿ ಆಟೋ ರಿಕ್ಷಾ ಹಾಗೂ ಕಾರು ನಡುವೆ ಅಪಘಾತ ನಡೆದಿದ್ದು, ಐವರು ಗಾಯಗೊಂಡ ಬಗ್ಗೆ ವರದಿಯಾಗಿದೆ. ಬೆಳ್ಳಾರೆಗೆ ಔಷಧಿಗೆಂದು ಬಂದಿದ್ದ ರಿಕ್ಷಾ ವಾಪಾಸ್ ಮಂಗಳೂರಿನ ಪಜೀರ್ ಕಡೆ ತೆರಳುತ್ತಿದ್ದ ಸಂದರ್ಭ ಅಪಘಾತ ನಡೆದಿದೆ. ರಿಕ್ಷಾದಲ್ಲಿದ್ದ ಮೂವರು ಗಾಯಗೊಂಡಿದ್ದಾರೆ. ಕಬಕದಿಂದ ಪುತ್ತೂರು…

ಜಾಮೀನಿಗೆ ನಕಲಿ ಆರ್.ಟಿ.ಸಿ. ನೀಡಿ ನ್ಯಾಯಾಲಯಕ್ಕೆ ವಂಚನೆ: ಬಂಧನ

ಪುತ್ತೂರು: ಆರೋಪಿಯೊಬ್ಬನಿಗೆ ಜಾಮೀನು ನೀಡುವ ವಿಚಾರಕ್ಕೆ ಸಂಬಂಧಿಸಿ ನಕಲಿ ಪಹಣಿಪತ್ರ ನೀಡಿ ನ್ಯಾಯಾಲಯಕ್ಕೆ ವಂಚನೆ ಎಸಗಿದ ಪ್ರಕರಣದಲ್ಲಿ ಓರ್ವ ಆರೋಪಿಯನ್ನು ಬಂಧಿಸಲಾಗಿದೆ. ಪುತ್ತೂರು ತಾಲೂಕಿನ ಪಡುವನ್ನೂರು ನಿವಾಸಿ ಅಬ್ದುಲ್ ಹಾಶೀಮ್ (34) ಬಂಧಿತ ಆರೋಪಿ. ಈತ ಪುತ್ತೂರು ನಿವಾಸಿಯೊಬ್ಬರ ಮಾಲಕತ್ವದಲ್ಲಿರುವ…

ಈಶ್ವರಮಂಗಲ ಶೂಟೌಟ್ ಪ್ರಕರಣದ ಆರೋಪಿಗಳನ್ನು ರಕ್ಷಿಸಲು ಒಳಸಂಚು: ಸಂಪ್ಯ ಠಾಣೆಯಲ್ಲಿ ಪ್ರಕರಣ ದಾಖಲು

ಪುತ್ತೂರು: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಘಟನೆಯಲ್ಲಿ ಶೂಟೌಟ್ ನಡೆಸಿದ ಪ್ರಕರಣದ ಆರೋಪಿಗಳನ್ನು ರಕ್ಷಿಸಲು ಒಳಸಂಚು ರೂಪಿಸಿ, ಸುಳ್ಳು ದಾಖಲೆ ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರು…

ಸುಳ್ಯ: ರಿಕ್ಷಾದಿಂದ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ಚಾಲಕ ಸಾವು

ಸುಳ್ಯ: ಜಟ್ಟಿಪಳ್ಳದಲ್ಲಿ ನಡೆದ ಅಪಘಾತದಲ್ಲಿ ರಿಕ್ಷಾದಿಂದ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ಅಟೋಚಾಲಕ ಪ್ರಭಾಕರ್ ರವರು ಬುಧವಾರ ಮುಂಜಾನೆ ಮಂಗಳೂರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ನ.3ರಂದು ಸಂಜೆ 6.30ರ ಸುಮಾರಿಗೆ ಈ ಘಟನೆ ನಡೆದಿದ್ದು, ಪ್ರಭಾಕರ್ ರನ್ನು ಸುಳ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು.…

ಬೆಳ್ತಂಗಡಿ: ಅಕ್ರಮ ಗೋ ಸಾಗಾಟ ಕೇಸ್ – ಆರೋಪಿ ಮನೆ ಜಪ್ತಿ!

ಬೆಳ್ತಂಗಡಿ: ಅಕ್ರಮ ಗೋ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದ್ದ ಇಬ್ಬರು ಆರೋಪಿಗಳಲ್ಲಿ ಓರ್ವನ ಮನೆಯನ್ನು ಧರ್ಮಸ್ಥಳ ಪೊಲೀಸರು ಮುಟ್ಟುಗೋಲು ಹಾಕಿ ಜಪ್ತಿ ಮಾಡಿದ್ದಾರೆ. ನವೆಂಬರ್ 2 ರಂದು ಪಟ್ರಮೆ ಗ್ರಾಮದ ಪಟ್ಟೂರು ರಸ್ತೆಯಲ್ಲಿ ಗೋ ಮಾಂಸ ಮಾಡಲು ಅಕ್ರಮವಾಗಿ ಮೂರು ದನಗಳನ್ನು ಕಾರಿನಲ್ಲಿ…

ಉಪ್ಪಿನಂಗಡಿ: ಮಹಡಿಯಿಂದ ಚರಂಡಿಗೆ ಬಿದ್ದ ಹೋಟೆಲ್ ಕಾರ್ಮಿಕ ಮೃತ್ಯು!

ಉಪ್ಪಿನಂಗಡಿ: ಹೋಟೆಲ್ ಕಾರ್ಮಿಕ ಮಹಡಿಯಿಂದ ಬಿದ್ದು ಮೃತಪಟ್ಟ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ನ. 4ರಂದು ಘಟನೆ ನಡೆದಿದ್ದು, ಮೃತರನ್ನು ಬೆಳ್ತಂಗಡಿಯ ಉರುವಾಲು ಗ್ರಾಮದ ಬನಾರಿ ನಿವಾಸಿ ಗಣೇಶ್ ನಾಯ್ಕ್ (60) ಎಂದು ಗುರುತಿಸಲಾಗಿದೆ. ಮೊದಲ ಮಹಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹೋಟೇಲೊಂದರಲ್ಲಿ…

ಲಿಫ್ಟ್’ನಲ್ಲಿ ನಾಯಿಯ ಬಡಿದು ಹತ್ಯೆ: ದೂರು ದಾಖಲು

ಬೆಂಗಳೂರು: ಮನೆಕೆಲಸದಾಕೆಯೊಬ್ಬಳು ಲಿಫ್ಟ್‌ನಲ್ಲಿ ನಾಯಿಮರಿಯನ್ನು ನೆಲಕ್ಕೆ ಬಡಿದು ಭೀಕರವಾಗಿ ಕೊಲೆ ಮಾಡಿರುವ ದಾರುಣ ಘಟನೆ ಬಾಗಲೂರಿನ ಅಪಾರ್ಟ್‌ಮೆಂಟ್‌ವೊಂದರಲ್ಲಿ ನಡೆದಿದೆ. ಅಕ್ಟೋಬರ್ 31ರಂದು ಕೃತ್ಯ ನಡೆದಿದ್ದು, ಮನೆ ಕೆಲಸದಾಕೆ ನಡೆಸಿರುವ ಅಮಾನವೀಯ ಕೃತ್ಯ ಲಿಫ್ಟ್‌ನ ಸಿಸಿಟಿವಿ ಕ್ಯಾಮೆರಾದಲ್ಲಿ…