ಅಪರಾಧ

ವಿಟ್ಲದಲ್ಲಿ ಬೆಂಕಿ ಅವಘಡ; ಹಲವು ಅಂಗಡಿಗಳಿಗೆ ಹಾನಿ! ಅಗ್ನಿ ಶಾಮಕದಳದಿಂದ ತ್ವರಿತ ಕಾರ್ಯಾಚರಣೆ!

ವಿಟ್ಲ: ಮಂಗಳೂರು ರಸ್ತೆಯಲ್ಲಿರುವ ಶ್ರೀ ಎಲೆಕ್ಟೋನಿಕ್ಸ್ ಅಂಗಡಿಯಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದೆ. ಶಾರ್ಟ್ ಸರ್ಕ್ಯೂಟ್‌ನಿಂದಲೇ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಶಂಕಿಸಲಾಗಿದ್ದು, ಬೆಂಕಿಯ ತೀವ್ರತೆ ಹೆಚ್ಚಿದ ಹಿನ್ನೆಲೆಯಲ್ಲಿ ಬಿಸಿರೋಡ್‌ನಿಂದ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ…

ಮನೆ ದರೋಡೆ ಯತ್ನ: ಆರೋಪಿಗಳ ಬಂಧನ!

ಪುತ್ತೂರು: ನಿವೃತ್ತ ಪ್ರಾಂಶುಪಾಲ, ಪುತ್ತೂರು ಕಸಬಾ ನಿವಾಸಿ ಎ.ವಿ. ನಾರಾಯಣ ಅವರ ಮನೆ ದರೋಡೆಗೆ ಯತ್ನಿಸಿದ ಪ್ರಕರಣದಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಬಂಧಿತರನ್ನು ಮುಡೂರು ನಿವಾಸಿ, ಪಂಜದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿರುವ ಕಾರ್ತಿಕ್ ರಾವ್ ಹಾಗೂ ಆತನ ಪತ್ನಿ ಕೆ.ಎಸ್. ಸ್ವಾತಿ ರಾವ್ ಎಂದು…

ಕಲ್ಲರ್ಪೆಯಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು: ವಿದ್ಯುತ್ ಕಡಿತ!

ಪುತ್ತೂರು: ಆರ್ಯಾಪು ಗ್ರಾಮದ ಕಲ್ಲರ್ಪೆಯಲ್ಲಿ ಬುಧವಾರ ಮುಂಜಾನೆ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಘಟನೆ ನಡೆದಿದೆ. ಘಟನೆಯಿಂದ ವಿದ್ಯುತ್ ಕಂಬ ತುಂಡಾಗಿದ್ದು, ವಿದ್ಯುತ್ ಕಡಿತ ಉಂಟಾಗಿದೆ. ಸ್ವಿಫ್ಟ್ ಕಾರಿಗೂ ಹಾನಿಯಾಗಿದೆ ಎಂದು ತಿಳಿದುಬಂದಿದೆ. ಮೆಸ್ಕಾಂ ತಂಡ ಸ್ಥಳಕ್ಕೆ ಆಗಮಿಸಿ ವಿದ್ಯುತ್…

ಮಂಗಳೂರು ಜೈಲಿಗೆ ಅಧಿಕಾರಿಗಳ ಬೇಟಿ: ಅಕ್ರಮವಾಗಿ ಇಟ್ಟಿದ್ದ 2 ಮೊಬೈಲ್ ಪತ್ತೆ

ಮಂಗಳೂರು: ಮಂಗಳೂರು ನಗರ ಕಾರಾಗೃಹದಲ್ಲಿ ಸೋಮವಾರ ತಡರಾತ್ರಿ ಕಾರಾಗೃಹ ಅಧೀಕ್ಷಕರ ನೇತೃತ್ವದಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿ ದಿಢೀರ್ ತಪಾಸಣೆ ನಡೆಸಿದರು. ಈ ವೇಳೆ ಅಕ್ರಮವಾಗಿ ಇಟ್ಟುಕೊಂಡಿದ್ದ 2 ಮೊಬೈಲ್‌ಗಳು, 1 ಸಿಮ್ ಕಾರ್ಡ್ ಮತ್ತು 1 ಕೇಬಲ್ ರಹಿತ ಮೊಬೈಲ್ ಚಾರ್ಜರ್‌ಗಳನ್ನು ಪತ್ತೆಹಚ್ಚಿ ಜಪ್ತಿ…

ಕಂದಕಕ್ಕೆ ಬಿದ್ದ ಬಸ್: 7 ಮಂದಿ ಸಾವು!!

ಡೆಹ್ರಾಡೂನ್: ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಪರಿಣಾಮ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ಉತ್ತರಾಖಂಡದ ಅಲ್ಮೋರಾ ಜಿಲ್ಲೆಯ ಭಿಖಿಯಾಸೈನ್ ಸಮೀಪ ಇಂದು (ಡಿ.30) ಬೆಳಿಗ್ಗೆ ಸಂಭವಿಸಿದೆ. ಖಾಸಗಿ ಬಸ್ ದ್ವಾರಹತ್‌ನಿಂದ ರಾಮನಗರಕ್ಕೆ ತೆರಳುತ್ತಿದ್ದ…

ಹುಲಿಕಲ್ ಘಾಟ್ ರಸ್ತೆಯಲ್ಲಿ ಖಾಸಗಿ ಬಸ್ ಅಪಘಾತ: ಮಗು ಸಾವು, ಹಲವರಿಗೆ ಗಂಭೀರ ಗಾಯ!

ಹುಲಿಕಲ್ ಘಾಟ್ ರಸ್ತೆಯಲ್ಲಿ ಖಾಸಗಿ ಬಸ್ ರಸ್ತೆ ಬದಿಯ ಧರೆಗೆ ಗುದ್ದಿದ ಪರಿಣಾಮ ಮಗು ಸಾವನ್ನಪ್ಪಿದ್ದು, ಹಲವು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ಡಿಸೆಂಬರ್ 29ರ ತಡರಾತ್ರಿ ನಡೆದಿದೆ. ಅಪಘಾತದ ವೇಳೆ ಬಸ್‌ನಲ್ಲಿ ಇದ್ದ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ…

ನಾಪತ್ತೆಯಾಗಿದ್ದ ರಾಜೇಶ್ ಶವ ನೇತ್ರಾವತಿ ನದಿಯಲ್ಲಿ ಪತ್ತೆ!!

ಉಜಿರೆ: ನಾಪತ್ತೆಯಾಗಿದ್ದ ಬೆಳಾಲಿನ ಪುರುಷರಬೆಟ್ಟು ನಿವಾಸಿ ಯುವಕ ರಾಜೇಶ್ ಪಿ. (30) ಅವರ ಮೃತದೇಹ ಮಂಗಳವಾರ ಬೆಳಾಲಿನ ಬಲಿಪೆಯ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಡಿ.27ರಂದು ಬೆಳಿಗ್ಗೆ ಮನೆಯಿಂದ ಹೊರಟ ರಾಜೇಶ್ ಅವರು ಬಳಿಕ ಮನೆಗೆ ವಾಪಸ್ ಆಗದೆ ನಾಪತ್ತೆಯಾಗಿದ್ದರು. ಆತಂಕಗೊಂಡ ಕುಟುಂಬಸ್ಥರು ಹಾಗೂ…

ಬ್ರಹ್ಮರಕೂಟ್ಲು ಟೋಲ್ ಗೇಟ್ ಹಲ್ಲೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ!

ಬಂಟ್ವಾಳ: ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಟೋಲ್ ಶುಲ್ಕ ಪಾವತಿಸಲು ನಿರಾಕರಿಸಿ, ಟೋಲ್ ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣದ ಇಬ್ಬರು ಆರೋಪಿಗಳನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ. ಟೋಲ್ ಇಂಚಾರ್ಜ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಕಾಸರಗೋಡು ಜಿಲ್ಲೆಯ ಮುಳ್ಳೇರಿಯ ನಿವಾಸಿ ಪ್ರಶಾಂತ್…

ಆಲಂಕಾರಿನಲ್ಲಿ ಟೆಂಪೋ ಡಿಕ್ಕಿ: ಕಾಸರಗೋಡಿನ ಶಿಕ್ಷಕ ಅಬ್ದುಲ್ ಖಾದರ್ ಸಖಾಫಿ ಮೃತ್ಯು!!

ಪುತ್ತೂರು: ಪಾದಚಾರಿಯೋರ್ವರಿಗೆ ಟೆಂಪೋ ಡಿಕ್ಕಿಯಾಗಿ ಮೃತಪಟ್ಟ ಘಟನೆ ಕೊಯಿಲದ ಆತೂರಿನಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ. ಮೃತಪಟ್ಟವರನ್ನು ಕಡಬದ ಸುಂಕದಕಟ್ಟೆ ನಿವಾಸಿ ಅಬ್ದುಲ್ ಖಾದರ್ ಸಖಾಫಿ ಎಂದು ಗುರುತಿಸಲಾಗಿದೆ. ಇವರು ಕಾಸರಗೋಡಿನ ಮೈಮಾತ್ ಸಂಸ್ಥೆಯಲ್ಲಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.…

ಓದುವಂತೆ ಬುದ್ಧಿವಾದ ಹೇಳಿದ ತಾಯಿ: ನೇಣಿಗೆ ಕೊರಳೊಡ್ಡಿದ ಮಗಳು! ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಮೃತ್ಯು!!

ಉಡುಪಿ: ಓದುವಂತೆ ತಾಯಿ ಬುದ್ಧಿವಾದ ಮಾಡಿದ ಹಿನ್ನೆಲೆಯಲ್ಲಿ ಮನನೊಂದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಿರೇಬೆಟ್ಟು ಗ್ರಾಮದ ಬಾಲ್ಕಟ್ಟು ಪ್ರದೇಶದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಬಾಲ್ಕಟ್ಟು ನಿವಾಸಿ ಮಲ್ಲಿಕಾ ಅವರ ಪುತ್ರಿ ಸಮನ್ವಿ ಎಂದು…