ಅಪರಾಧ

ಶ್ರೀಕೃಷ್ಣ ಜೆ ರಾವ್ ಜಾಮೀನು ಅರ್ಜಿ ತಿರಸ್ಕೃತ..!!!

ಮಂಗಳೂರು: ವಿವಾಹವಾಗುವುದಾಗಿ ನಂಬಿಸಿ ಸಹಪಾಠಿಯ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿಯಾಗಿಸಿದ ಆರೋಪದಲ್ಲಿ ಬಂಧಿತನಾಗಿರುವ ಶ್ರೀಕೃಷ್ಣ ಜೆ. ರಾವ್‌ಗೆ, ಜಾಮೀನು ನೀಡುವ ಕುರಿತು ಸಲ್ಲಿಸಲಾಗಿದ್ದ ಅರ್ಜಿಯನ್ನು ಮಂಗಳೂರು ನಗರದ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಜಾ ಮಾಡಿದೆ. ನ್ಯಾಯಾಧೀಶರು ಉಭಯ…

ಸಂಪಾಜೆ: ಕಾರು-ಟಿಪ್ಪ‌ರ್ ಅಪಘಾತ; ಕಾರಿನಲ್ಲಿದ್ದ ನಾಲ್ವರೂ ಸಾವು!!

ಸಂಪಾಜೆ: ಕೊಯನಾಡು ಸಮೀಪದ ದೇವರಕೊಲ್ಲಿ ಬಳಿ ಸಂಭವಿಸಿದ ಕಾರು ಮತ್ತು ಟಿಪ್ಪ‌ರ್ ನಡುವಿನ ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರೂ ಸಾವನ್ನಪ್ಪಿದ್ದಾಗಿ ತಿಳಿದುಬಂದಿದೆ. ಮಂಗಳೂರಿನಿಂದ ಮಡಿಕೇರಿಗೆ ತೆರಳುತ್ತಿದ್ದ (205 ಮೈಸೂರು ರಾ.ಹೆದ್ದಾರಿಯ ಕೊಯನಾಡು ಸಮೀಪದ ದೇವರಕೊಲ್ಲಿ ಬಳಿ ಎದುರಿನಿಂದ…

ಸುಬ್ರಹ್ಮಣ್ಯ: ನಾಪತ್ತೆಯಾಗಿದ್ದ ಸರ್ಕಾರಿ ಆಂಬ್ಯುಲೆನ್ಸ್ ಚಾಲಕನ ಶವ ಪತ್ತೆ!!

ಸುಬ್ರಹ್ಮಣ್ಯದ ಸರ್ಕಾರಿ ಆಸ್ಪತ್ರೆಯ ಅಂಬ್ಯುಲೆನ್ಸ್‌ ಚಾಲಕ ಹೊನ್ನಪ್ಪ ಗೌಡ ಕುಮಾರಧಾರ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಈ ಮೂಲಕ ಅವರು ಬದುಕಿದ್ದಾರೆ ಅನ್ನುವ ಊಹಪೋಹಗಳಿಗೆ ತೆರೆಬಿದ್ದಂತಾಗಿದೆ. ಈಶ್ವ‌ರ್ ಮಲ್ಪೆ ಹಾಗೂ ತಂಡದ ಮೂರು ದಿನದ ಕಾರ್ಯಾಚರಣೆ ಬಳಿಕ ಶವವನ್ನು ಮೇಲಕ್ಕೆ ಎತ್ತಿದ್ದಾರೆ…

ಹಲಸಿನ ಹಣ್ಣು ತಿಂದಿದ್ದಕ್ಕೆ ದಾಖಲಾಯ್ತೇ ಕೇಸು?? ಹಲಸಿನ ಹಣ್ಣಿನಲ್ಲಿ ಪತ್ತೆಯಾಯ್ತು ಆಲ್ಕೋಹಾಲ್ ಅಂಶ!!

ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮದ (ksrtc) ಮೂವರು ಬಸ್ ಚಾಲಕರು ಮದ್ಯಪಾನ ಮಾಡದೆ ಬೀಥಲೈಸರ್ ಪರೀಕ್ಷೆಯಲ್ಲಿ ವಿಫಲವಾದ ನಂತರ ಕುಡಿದು ವಾಹನ ಚಲಾಯಿಸಿದ್ದಕ್ಕಾಗಿ ಪ್ರಕರಣ ದಾಖಲಿಸಲಾಗಿದೆ. ಹಲಸಿನ ಹಣ್ಣು ತಿಂದು ಕೇಸು ದಾಖಲಾದ ಈ ವಿಲಕ್ಷಣ ಘಟನೆ ಪಥನಂತಿಟ್ಟ ಜಿಲ್ಲೆಯ ಪಂದಳಂ ಡಿಪೋದಲ್ಲಿ ಕಳೆದ ವಾರ ನಡೆದಿದೆ…

ಮಗನ ಆಪೋಶನಗೈದ ಭದ್ರೆ: ಕಣ್ಣೀರಾದ ತಾಯಿ ಆತ್ಮಹತ್ಯೆ!

ಚಿಕ್ಕಮಗಳೂರು: ಮಗ ಸಾವನ್ನಪ್ಪಿದ್ದಕ್ಕೆ ಮನನೊಂದು ಮಗನ ಮೃತದೇಹ ಸಿಗುವ ಮುನ್ನವೇ ತಾಯಿಯೂ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಕೊಳಮಾಗೆ ಗ್ರಾಮದಲ್ಲಿ ಗುರುವಾರ (ಜು.24) ಸಂಜೆ ನಡೆದಿದೆ. ಮೃತರನ್ನು ರವಿಕಲಾ(48 )ಎಂದು ಗುರುತಿಸಲಾಗಿದೆ.…

ಶಾಲಾ ಮೇಲ್ಛಾವಣಿ ಕುಸಿದು 4 ವಿದ್ಯಾರ್ಥಿಗಳು ಮೃತ್ಯು, ಹಲವರು ಸಿಲುಕಿರುವ ಶಂಕೆ!!

ರಾಜಸ್ಥಾನ: ಬೆಳ್ಳಂಬೆಳಗ್ಗೆ ಶಾಲೆಯ ಕಟ್ಟಡದ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ ಕನಿಷ್ಠ ನಾಲ್ಕು ಮಕ್ಕಳು ಮೃತಪಟ್ಟು, ಹಲವಾರು ವಿದ್ಯಾರ್ಥಿಗಳು ಅವಶೇಷಗಳಡಿ ಸಿಲುಕಿರುವ ಘಟನೆ ನಡೆದಿದೆ. ರಾಜಸ್ಥಾನದ ಝಲಾವರ್‌ನಲ್ಲಿರುವ ಪಿಪ್ಲೋಡಿ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ (ಜು.25) ಸಂಭವಿಸಿದೆ. ಘಟನಾ ಸ್ಥಳಕ್ಕೆ…

ಮಂಗಳೂರು ಜೈಲಿನಲ್ಲಿ ಆರೋಪಿ ಮೇಲೆ ಸಹಖೈದಿಗಳಿಂದ ಹಲ್ಲೆ: ಪ್ರಕರಣ ದಾಖಲು

ಮಂಗಳೂರು ಜೈಲಿನಲ್ಲಿ ನಾಲ್ಕು ಜನ ಆರೋಪಿಗಳು ಅದೇ ಜೈಲಿನಲ್ಲಿದ್ದಂತಹ ಇನ್ನೊಬ್ಬ ಆರೋಪಿಯ ಮೇಲೆ ದಾಳಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬರ್ಕೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು ಈ ಪ್ರಕರಣದ ತನಿಖೆಯ ಸಂದರ್ಭದಲ್ಲಿ ದಾಳಿ ನಡೆಸಿದ ಆರೋಪಿಗೆ ಬೆಂಬಲ ನೀಡಿದವರಿಗೂ ಕರ್ನಾಟಕ ಸಂಘಟಿತ ಅಪರಾಧಗಳ…

ಆಂಧ್ರದಲ್ಲಿ ಬೆಂಗಳೂರಿನ ಇಬ್ಬರು ಬಿಜೆಪಿ ಮುಖಂಡರ ಹತ್ಯೆ!

ಬೆಂಗಳೂರು: ಬೆಂಗಳೂರು ಮೂಲದ ಇಬ್ಬರು ಉದ್ಯಮಿಗಳು ಹಾಗೂ ಬಿಜೆಪಿ ಮುಖಂಡರನ್ನು ಆಂಧ್ರ ಪ್ರದೇಶದ ಬಾಪಟ್ಲ ಜಿಲ್ಲೆಯಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಇಬ್ಬರು ಬಿಜೆಪಿ ಮುಖಂಡರ ಬರ್ಬರ ಘಟನೆ ಆಂಧ್ರ ಪ್ರದೇಶ ರಾಜ್ಯದ ಬಾಪಟ್ಲ ಜಿಲ್ಲೆಯಲ್ಲಿ ನಿನ್ನೆ (ಜುಲೈ 23) ಮಧ್ಯಾಹ್ನ ನಡೆದಿದೆ. ಇವರಿಬ್ಬರೂ ತಂದೆ-ಮಗ…

ಉಪ್ಪಿನಂಗಡಿ: ಸೈಡ್ ಕೊಡುವ ವಿಚಾರ- ರಾಜಹಂಸ ಬಸ್ ಚಾಲಕನಿಗೆ ಹಲ್ಲೆ

ಉಪ್ಪಿನಂಗಡಿ: ರಾಜಹಂಸ ಬಸ್ಸಿನ ಚಾಲಕ ಹಾರ್ನ್ ಹಾಕಿದ ಕಾರಣಕ್ಕೆ ಬೈಕ್ ಸವಾರರಿಬ್ಬರು ಬಸ್ಸನ್ನು ಅಡ್ಡ ಹಾಕಿ ಬಸ್ಸಿನ ಚಾಲಕನ ಮೇಲೆ ಹಲ್ಲೆ ನಡೆಸಿದ ಹಾಗೂ ಇದನ್ನು ಪ್ರಶ್ನಿಸಿದ ಪ್ರಯಾಣಿಕನ ಮೇಲೂ ಹೆಲೈಟ್ ನಿಂದ ಹೊಡೆದು ಹಲ್ಲೆ ನಡೆಸಿದ ಘಟನೆ ಉಪ್ಪಿನಂಗಡಿಯಲ್ಲಿ ಬುಧವಾರದಂದು ನಡೆದಿದೆ. ಬೆಂಗಳೂರಿನಿಂದ…

ಡಿಜೆ ಹಳ್ಳಿ-ಕೆಜೆ ಹಳ್ಳಿ ಗಲಭೆ ಪ್ರಕರಣ: 3 ಆರೋಪಿಗಳಿಗೆ ಕಠಿಣ ಶಿಕ್ಷೆ!

ಡಿಜೆ ಹಳ್ಳಿ ಹಾಗೂ ಕೆ.ಜೆ.ಹಳ್ಳಿ ಗಲಭೆ ಪ್ರಕರಣದ ಮೂವರು ಆರೋಪಿಗಳಿಗೆ ಎನ್​ಐಎ ಕೋರ್ಟ್ ಕಠಿಣ ಶಿಕ್ಷೆ ವಿಧಿಸಿದೆ. ಡಿ.ಜೆ.ಹಳ್ಳಿ, ಕೆ.ಜೆ.ಹಳ್ಳಿ ಗಲಭೆ ತಪ್ಪೊಪ್ಪಿಕೊಂಡ ಮೂವರು ಆರೋಪಿಗಳಾದ ಎ-14 ಸೈಯದ್ ಇಕ್ರಮುದ್ದೀನ್ ಅಲಿಯಾಸ್ ನವೀದ್, ಎ-16 ಸೈಯದ್ ಆಸಿಫ್, ಎ-18 ಮೊಹಮ್ಮದ್ ಅತೀಫ್​ ಗೆ 7 ವರ್ಷ ಕಠಿಣ…