ಎನ್‌ಐಟಿಕೆ ಬೀಚ್‌ನಲ್ಲಿ ನೀರಾಟಕ್ಕೆ ಇಳಿದ ಮುಂಬೈ ಮೂಲದ ಇಬ್ಬರು ವಿದ್ಯಾರ್ಥಿಗಳಲ್ಲಿ ಓರ್ವ ನಾಪತ್ತೆಯಾಗಿದ್ದಾನೆ. ಮತ್ತೋರ್ವನನ್ನು ಲೈಫ್ ಗಾರ್ಡ್ ಸಮುದ್ರದಿಂದ ಮೇಲಕ್ಕೆತ್ತಿದರೂ ದುರಾದೃಷ್ಟವಶಾತ್ ಆತ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.
ಮೇಕೆಯನ್ನು ಬಲಿ ನೀಡಲು ತೆಗೆದುಕೊಂಡು ಹೋಗುತ್ತಿದ್ದ ವೇಳೆ ಕಾರು ಅಪಘಾತಕ್ಕೀಡಾಗಿದ್ದು, ಕಾರಿನಲ್ಲಿದ್ದವರೆಲ್ಲರೂ ಸಾವನ್ನಪ್ಪಿದ್ದು ಮೇಕೆ ಮಾತ್ರ ಬದುಕುಳಿದ ವಿಚಿತ್ರ ಘಟನೆಯೊಂದು ಮಧ್ಯಪ್ರದೇಶದ ಜಬಲ್ಪುರದಲ್ಲಿ ನಡೆದಿದೆ.
ಕುಂದಾಪುರ ಡಿಪೋಗೆ ಸೇರಿದ ಕೆಎಸ್‌ಆರ್ ಟಿಸಿ ಬಸ್ಸು ಧರ್ಮಸ್ಥಳದಿಂದ ಬೆಂಗಳೂರಿಗೆ ಹೋಗುತ್ತಿದ್ದ ವೇಳೆ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಗ್ರಾಮದ ಅಡ್ಡಹೊಳೆಯಲ್ಲಿ ಡಿವೈಡರ್ ಗೆ ಡಿಕ್ಕಿಯಾಗಿದೆ. ಎ.14ರಂದು ರಾತ್ರಿ 9.30ರ ವೇಳೆಗೆ ನಡೆದಿದೆ.
ಪೋಷಕರ ಜೊತೆ ಅಜ್ಜಿ ಮನೆಗೆ ಬಂದಿದ್ದ ಸಹೋದರಿಯರು ಆಟವಾಡುತ್ತಾ ಪೋಷಕರ ಕಣ್ಣು ತಪ್ಪಿಸಿ ಕಾರಿನೊಳಗೆ ಕುಳಿತು ಉಸಿರುಗಟ್ಟಿ ಮೃತಪಟ್ಟಿರುವ ಆಘಾತಕಾರಿ ಘಟನೆಯೊಂದು ತೆಲಂಗಾಣದ ರಂಗಾ ರೆಡ್ಡಿ ಜಿಲ್ಲೆಯಲ್ಲಿ ಸೋಮವಾರ(ಏ.14) ನಡೆದಿದೆ. ತನ್ಮಯಿಶ್ರೀ (5) ಮತ್ತು ಅಭಿನಯಶ್ರೀ (4) ಮೃತಪಟ್ಟ ಸಹೋದರಿಯರು. ಸೋಮವಾರ…
7 ಕೋಟಿ ರೂ. ಖರ್ಚು ಮಾಡಿ ನಿರ್ಮಿಸಿದ ಎರಡು ಹಾಸ್ಟೆಲ್‌ಗಳು ಕಣ್ಮರೆಯಾಗಿರುವ ಘಟನೆ ಮಂಗಳೂರು (Mangaluru) ವಿಶ್ವವಿದ್ಯಾಲಯದಲ್ಲಿ ನಡೆದಿದೆ. ತಜ್ಞರ ಸಮಿತಿ ಪರಿಶೀಲನೆಗೆ ತೆರಳಿದ್ದ ವೇಳೆ ಈ ಘಟನೆ ಬಹಿರಂಗವಾಗಿದ್ದು, ತೀವ್ರ ವಿವಾದಕ್ಕೆ ಕಾರಣವಾಗಿದೆ.
ಪೊಲೀಸರಿಗೆ ದೂರು ನೀಡಿದ ದ್ವೇಷದಿಂದ ದುಷ್ಕರ್ಮಿಯೋರ್ವ ಯುವತಿಗೆ ಬೆಂಕಿ ಹಚ್ಚಿದ್ದ, ಪರಿಣಾಮ ಗಂಭೀರ ಸುಟ್ಟ ಗಾಯಗಳಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವತಿ ಮೃತಪಟ್ಟ ಘಟನೆ ನಡೆದಿದೆ.
ಪುತ್ತೂರಿನಿಂದ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಮೂವರು ಯುವಕರನ್ನು ಮಡಿಕೇರಿ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಅವರಿದ್ದ ಕಾರು ದೇವರಕೊಲ್ಲಿ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದಾಗ ಈ ಘಟನೆ ಬೆಳಕಿಗೆ ಬಂದಿದೆ.
ಮುಲ್ಕಿ ಕೊಲ್ನಾಡು ನಿವಾಸಿ. ಆಟೋ ರಿಕ್ಷಾ ಚಾಲಕ ಮುಹಮ್ಮದ್ ಶರೀಫ್ (52) ಎಂಬವರನ್ನು ಹತ್ಯೆ ಮಾಡಿ ಮಂಜೇಶ್ವರ ಸಮೀಪ ಬಾವಿಗೆಸೆದ ಪ್ರಕರಣದ ಆರೋಪಿಯನ್ನು ಕಾಸರಗೋಡು ಪೊಲೀಸರು ಬಂಧಿಸಿದ್ದಾರೆ.
ಗುಜರಾತ್‌ನ ಭಯೋತ್ಪಾದನಾ ನಿಗ್ರಹ ದಳ (ATS) ಮತ್ತು ಕರಾವಳಿ ಕಾವಲು ಪಡೆ (Coast Guard) ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಸುಮಾರು 1,800 ಕೋಟಿ ರೂಪಾಯಿ ಮೌಲ್ಯದ 300 ಕೆಜಿ ಡ್ರಗ್ಸ್ ಅನ್ನು ವಶಪಡಿಸಿಕೊಂಡಿದ್ದಾರೆ. ಏ.12 ಮತ್ತು 13ರ ರಾತ್ರಿ ಅರಬ್ಬಿ ಸಮುದ್ರದಲ್ಲಿ ಕಾರ್ಯಾಚರಣೆ ನಡೆದಿದೆ.
ಪುತ್ತೂರು: ದರ್ಬೆ ಬಳಿ ಕಾರ್ಯನಿರ್ವಹಿಸುತ್ತಿದ್ದ ಆಶೀರ್ವಾದ್ ಫರ್ನಿಚರ್ ಮಳಿಗೆಯಲ್ಲಿ ಇಂದು ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಅವಘಡಕ್ಕೆ ಕಾರಣ ತಿಳಿದುಬಂದಿಲ್ಲ. ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯ ನಡೆಸುತ್ತಿದ್ದಾರೆ.
Welcome, Login to your account.
Welcome, Create your new account
A password will be e-mailed to you.