ಅಂಕೋಲದಲ್ಲಿ ಕೋಟಿಗಟ್ಟಲೆ ಹಣದೊಂದಿಗೆ ಮಂಗಳೂರು ಮೂಲದ ಕಾರೊಂದು ಪತ್ತೆಯಾಗಿ ಎಲ್ಲೆಡೆ ಕುತೂಹಲಕ್ಕೆ ಕಾರಣವಾಗಿತ್ತು. ಇದೀಗ ಈ ಪ್ರಕರಣ ಮಹತ್ವದ ತಿರುವು ಪಡೆದಿದ್ದು, ಅದೊಂದು ದರೋಡೆ ಕೃತ್ಯ ಎಂದು ಅಂಕೋಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸ್ಕೂಟರೊಂದಕ್ಕೆ ಎದುರಿನಿಂದ ಆಗಮಿಸಿದ ಕಾರೊಂದು ಢಿಕ್ಕಿಯಾಗಿ ಸ್ಕೂಟರ್ ಸವಾರ ಸರಪಾಡಿ ಕಳ್ಕೊಟ್ಟೆ ನಿವಾಸಿ ಸುಂದರ ಬಾಬು ಶೆಟ್ಟಿ ಗಂಭೀರ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು.
ಆರ್ವಿ ಟೂರ್ಸ್ ಎಂಡ್ ಟ್ರಾವೆಲ್ಸ್ ಮಾಲಕ ಪರ್ಕಳ ಸಮೀಪದ ಅಚ್ಚುತನಗರ ಗ್ಯಾಡ್ಸನ್ ನಿವಾಸಿ ಕರಿಂಕ ರಾಘವೇಂದ್ರ ಭಂಡಾರಿ (44 ವ.) ಹೃದಯಾಘಾತಗೊಂಡು ಮಣಿಪಾಲ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಇವರು ಚಿಕಿತ್ಸೆಗೆ ಸ್ಪಂದಿಸದೆ ಫೆಬ್ರವರಿ 19 ರಂದು ಸಾವನ್ನಪ್ಪಿದ್ದಾರೆ.
ಪರೀಕ್ಷೆಗೆ ಮುನ್ನ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ (ಕೆಎಸ್‌ಎಲ್‌ಯು) ಎಲ್‌ಎಲ್‌ಬಿ ಕಾನೂನು 1 ಪ್ರಶ್ನೆ ಪತ್ರಿಕೆಯನ್ನು ಸಾಮಾಜಿಕ ಮಾಧ್ಯಮದಲ್ಲಿ ಸೋರಿಕೆ ಮಾಡಿದ ಆರೋಪದ ಮೇಲೆ ಮೂವರನ್ನು ಸೈಬರ್ ಅಪರಾಧ ಪೊಲೀಸರು ಬಂಧಿಸಿದ್ದಾರೆ.
ಹಣಕಾಸಿನ ವಿಚಾರದಲ್ಲಿ ಉಂಟಾದ ಕೌಟುಂಬಿಕ ಸಮಸ್ಯೆಯಿಂದ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪೋಳ್ಯ: ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮೂವರು ಗಾಯಗೊಂಡ ಘಟನೆ ಪೋಳ್ಯ ಸಮೀಪದ ಪುಳಿತ್ತಡಿ ಎಂಬಲ್ಲಿ ನಡೆದಿದೆ. ಬಿ.ಸಿ.ರೋಡ್ ಸಾಗರ್ ಆಡಿಟೋರಿಯಂ ನಲ್ಲಿ ನಡೆಯುತ್ತಿದ್ದ ಮದುವೆ ಸಮಾರಂಭಕ್ಕೆ ತೆರಳುತ್ತಿದ್ದ ಕೆಮ್ಮಾಯಿ ಸಮೀಪದ ನಿವಾಸಿಗಳಿದ್ದ ಕಾರು ಹಾಗೂ ಮಂಗಳೂರಿನಿಂದ ಪುತ್ತೂರು…
ಉಪ್ಪಿನಂಗಡಿ: 7 ನೇ ತರಗತಿಯ ವಿದ್ಯಾರ್ಥಿಯೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಉಪ್ಪಿನಂಗಡಿಯ ಖಾಸಗಿ ಶಾಲಾ ವಿದ್ಯಾರ್ಥಿ ಬೆಳ್ತಂಗಡಿ ತಾಲೂಕಿನ ತಣ್ಣೀರುಪಂತ ಗ್ರಾಮದ ನಿವಾಸಿ ಶ್ರವಣ್ (13) ಮೃತ ವಿದ್ಯಾರ್ಥಿ. ನಿನ್ನೆ ರಾತ್ರಿ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…
ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಅವರ ತಾಯಿ ಸುಶೀಲಾ ಶಿವಾನಂದ ರಾವ್(85ವ) ಅವರು ಫೆ.17ರಂದು ರಾತ್ರಿ ನಿಧನರಾದರು.
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ದರ್ಶನ್ ಜಾಮೀನು ಪ್ರಶ್ನಿಸಿ ಬೆಂಗಳೂರು ಪೊಲೀಸರು ಸುಪ್ರೀಂಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ
ಹೊಳೆನರಸೀಪುರದ ಬಳಿಯಲ್ಲಿ ವಿದ್ಯಾರ್ಥಿಯೋರ್ವ ಚಲಿಸುತ್ತಿದ್ದ ರೈಲಿನಿಂದ ಕಾಲು ಜಾರಿ ಸುಮಾರು 70 ಅಡಿ ಆಳದ ನದಿಗೆ ಬಿದ್ದು, ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಸಂಭವಿಸಿದೆ.
Welcome, Login to your account.
Welcome, Create your new account
A password will be e-mailed to you.