7 ಕೋಟಿ ರೂ. ಖರ್ಚು ಮಾಡಿ ನಿರ್ಮಿಸಿದ ಎರಡು ಹಾಸ್ಟೆಲ್‌ಗಳು ಕಣ್ಮರೆಯಾಗಿರುವ ಘಟನೆ ಮಂಗಳೂರು (Mangaluru) ವಿಶ್ವವಿದ್ಯಾಲಯದಲ್ಲಿ ನಡೆದಿದೆ. ತಜ್ಞರ ಸಮಿತಿ ಪರಿಶೀಲನೆಗೆ ತೆರಳಿದ್ದ ವೇಳೆ ಈ ಘಟನೆ ಬಹಿರಂಗವಾಗಿದ್ದು, ತೀವ್ರ ವಿವಾದಕ್ಕೆ ಕಾರಣವಾಗಿದೆ.
ಪೊಲೀಸರಿಗೆ ದೂರು ನೀಡಿದ ದ್ವೇಷದಿಂದ ದುಷ್ಕರ್ಮಿಯೋರ್ವ ಯುವತಿಗೆ ಬೆಂಕಿ ಹಚ್ಚಿದ್ದ, ಪರಿಣಾಮ ಗಂಭೀರ ಸುಟ್ಟ ಗಾಯಗಳಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವತಿ ಮೃತಪಟ್ಟ ಘಟನೆ ನಡೆದಿದೆ.
ಪುತ್ತೂರಿನಿಂದ ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಮೂವರು ಯುವಕರನ್ನು ಮಡಿಕೇರಿ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಅವರಿದ್ದ ಕಾರು ದೇವರಕೊಲ್ಲಿ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದಾಗ ಈ ಘಟನೆ ಬೆಳಕಿಗೆ ಬಂದಿದೆ.
ಮುಲ್ಕಿ ಕೊಲ್ನಾಡು ನಿವಾಸಿ. ಆಟೋ ರಿಕ್ಷಾ ಚಾಲಕ ಮುಹಮ್ಮದ್ ಶರೀಫ್ (52) ಎಂಬವರನ್ನು ಹತ್ಯೆ ಮಾಡಿ ಮಂಜೇಶ್ವರ ಸಮೀಪ ಬಾವಿಗೆಸೆದ ಪ್ರಕರಣದ ಆರೋಪಿಯನ್ನು ಕಾಸರಗೋಡು ಪೊಲೀಸರು ಬಂಧಿಸಿದ್ದಾರೆ.
ಗುಜರಾತ್‌ನ ಭಯೋತ್ಪಾದನಾ ನಿಗ್ರಹ ದಳ (ATS) ಮತ್ತು ಕರಾವಳಿ ಕಾವಲು ಪಡೆ (Coast Guard) ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಸುಮಾರು 1,800 ಕೋಟಿ ರೂಪಾಯಿ ಮೌಲ್ಯದ 300 ಕೆಜಿ ಡ್ರಗ್ಸ್ ಅನ್ನು ವಶಪಡಿಸಿಕೊಂಡಿದ್ದಾರೆ. ಏ.12 ಮತ್ತು 13ರ ರಾತ್ರಿ ಅರಬ್ಬಿ ಸಮುದ್ರದಲ್ಲಿ ಕಾರ್ಯಾಚರಣೆ ನಡೆದಿದೆ.
ಪುತ್ತೂರು: ದರ್ಬೆ ಬಳಿ ಕಾರ್ಯನಿರ್ವಹಿಸುತ್ತಿದ್ದ ಆಶೀರ್ವಾದ್ ಫರ್ನಿಚರ್ ಮಳಿಗೆಯಲ್ಲಿ ಇಂದು ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಅವಘಡಕ್ಕೆ ಕಾರಣ ತಿಳಿದುಬಂದಿಲ್ಲ. ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯ ನಡೆಸುತ್ತಿದ್ದಾರೆ.
ಉಕ್ರೇನ್‌ನಲ್ಲಿ ಭಾರತೀಯ ಔಷಧ ಕಂಪನಿಯ ಗೋದಾಮಿನ ಮೇಲೆ ರಷ್ಯಾದ ಕ್ಷಿಪಣಿ ದಾಳಿ ಮಾಡಿದೆ ಎಂದು ಉಕ್ರೇನ್ ಶನಿವಾರ (ಏ.12) ತಿಳಿಸಿದೆ. ರಷ್ಯಾ ಉದ್ದೇಶಪೂರ್ವಕವಾಗಿ ಉಕ್ರೇನ್‌ನಲ್ಲಿರುವ ಭಾರತೀಯ ವ್ಯವಹಾರಗಳನ್ನು ಗುರಿಯಾಗಿಸಿಕೊಂಡಿದೆ ಎಂದು ಭಾರತದಲ್ಲಿನ ಉಕ್ರೇನ್ ರಾಯಭಾರ ಕಚೇರಿ ಆರೋಪಿಸಿದೆ.
ಚಲಿಸುತ್ತಿದ್ದ ಕಾರಿನಲ್ಲಿ ಯುವಕರ ತಂಡ ಹುಚ್ಚಾಟ ಮೆರೆದ ಘಟನೆ ಸುಳ್ಯ ತಾಲೂಕು ಸಂಪಾಜೆ ಗ್ರಾಮದ ಗೂನಡ್ಕ ಪರಿಸರದಲ್ಲಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕರನ್ನು ಸುಳ್ಯ ಪೊಲೀಸರು ಪತ್ತೆ ಹಚ್ಚಿ ವಿಚಾರಣೆ ನಡೆಸಿದ್ದಾರೆ.
ಪತ್ನಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮೂಲದ ಉದ್ಯಮಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಕೊಲೆ ಮಾಡಿ ಶವವನ್ನು ಚರಂಡಿಗೆಸೆಯಲಾಗಿತ್ತು. ಆದರೆ ಈ ಕೊಲೆ ಪ್ರಕರಣದಲ್ಲಿ ಮಹತ್ವದ ಸುಳಿವು ನೀಡಿದ್ದು, ಆಕೆ ಧರಿಸಿದ ಮೂಗುತಿ. ಇದು ಪೊಲೀಸರಿಗೆ ನಿಗೂಢ ಕೊಲೆ ಪ್ರಕರಣವನ್ನು ಬೇಧಿಸುವಲ್ಲಿ ಸಹಾಯ…
ಬೆಳ್ತಂಗಡಿ: ನಾರಾವಿ ಕುತ್ತೂರಿನಲ್ಲಿ ಸಂಭವಿಸಿದ ಭೀಕರ ಬೈಕ್ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಶುಕ್ರವಾರ ತಡರಾತ್ರಿ ಸಂಭವಿಸಿದೆ. ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದವರನ್ನು ಪ್ರಶಾಂತ್ ಹಾಗೂ ದಿನೇಶ್ ಎನ್ನಲಾಗಿದೆ. ಕುತ್ತೂರು ಪುರುಷ ಗುಡ್ಡೆ ಸಮೀಪ ಕೊಕ್ರಾಡಿ ನಾರಾವಿ ರಸ್ತೆಯಲ್ಲಿ…
Welcome, Login to your account.
Welcome, Create your new account
A password will be e-mailed to you.