ಅಪರಾಧ

ರಸ್ತೆ ಅಪಘಾತ: ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು.!

ರಸ್ತೆ ಅಪಘಾತದಲ್ಲಿ ಇಬ್ಬರು ಕೇರಳ ಮೂಲದ ನರ್ಸಿಂಗ್‌ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಮೃತರು ಕರ್ನಾಟಕದ ಚಿತ್ರದುರ್ಗದಲ್ಲಿರುವ ಎಸ್‌ಜೆಎಂ ನರ್ಸಿಂಗ್ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳಾದ ಯಾಸಿನ್ ಮತ್ತು ಅಲ್ತಾಫ್. ಅವರು ಕೊಲ್ಲಂನ ಅಂಚಲ್‌ನ ಸ್ಥಳೀಯರು.

ಕೇರಳಕ್ಕೆ ಅಕ್ರಮ ಮರ ಸಾಗಾಟ: ವಾಹನ ವಶಕ್ಕೆ

ಯಾವುದೇ ಅನುಮತಿ ಇಲ್ಲದೆ ಅಕ್ರಮವಾಗಿ ವಿವಿಧ ಬಗೆಯ ಮರದ ದಿಮ್ಮಿಗಳನ್ನು ಪಿಕ್ ಅಪ್ ವಾಹನದಲ್ಲಿ ಸಾಗಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯಂತೆ ಮಂಗಳೂರು ಅರಣ್ಯ ಸಂಚಾರಿ ದಳದ ಅಧಿಕಾರಿ ಮಾ.22ರ ಶನಿವಾರ ಬಂಟ್ವಾಳದ ಕಡಂಬು ಎಂಬಲ್ಲಿ ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದುಕೊಂಡಿದ್ದಾರೆ.

ಕೊಲೆಯಾದಾಕೆ ಒಂದೂವರೆ ವರ್ಷ ಬಳಿಕ ಮನೆಗೆ ಬಂದಾಗ!! ಈಕೆಯ ಕೊಲೆ ಪ್ರಕರಣದಲ್ಲಿ ನಾಲ್ಕು ಮಂದಿ ಜೈಲು ಪಾಲು!

ಸತ್ತು ಹೋಗಿದ್ದಾಳೆ ಎಂದು ಗುರುತಿಸಲಾದ ಮಹಿಳೆಯೊಬ್ಬಳು 18 ತಿಂಗಳ ಬಳಿಕ ಪ್ರತ್ಯಕ್ಷವಾದ ವಿಲಕ್ಷಣ ಘಟನೆ ಇತ್ತೀಚೆಗೆ ಮಧ್ಯಪ್ರದೇಶದ ಮಂರ್ ಜಿಲ್ಲೆಯಲ್ಲಿ ನಡೆದಿದೆ. ಮಹಿಳೆಯ ಮನೆಯವರು ಆಕೆಯ ಅಂತಿಮ ಕ್ರಿಯೆಗಳನ್ನೂ ನಡೆಸಿದ್ದಾರೆ. ವಿಚಿತ್ರ ಏನೆಂದರೆ, ಆಕೆಯ ಕೊಲೆ ಪ್ರಕರಣದಲ್ಲಿ ನಾಲ್ಕು ಮಂದಿ ಜೈಲು…

ಸುಳ್ಯ: ರೇಬಿಸ್ ದೃಢ, ಮಹಿಳೆ ಸಾವು!!

ಹೊಟ್ಟೆನೋವು ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಸುಳ್ಯದ ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಬಂದಿದ್ದರು. ಈ ವೇಳೆ ನೀರನ್ನು ನೋಡಿ ಬೊಬ್ಬೆ ಹಾಕುವುದು ಸಹಿತ ವಿಚಿತ್ರ ವರ್ತನೆ ತೋರುತ್ತಿದ್ದ ಆಕೆಯೊಂದಿಗೆ ವೈದ್ಯರು ಪೂರಕ ಮಾಹಿತಿ ಕೇಳಿದಾಗ ನಾಯಿ ಕಚ್ಚಿದ್ದ ಬಗ್ಗೆ ತಿಳಿಸಿದ್ದರು.

ಮಲ್ಪೆ: ಬೋಟಿನೊಳಗೆ ಬಿದ್ದು ವ್ಯಕ್ತಿ ಮೃತ್ಯು..!

ಮಲ್ಪೆ ಬಂದರಿನಲ್ಲಿ ಮೀನುಗಾರಿಕಾ ಬೋಟೊಂದರಲ್ಲಿ ಕಲಾಸಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಆಯತಪ್ಪಿ ಬೋಟಿನ ಒಳಗೆ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಮಲ್ಪೆಯಲ್ಲಿ ನಡೆದಿದೆ.

ಬೆಳ್ತಂಗಡಿ: ಮರದ ಗೆಲ್ಲು ಮುರಿದು ಬಿದ್ದು ಬೈಕ್ ಸವಾರ ಪ್ರವೀಣ್‌ ಮೃತ್ಯು

ಗೇರುಕಟ್ಟೆ ಜಾರಿಗೆಬೈಲು ಎಂಬಲ್ಲಿ ರಾಜ್ಯ ಹೆದ್ದಾರಿಯಲ್ಲಿ ಹೋಗುತ್ತಿದ್ದ ಬೈಕ್ ಮೇಲೆ ಮರದ ಗೆಲ್ಲು ಮುರಿದು ಬಿದ್ದ ಪರಿಣಾಮ ಬೈಕ್‌ ಸವಾರ ಮೃತಪಟ್ಟ ಘಟನೆ ಗುರುವಾರ ರಾತ್ರಿಯ ವೇಳೆ ಸಂಭವಿಸಿದೆ.