ಅಪರಾಧ

ಹಿಂದೂ ಮುಖಂಡ ಮಂಜು ಕೊಳ ಚೂರಿ ಇರಿತ: ಐವರ ಬಂಧನ!!

ಪ್ರೀತಿಯ ವಿಚಾರದಲ್ಲಿ ರಾಜಿ ಪಂಚಾಯತಿ ನಡೆಸಲು ತೆರಳಿದ್ದ ವೇಳೆ ಹಿಂದೂ ಸಂಘಟನೆಯ ಮುಖಂಡ ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಅವರ ಪತಿ ಮಂಜು ಕೊಳ ಅವರಿಗೆ ಯುವಕನೋರ್ವ ಚೂರಿ ಇರಿದ ಘಟನೆ ಮಲ್ಪೆಯಲ್ಲಿ ಮಂಗಳವಾರ ರಾತ್ರಿ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು…

ಪುತ್ತೂರು: ಸ್ಕೂಟರ್ ಡಿಕ್ಕಿಯಿಂದ 3.5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು!!

ಪುತ್ತೂರು: ಸ್ಕೂಟರ್ ಡಿಕ್ಕಿಯಲ್ಲಿ ಇಡಲಾಗಿದ್ದ ಚಿನ್ನಾಭರಣ ಕಳವಾಗಿರುವ ಬಗ್ಗೆ ಮಹಿಳೆಯೊಬ್ಬರು ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆ ಯಲ್ಲಿ ದೂರು ದಾಖಲಿಸಿದ್ದಾರೆ. ಕೋಳ್ತಾಡು ಗ್ರಾಮದ ಬಾರೆಬೆಟ್ಟು ನಿವಾಸಿ ವಸಂತ ಪೂಜಾರಿ ಅವರ ಪತ್ನಿ ದಿವ್ಯ ದೂರುದಾರರು. ಫೆಬ್ರವರಿ 28ರಂದು ಗಂಡನೊಂದಿಗೆ ಸ್ಕೂಟರ್‌ನಲ್ಲಿ…

ಮಂಗಳೂರು: ಲಂಚ ಸ್ವೀಕರಿಸುವಾಗ ಎಸ್ಡಿಎ ಲೋಕಾಯುಕ್ತ ಬಲೆಗೆ

ಮಂಗಳೂರು: ಸರ್ಕಾರಿ ಕಾಮಗಾರಿಯ ಬಿಲ್ ಪಾವತಿಗೆ ಲಂಚ ಬೇಡಿಕೆ ಇಟ್ಟಿದ್ದ ಆರೋಪದ ಮೇಲೆ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಕಚೇರಿ, ವಿದ್ಯುತ್ ಉಪವಿಭಾಗ, ಲೋಕೋಪಯೋಗಿ ಇಲಾಖೆ, ಮಂಗಳೂರು ಕಚೇರಿಯ ಎಸ್ಡಿಎ ಸಂಪತ್  ಕರ್ನಾಟಕ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಫಿರ್ಯಾದುದಾರರು ಕರ್ನಾಟಕ ಸರ್ಕಾರದ…

ಉಳ್ಳಾಲ: ಇನ್‌ಸ್ಟಾಗ್ರಾಂನಲ್ಲಿ ಬಾಂಬ್ ಬೆದರಿಕೆ ಪೋಸ್ಟ್ – ಪ್ರಕರಣ ದಾಖಲು

ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಬಾಂಬ್ ಸ್ಫೋಟದ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ. ಮಾರ್ಚ್ 2ರಂದು ಬೆಳಿಗ್ಗೆ ಸುಮಾರು 11.00 ಗಂಟೆಯ ವೇಳೆಗೆ ಉಳ್ಳಾಲ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿ ಸಂತೋಷ್ ದೊಡ್ಡಮನಿ ಅವರು ಸೋಶಿಯಲ್ ಮೀಡಿಯಾ…

ಮಂಗಳೂರು ವಿಮಾನ ನಿಲ್ದಾಣದಲ್ಲಿ 80 ಲಕ್ಷ ಮೌಲ್ಯದ ವಿದೇಶಿ ಕರೆನ್ಸಿ ವಶ: ಮೂವರು ಬಂಧನ

ಮಂಗಳೂರು:ಸುಮಾರು 80 ಲಕ್ಷ ಮೌಲ್ಯದ ವಿದೇಶಿ ಕರೆನ್ಸಿಯನ್ನು ಅಕ್ರಮವಾಗಿ ಸಾಗಿಸಲು ಯತ್ನಿಸಿದ ಪ್ರಕರಣವನ್ನು ಬಜಪೆಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪತ್ತೆ ಹಚ್ಚಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಕೇರಳ ಮೂಲದ ಓರ್ವ ಪುರುಷ ಹಾಗೂ ಇಬ್ಬರು ಮಹಿಳೆಯರನ್ನು ಅಧಿಕಾರಿಗಳು ಬಂಧಿಸಿದ್ದಾರೆ. ಡೆರೆಕ್ಟೋರೇಟ್…

ವೇಣೂರಿನಲ್ಲಿ ಚಿನ್ನ ಪಾಲೀಶ್ ಹೆಸರಿನಲ್ಲಿ ವಂಚನೆ: ಆರೋಪಿಯ ಬಂಧನ

ವೇಣೂರು:ಚಿನ್ನದ ಒಡವೆಗಳನ್ನು ಪಾಲೀಶ್ ಮಾಡಿ ತೊಳೆದು ಕೊಡುತ್ತೇನೆ ಎಂದು ನಂಬಿಸಿ ವಂಚನೆ ನಡೆಸಿದ ಆರೋಪಿಯನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಬಿಹಾರ ರಾಜ್ಯದ ಸುಪೌಲ್ ಜಿಲ್ಲೆಯ ನಿವಾಸಿ ಚಂದನ್ ಕುಮಾರ್ (30)ಎಂದು ಗುರುತಿಸಲಾಗಿದೆ. ಫೆ. 10 ರಂದು ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ…

ಬಂಟ್ವಾಳದಲ್ಲಿ ಅಕ್ರಮ ಜಾನುವಾರು ಸಾಗಾಟ ಪತ್ತೆ: ವಾಹನ ಸಹಿತ ಇಬ್ಬರು ವಶಕ್ಕೆ

ಬಂಟ್ವಾಳ: ತಾಲೂಕಿನ ಕೊಳ್ಳಾಡು ಗ್ರಾಮದ ಕರೈ ಪ್ರದೇಶದಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ವಾಹನವನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಖಚಿತ ಮಾಹಿತಿಯ ಆಧಾರದಲ್ಲಿ ಫೆಬ್ರವರಿ 26ರ ರಾತ್ರಿ ವಿಟ್ಲ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ (ಕಾನೂನು ಮತ್ತು ಸುವ್ಯವಸ್ಥೆ)…

ಮಂಗಳೂರು: ಸ್ನೇಹಿತನ ಖಾತೆ ಬಳಸಿ ಸೈಬರ್ ಮೋಸ – ಅಂತರ್‌ರಾಜ್ಯ ಜಾಲದ ಆರು ಮಂದಿ ಬಂಧನ

ಮಂಗಳೂರು: ಸೈಬರ್ ವಂಚನೆಗಾಗಿ ಸ್ನೇಹಿತನ ಬ್ಯಾಂಕ್ ಖಾತೆಯನ್ನು ದುರುಪಯೋಗಪಡಿಸಿಕೊಂಡ ಪ್ರಕರಣದಲ್ಲಿ, ಮಂಗಳೂರು ನಗರ ಪೊಲೀಸರು ಅಂತರ್‌ರಾಜ್ಯ ಜಾಲಕ್ಕೆ ಸೇರಿದ ಆರು ಮಂದಿಯನ್ನು ಬಂಧಿಸಿದ್ದಾರೆ. ಪ್ರಕರಣವನ್ನು ತನಿಖೆ ನಡೆಸಿದ ಮಂಗಳೂರು ನಗರ ಪೋಲಿಸ್ ಅಧಿಕಾರಿಗಳು ಆರೋಪಿಗಳನ್ನು ವಶಕ್ಕೆ ಪಡೆದು ಮುಂದಿನ ಕ್ರಮ…

ಮನೆಯಲ್ಲೇ ಅಕ್ರಮ ಗೋಹತ್ಯೆ, ಮಾಂಸ: ಮನೆ ಜಪ್ತಿ!

ಉಪ್ಪಿನಂಗಡಿ: ಮನೆ ಆವರಣದಲ್ಲಿ ಅಕ್ರಮವಾಗಿ ಗೋ ಹತ್ಯೆ ಮಾಡಿ ಮಾಂಸ ಮಾಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದ್ದು, ಮನೆಯನ್ನು ಇದೀಗ ಉಪ್ಪಿನಂಗಡಿ ಪೊಲೀಸರು ಜಪ್ತಿ ಮಾಡಿದ್ದಾರೆ. ಫೆ. 26ರಂದು ರಾತ್ರಿ, ಬೆಳ್ತಂಗಡಿ ಬಾರ್ಯ ಗ್ರಾಮದ ಹೊಸವಕ್ಲು ಎಂಬಲ್ಲಿ ಮನೆಯೊಂದರ ಆವರಣದಲ್ಲಿ ಅಕ್ರಮವಾಗಿ ಗೋ ಹತ್ಯೆ ಮಾಡಿ ಮಾಂಸ…

ಮಂಗಳೂರು: ಬೈಕ್ ಗೆ ಲಾರಿ ಡಿಕ್ಕಿ– ಬೈಕ್ ಸವಾರ ಸ್ಥಳದಲ್ಲೇ ಸಾವು

ಮಂಗಳೂರು: ಮಂಗಳೂರು ಹೊರವಲಯದ ಪಣಂಬೂರು ಇಂಡಿಯನ್ ಆಯಿಲ್ ಪೆಟ್ರೋಲ್ ಪಂಪ್ ಮುಂಭಾಗ ಗುರುವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ಮೂಲತಃ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನವರು ಹಾಗೂ ಸದ್ಯ ಮಂಗಳೂರು ಬಿಜೈಯಲ್ಲಿ ಬಾಡಿಗೆ ಮನೆಯಲ್ಲಿ…