ನಿಧನ

ದಂಬೆತ್ತಿಮಾರು ನಿವಾಸಿ ಮುಳಿಯಾರು ನಿಧನ!!

ಪುತ್ತೂರು: ಆರ್ಯಾಪು ಗ್ರಾಮದ ಸಂಪ್ಯ ದಂಬೆತ್ತಿಮಾರು ನಿವಾಸಿ ದಿ. ಬೆಳ್ತ ಅವರ ಪತ್ನಿ ಮುಳಿಯಾರು (80 ವ.) ಆ. 14ರಂದು ಸಂಜೆ ಸ್ವಗೃಹದಲ್ಲಿ ನಿಧನರಾದರು. ಮೃತರು ಪುತ್ರರಾದ ಬೇಡು, ಬಾಬು, ಪುತ್ರಿಯರಾದ ಐತೆ, ಲಕ್ಷ್ಮೀ, ಸೊಸೆಯಂದಿರಾದ ಜಾನಕಿ, ಸುಮಿತ್ರಾ, ಮೊಮ್ಮಕ್ಕಳನ್ನು ಅಗಲಿದ್ದಾರೆ. ಪುತ್ತೂರಿನ…

ಬೆಂಕಿ ಹಚ್ಚಿಕೊಂಡು ವೃದ್ಧೆ ಆತ್ಮಹತ್ಯೆ!

ವಯೋಸಹಜ ಕಾಯಿಲೆಯಿಂದ ಬಳಲುತಿದ್ದ ವೃದ್ಧೆಯೋರ್ವರು ಜೀವನದಲ್ಲಿ ಜಿಗುಪ್ಸೆಗೊಂಡು ಬುಧವಾರ ಬೆಳಗ್ಗೆ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಮೈಮೇಲೆ ಡಿಸೇಲ್ ಸುರಿದುಕೊಂಡು ಬೆಂಕಿಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಸಿದ್ಧಾಪುರ ಗ್ರಾಮದ ಗಿರಿಜಮ್ಮ ಶೆಡ್ತಿ (82) ಆತ್ಮಹತ್ಯೆ ಮಾಡಿಕೊಂಡವರು.…

ಕಾಸರಗೋಡು: ಮದುವೆ ನಿಶ್ಚಯವಾಗಿದ್ದ ಯುವತಿ ಆತ್ಮಹತ್ಯೆ; ಆಘಾತ ತಾಳಲಾರದೆ ಭಾವೀ ಪತಿಯೂ ಸಾವು!!

ಕಾಸರಗೋಡು: ಮದುವೆ ನಿಶ್ಚಯವಾಗಿದ್ದ ಎಸ್‌ಬಿಐ ಉದ್ಯೋಗಿ ಯುವತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಬೆನ್ನಲ್ಲೇ, ಆಕೆಯ ಭಾವೀ ಪತಿಯೂ ಮೃತಪಟ್ಟಿರುವ ದಾರುಣ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಮೃತರನ್ನು ಕಾಸರಗೋಡು ಪೂಚ್ಚಕ್ಕಾಡ್ ನಿವಾಸಿ ಪಿ. ಅನುಶ್ರೀ (25) ಹಾಗೂ ಕಣ್ಣೂರು ಅಂಬಲತ್ತಟ್ಟು ನಿವಾಸಿ ವಿ. ಅಮಲ್ (27)…

ಮಂತ್ರಾಲಯಕ್ಕೆ ತೆರಳಿ ವಾಪಸಾಗುತ್ತಿದ್ದ ಪುತ್ತೂರು ಮೂಲದ ಉದ್ಯಮಿ ಬಳ್ಳಾರಿಯಲ್ಲಿ ಹೃದಯಾಘಾತಕ್ಕೆ ಬಲಿ

ಪುತ್ತೂರು: ಮಂತ್ರಾಲಯಕ್ಕೆ ತೆರಳಿ ವಾಪಸಾಗುತ್ತಿದ್ದ ಪುತ್ತೂರು ಮೂಲದ ಉದ್ಯಮಿಯೊಬ್ಬರು ಬಳ್ಳಾರಿ ಬಸ್‌ ನಿಲ್ದಾಣದಲ್ಲಿ ಹೃದಯಾಘಾತಕ್ಕೊಳಗಾಗಿ ಮೃತಪಟ್ಟ ಘಟನೆ ನಡೆದಿದೆ. ಬೆಳಿಯೂರುಕಟ್ಟೆ ಮೂಲದವರಾಗಿದ್ದು, ಸದ್ಯ ಮಂಗಳೂರಿನಲ್ಲಿ ವಾಸವಾಗಿದ್ದ ಸಂದೀಪ್ ಶೆಟ್ಟಿ (44) ಮೃತರು. ಆ.9ರಂದು ಮಂಗಳೂರಿನಿಂದ…

ಡೇವಿಡ್ ಡಿಸೋಜ ಕೊಲೆ ಪ್ರಕರಣ: ಮೂವರು ಆರೋಪಿಗಳ ಬಂಧನ

ಉಡುಪಿ: ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೆ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಹಣಕಾಸಿನ ವಿಚಾರಕ್ಕೆ ಸಂಬಂಧಿಸಿ ಡೇವಿಡ್ ಡಿಸೋಜ ಅವರನ್ನು ಹತ್ಯೆಗೈಯಲು ಉತ್ತರ ಪ್ರದೇಶ, ಜಾರ್ಖಂಡ್…

ಪಡುಬಿದ್ರಿಯಲ್ಲಿ ಗುಂಡಿನ ದಾಳಿ: ಮುದರಂಗಡಿ ಗ್ರಾ.ಪಂ. ಮಾಜಿ ಅಧ್ಯಕ್ಷ ಡೇವಿಡ್ ಡಿಸೋಜ ಹತ್ಯೆ

ಪಡುಬಿದ್ರಿ: ಮುದರಂಗಡಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಹಾಗೂ ಗುತ್ತಿಗೆದಾರ ಡೇವಿಡ್ ಡಿಸೋಜ ಅವರು ದುಷ್ಕರ್ಮಿಗಳ ಗುಂಡಿನ ದಾಳಿಯಲ್ಲಿ ಮೃತಪಟ್ಟ ಘಟನೆ ಪಡುಬಿದ್ರಿಯಲ್ಲಿ ನಡೆದಿದೆ. ಮಾಹಿತಿಯಂತೆ, ಗುರುವಾರ ಮಧ್ಯಾಹ್ನ ವಾಹನದಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಡೇವಿಡ್ ಡಿಸೋಜ ಅವರ ಮೇಲೆ…

ವಿಟ್ಲ: ಕಾಲು ಜಾರಿ ಕೆರೆಗೆ ಬಿದ್ದು ಕೂಲಿ ಕಾರ್ಮಿಕ ಸಾವು

ವಿಟ್ಲ: ಕಾಲು ಜಾರಿ ಕೆರೆಗೆ ಬಿದ್ದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ಅಡ್ಯನಡ್ಕ ಸಮೀಪದ ಮನಿಮುಂಡದಲ್ಲಿ ನಡೆದಿದೆ. ಮೃತರನ್ನು ದಿನೇಶ್ ನಾಯ್ಕ (32) ಎಂದು ಗುರುತಿಸಲಾಗಿದೆ. ಅವರು ಕೂಲಿ ಕಾರ್ಮಿಕರಾಗಿದ್ದರು. ಘಟನೆಯಿಂದ ದಿನೇಶ್ ಅವರು ಪತ್ನಿ ಹಾಗೂ ತಂದೆ-ತಾಯಿಯನ್ನು…

ಸೂರಿಂಜೆ: ವಾಲಿಬಾಲ್ ಆಡುತ್ತಿದ್ದಾಗ ಕುಸಿದು ಬಿದ್ದು ವಿದ್ಯಾರ್ಥಿ ಲಿಖಿತ್ ಮೃತ್ಯು!!

ಸುರತ್ಕಲ್: ಸ್ನೇಹಿತರೊಂದಿಗೆ ವಾಲಿಬಾಲ್ ಆಡುತ್ತಿದ್ದ ವೇಳೆ 10ನೇ ತರಗತಿ ವಿದ್ಯಾರ್ಥಿಯೊಬ್ಬ ಹಠಾತ್ ಕುಸಿದು ಬಿದ್ದು ಮೃತಪಟ್ಟ ದುರ್ಘಟನೆ ಸುರತ್ಕಲ್ ಸಮೀಪದ ಸೂರಿಂಜೆ ಗ್ರಾಮದಲ್ಲಿ ಬುಧವಾರ (ಆ.5) ಸಂಜೆ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಲಿಖಿತ್ ಅಮೀನ್ (15) ಎಂದು ಗುರುತಿಸಲಾಗಿದೆ. ಈತ ಸೂರಿಂಜೆ ನಿವಾಸಿ…

ಅಡಿಕೆ ಮರ ಮುರಿದು ಬಿದ್ದು ಕುಂತೂರಿನ ಯಾದವ ಗೌಡ ಮೃತ್ಯು!!

ಮಳೆಗಾಳಿಗೆ ಅಡಿಕೆಮರ ಮುರಿದು ಬಿದ್ದು ವ್ಯಕ್ತಿ ಸಾವನ್ನಪ್ಪಿದ್ದ ಘಟನೆ ಕಡಬ ತಾಲೂಕಿನ ಕುಂತೂರು ಗ್ರಾಮದ ಕೇವಳದಲ್ಲಿ ನಡೆದಿದೆ. ಯಾದವ ಗೌಡ (66) ಎಂಬವರು ಮೃತಪಟ್ಟವರು. ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಏಕಾಏಕಿ ಬೀಸಿದ ಮಳೆಗಾಳಿಗೆ ಅಡಿಕೆಮರ ಮುರಿದು ಬಿದ್ದು ಯಾದವ್‌ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.…

ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ!

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ (85) ನಿಧನ ಹೊಂದಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಜುಲೈ 15ರಿಂದ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು (ಜುಲೈ 18) ಕೊನೆಯುಸಿರೆಳೆದಿದ್ದಾರೆ.…