ಮಲ್ಪೆ ಪೋಲೀಸ್ ಠಾಣೆ ವ್ಯಾಪ್ತಿಯ ಲಕ್ಷ್ಮೀನಗರದ ಪಾಳೆಕಟ್ಟೆ ನಿವಾಸಿ ಪ್ರಸಾದ್ (40)ರವರ ಸಾವು ಹಲವು ಸಂಶಯಕ್ಕೆ ಎಡೆಮಾಡಿದ್ದು ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ತಕ್ಷಣ ಉನ್ನತ ಮಟ್ಟದ ತನಿಖೆ ನಡೆಸುವಂತೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಮಿತಿ ಸದಸ್ಯ ಜಯನ್ ಮಲ್ಪೆ ಆಗ್ರಹಿಸಿದ್ದಾರೆ.
Browsing: ಜಿಲ್ಲಾ ಸುದ್ದಿ
ಮೇಸ್ತ್ರೀ ಸಹಾಯಕರಾಗಿ ಕೆಲಸಕ್ಕೆ ಹೋಗುತ್ತಿದ್ದ ಸಾಲ್ಮರ ಕೆರೆಮೂಲೆ ನಿವಾಸಿ ಶಿವಪ್ಪ ಅವರು ಮೃತಪಟ್ಟ ವಿಚಾರಕ್ಕೆ ಸಂಬಂಧಿಸಿ ಕೆಲಸ ಮಾಡಿಸಿಕೊಂಡ ಮಾಲಕರ ಸಹಿತ ಮೂವರ ವಿರುದ್ದ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಲ್ಲಾರೆಯ ಕಟ್ಟಡದ ಮಹಡಿಯಿಂದ ಬಿದ್ದು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಫಾತಿಮತ್ ನಿಶ್ಚಾ (17) ಅವರು ನ. 17ರಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಭಾರಿ ಮಳೆಗೆ ಸಿಡಿಲು ಬಡಿದು ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ನಡೆದಿದೆ.ಮೃತ ವಿದ್ಯಾರ್ಥಿಯನ್ನು ಬಂಟ್ವಾಳ ತಾಲೂಕು
ಖಾಸಗಿ ರೆಸಾರ್ಟ್ ವೊಂದರ ಸ್ವಿಮ್ಮಿಂಗ್ ಪೂಲ್ ನಲ್ಲಿ ಮುಳುಗಿ ಮೂವರು ಯುವತಿಯರು ಮೃತಪಟ್ಟ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಸೋಮೇಶ್ವರದಲ್ಲಿ ಇಂದು ಬೆಳಗ್ಗೆ ನಡೆದಿರುವುದು ವರದಿಯಾಗಿದೆ.
ಬಂಟ್ವಾಳ: ಮಂಚಿ – ಕೊಳ್ನಾಡು ಸರಕಾರಿ ಪ್ರೌಢಶಾಲೆಯಲ್ಲಿ ನಡೆಸಲು ಉದ್ದೇಶಿಸಿರುವ ಬಂಟ್ವಾಳ ತಾಲೂಕು 23ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ‘ಎಳೆಯರ ಗೆಳೆಯ ಮುಳಿಯ’ ಎಂದೇ ಪ್ರಸಿದ್ಧರಾಗಿರುವ ಹಿರಿಯ ಸಾಹಿತಿ ಮುಳಿಯ ಶಂಕರ ಭಟ್ ಅವರನ್ನು ಆಯ್ಕೆಗೊಳಿಸಿ, ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಎಂ.ಪಿ.ಶ್ರೀನಾಥ್ ಘೋಷಿಸಿದ್ದಾರೆ.
ಸಬ್‌ರಿಜಿಸ್ಟ್ರರ್ ಕಚೇರಿಯಲ್ಲಿನ ತಾಂತ್ರಿಕ ದೋಷ ಮತ್ತು ಇ ಖಾತೆಯಲ್ಲಿನ ಲೋಪವನ್ನು ಸರಿಪಡಿಸುವಲ್ಲಿ ತಕ್ಷಣ ಕ್ರಮಕೈಗೊಳ್ಳುವಂತೆ ಆಗ್ರಹಿಸಿ ರಾಜ್ಯ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರಿಗೆ ಪುತ್ತೂರು ಶಾಸಕರಾದ ಅಶೋಕ್ ರೈ ಮನವಿ ಮಾಡಿದ್ದಾರೆ.
ಇಂದಿರಾ ಗಾಂಧಿ ಜನ್ಮ ದಿನ ಆಚರಣಾ ಸಮಿತಿ ನೇತೃತ್ವದಲ್ಲಿ ಭಾರತ ದೇಶದ ಮೊದಲ ಮಹಿಳಾ ಪ್ರಧಾನಿ,ಉಕ್ಕಿನ ಮಹಿಳೆ ದಿ ||ಇಂದಿರಾ ಗಾಂಧಿಯವರ ಜನ್ಮ ದಿನ ಪ್ರಯುಕ್ತ
ಮರದ ತುಂಡುಗಳನ್ನು ಲೋಡ್ ಮಾಡುತ್ತಿದ್ದ ವೇಳೆ ಚಾಲಕ ಏಕಾಏಕಿ ಲಾರಿ ಚಲಾಯಿಸಿದ ಪರಿಣಾಮ ಮರದ ತುಂಡು ಬಿದ್ದು ವ್ಯಕ್ತಿಯೋರ್ವನ ಸಾವಿಗೆ ಕಾರಣನಾದ ಚಾಲಕನಿಗೆ ಪುತ್ತೂರು ನ್ಯಾಯಾಲಯವು ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ ತೀರ್ಪು ನೀಡಿದೆ.
ಬೊಳುವಾರಿನ ಆಂಜನೇಯ ಯಕ್ಷಗಾನ ಕಲಾ ಸೇವಾ ಸಂಘದ 56ನೇ ವಾರ್ಷಿಕೋತ್ಸವ ಮತ್ತು ಆಂಜನೇಯ ಮಹಿಳಾ ಯಕ್ಷಗಾನ ಸಂಘದ 20ನೇ ವರ್ಷಾಚರಣೆಯನ್ನು ವಿಶಿಷ್ಟವಾಗಿ, ಅರ್ಥಪೂರ್ಣವಾಗಿ ಡಿಸೆಂಬರ್ 25ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ನಟರಾಜ ವೇದಿಕೆಯಲ್ಲಿ ಆಚರಿಸಲು ಸಿದ್ಧತಾ ಸಭೆಯು ಪುತ್ತೂರು ಪರ್ಲಡ್ಕ ಅಗಸ್ತ್ಯ ದಲ್ಲಿ ಸಂಘದ ಅಧ್ಯಕ್ಷ ಭಾಸ್ಕರ ಬಾರ್ಯ ಅಧ್ಯಕ್ಷತೆಯಲ್ಲಿ ಜರಗಿತು.