ಕರಾವಳಿ

ಮಳೆ ಕೊರತೆ ಪರಿಣಾಮ: ಬಂಟ್ವಾಳದ ಜಕ್ರಿಬೆಟ್ಟು ಅಣೆಕಟ್ಟಿನಲ್ಲಿ ನೀರಿನ ಮಟ್ಟ ಕುಸಿತ

ಬಂಟ್ವಾಳ:ಈ ಬಾರಿ ಮಳೆ ಕೊರತೆಯಿಂದಾಗಿ ಬಂಟ್ವಾಳ ತಾಲೂಕಿನ ಜಕ್ರಿಬೆಟ್ಟು ಸೇತುವೆ ಸಹಿತ ಕಿಂಡಿ ಅಣೆಕಟ್ಟಿನಲ್ಲಿ ನೀರಿನ ಸಂಗ್ರಹ ಪ್ರಮಾಣ ಅರ್ಧಕ್ಕಿಂತ ಕಡಿಮೆಯಾಗಿದೆ. ಒಟ್ಟು 5.50 ಮೀಟರ್‌ ನೀರು ಸಂಗ್ರಹ ಸಾಮರ್ಥ್ಯ ಹೊಂದಿರುವ ಜಕ್ರಿಬೆಟ್ಟು ಅಣೆಕಟ್ಟಿನಲ್ಲಿ ಪ್ರಸ್ತುತ ಕೇವಲ ಸುಮಾರು 2.80 ಮೀಟರ್‌…

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಮುಂದಿನ 3 ದಿನಗಳಲ್ಲಿ 5 ಜಿಲ್ಲೆಗಳಲ್ಲಿ ಮಳೆ!

ಬೆಂಗಳೂರು:  ಐಎಂಡಿ(  India Meteorological Department) ನೀಡಿರುವ ಹವಾಮಾನ ಮುನ್ಸೂಚನೆಯ ಪ್ರಕಾರ, ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮವಾಗಿ ಮುಂದಿನ ಮೂರು ದಿನಗಳಲ್ಲಿ ರಾಜ್ಯದ ಐದು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಬಹುತೇಕ…

ಕರಾವಳಿ ಜಿಲ್ಲೆಗಳ ಸಮಗ್ರ ಅಭಿವೃದ್ಧಿಗೆ ಸಿಎಂಗೆ ಮನವಿ

ಮಂಗಳೂರು: ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಸಮಗ್ರ ಅಭಿವೃದ್ಧಿಗಾಗಿ ಅಗತ್ಯ ಅನುದಾನ ಹಾಗೂ ಆಡಳಿತಾತ್ಮಕ ಅನುಮೋದನೆ ನೀಡುವಂತೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗಿದೆ. 2026–27ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಕರಾವಳಿ…

ಅಂತರಾಜ್ಯ ಮೀನುಗಾರಿಕಾ ಸಮಸ್ಯೆ ಪರಿಹಾರಕ್ಕೆ ಮುಂದಾದ ಮಹಾರಾಷ್ಟ್ರ ಸಚಿವರು – ಯಶಪಾಲ್ ಸುವರ್ಣ ಭೇಟಿ

ಕರಾವಳಿ: ಕರಾವಳಿ ಕರ್ನಾಟಕದ ಮೀನುಗಾರರು ಅಂತರಾಜ್ಯ ಮೀನುಗಾರಿಕೆಯಲ್ಲಿ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮಹಾರಾಷ್ಟ್ರದ ಮೀನುಗಾರಿಕೆ ಮತ್ತು ಬಂದರು ಸಚಿವ ನಿತೇಶ್ ರಾಣೆ ಅವರನ್ನು ಉಡುಪಿ ಶಾಸಕ ಯಶಪಾಲ್ ಸುವರ್ಣ ಭೇಟಿ ಮಾಡಿ ಚರ್ಚಿಸಿದರು. ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಯ ಮೀನುಗಾರರು…

ಡ್ರಗ್ಸ್ ಮುಕ್ತ ಕರ್ನಾಟಕದತ್ತ ಬಿಗಿ ಕ್ರಮ: ಗೃಹ ಸಚಿವ ಡಾ. ಜಿ. ಪರಮೇಶ್ವರ್

ಮಂಗಳೂರು: ರಾಜ್ಯವನ್ನು ಡ್ರಗ್ಸ್ ಮುಕ್ತವಾಗಿಸುವ ದಿಸೆಯಲ್ಲಿ ಸರ್ಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಮಂಗಳೂರು ನಗರ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನಿರ್ಮಿಸಲಾಗುತ್ತಿರುವ ನೂತನ…

ರಾಸಾಯನಿಕ ಸೋರಿಕೆ ಅಣುಕು ಪ್ರದರ್ಶನ

ಮಂಗಳೂರು:ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ವತಿಯಿಂದ ವಿವಿಧ ಕೈಗಾರಿಕೆ ಮತ್ತು ವಿವಿಧ ಇಲಾಖೆಗಳ ಸಹಭಾಗಿತ್ವದಲ್ಲಿ ಮಂಗಳೂರಿನ ತಣ್ಣೀರುಬಾವಿ ಐಎಂಸಿ ಘಟಕದಲ್ಲಿ ಅಪಾಯಕಾರಿ ರಾಸಾಯನಿಕ ಘಟಕಗಳಲ್ಲಿ ಅಪಘಾತಗಳ ನಿರ್ವಹಣೆ ಕುರಿತು ಅಣಕುಪ್ರದರ್ಶನ ಮಂಗಳವಾರ…

ಎಸ್‌ಎಫ್ ‘ವಂದೇ ಮಾತರಂ’ ಕೋಸ್ಟಲ್ ಸೈಕ್ಲೋಥಾನ್ ಮಂಗಳೂರಿಗೆ!

ಮಂಗಳೂರು:ರಾಷ್ಟ್ರೀಯ ಭಾವನೆ ಮತ್ತು ಕರಾವಳಿ ಜಾಗೃತಿ ಮೂಡಿಸುವ ಉದ್ದೇಶದಿಂದ ಆಯೋಜಿಸಲಾದ ಎಸ್‌ಎಫ್ ‘ವಂದೇ ಮಾತರಂ’ ಕೋಸ್ಟಲ್ ಸೈಕ್ಲೋಥಾನ್-2026 ಫೆಬ್ರವರಿ 18ರಂದು ಮಂಗಳೂರಿಗೆ ಆಗಮಿಸಲಿದೆ. ‘ವಂದೇ ಮಾತರಂ’ 150ನೇ ವಾರ್ಷಿಕೋತ್ಸವದ ಅಂಗವಾಗಿ ಈ ಐತಿಹಾಸಿಕ ಸೈಕ್ಲೋಥಾನ್ ದೇಶದ ಕರಾವಳಿ ಭಾಗಗಳ ಮೂಲಕ…

ಪಿಲಿಕುಳ ಮೃಗಾಲಯದಲ್ಲಿ 150ಕ್ಕೂ ಅಧಿಕ ಪ್ರಾಣಿಗಳ ಸಾವು! ವಿಷಪೂರಿತ ಆಹಾರ ಶಂಕೆ, ಸಮಗ್ರ ತನಿಖೆಗೆ ಒತ್ತಾಯ

ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯ ಪಿಲಿಕುಳ ಮೃಗಾಲಯದಲ್ಲಿ ಕಳೆದ ನಾಲ್ಕು ವರ್ಷಗಳಲ್ಲಿ 150ಕ್ಕೂ ಹೆಚ್ಚು ವನ್ಯಜೀವಿಗಳು ಅಸಹಜವಾಗಿ ಸಾವನ್ನಪ್ಪಿರುವ ಘಟನೆ ಗಂಭೀರ ಆತಂಕಕ್ಕೆ ಕಾರಣವಾಗಿದೆ. ಇತ್ತೀಚೆಗೆ ಸಾವನ್ನಪ್ಪಿದ ಜಿಂಕೆಯ ಮರಣೋತ್ತರ ಪರೀಕ್ಷೆಯಲ್ಲಿ ಹೈಡ್ರೋಸೈನೇಡ್ ಹಾಗೂ ನೈಟ್ರೇಟ್ ಅಂಶಗಳು…

ಮಂಗಳೂರು ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ: ತೀವ್ರ ಶೋಧ

ಮಂಗಳೂರು: ರಾಜ್ಯದ ವಿವಿಧ ಜಿಲ್ಲಾ ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ, ಇ-ಮೇಲ್ ಬಂದಿರುವ ಹಿನ್ನೆಲೆ, ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯಕ್ಕೂ ಬೆದರಿಕೆ ಸಂದೇಶ ಬಂದಿದೆ. ಈ ಕುರಿತು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. ಇ-ಮೇಲ್ ಮೂಲಕ ಬೆದರಿಕೆ…

ಶಿರಾಡಿ ಘಾಟಿನಲ್ಲಿ ಹೆದ್ದಾರಿ ಕಾಮಗಾರಿಗೆ ಹೈಕೋರ್ಟ್ ಬ್ರೇಕ್: ಸಂಚಾರಕ್ಕೆ ಸಂಕಷ್ಟ!

ಮಂಗಳೂರು–ಬೆಂಗಳೂರು ಸಂಪರ್ಕದ ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್ ಭಾಗದಲ್ಲಿ ನಡೆಯುತ್ತಿರುವ ಚತುಷ್ಪಥ ರಸ್ತೆ ಕಾಮಗಾರಿಗೆ ಹೈಕೋರ್ಟ್‌ ತಾತ್ಕಾಲಿಕ ತಡೆ ನೀಡಿರುವ ಹಿನ್ನೆಲೆಯಲ್ಲಿ ಸುಮಾರು 400 ಮೀಟರ್‌ ಉದ್ದದ ಕಾಮಗಾರಿ ಸ್ಥಗಿತಗೊಂಡಿದೆ. ಇದರ ಪರಿಣಾಮವಾಗಿ ವಾಹನ ಸಂಚಾರ ಸವಾಲಾಗಿ ಪರಿಣಮಿಸಿದೆ. ಶಿರಾಡಿ…