ನೆಟ್ಟಣಿಗೆಮುಡೂರು ಕೊಟ್ಯಾಡಿಯಲ್ಲಿ ರಸ್ತೆ ಬದಿಯಲ್ಲಿ ನಿಂತಿದ್ದ ಮಹಿಳೆಯೋರ್ವರಿಗೆ ಬೈಕ್ ಡಿಕ್ಕಿಯಾಗಿ ಮೃತಪಟ್ಟ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ, ಚಾಲನಾ ಪರವಾನಿಗೆ ಇಲ್ಲದ ಆರೋಪಿ ಬೈಕ್ ಸವಾರನಿಗೆ ದಂಡ ವಿಧಿಸಿದ್ದು ಬೈಕ್ ಮಾಲಕನಿಗೆ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಮಳೆಗಾಲದಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರ ಹಾಗೂ ಲೋಕೋ ಪಯೋಗಿ ಇಲಾಖೆಯ ಪುತ್ತೂರು ಉಪ ವಿಭಾಗ ವ್ಯಾಪ್ತಿಗೆ ಒಳಪಡುವ ಎಲ್ಲಾ ರಸ್ತೆಗಳ ಹೊಂಡ ಮುಚ್ಚುವಂತೆ ಪುತ್ತೂರು ಶಾಸಕರಾದ ಅಶೋಕ್ ರೈ ಅವರು ಲೋಕೋಪಯೋಗಿ ಇಲಾಖೆಗೆ ಸೂಚನೆಯನ್ನು ನೀಡಿದ್ದು ಅದರಂತೆ ಬಹುತೇಕ ಕಡೆಗಳಲ್ಲಿ ರಸ್ತೆ ಹೊಂಡ ಮುಚ್ಚುವ ಕಾರ್ಯ…
ರೋಟರಿ ಪುತ್ತೂರು ಎಲೈಟ್ ಹಾಗೂ ನಿರತ ನಿರಂತ ಬಹುವಚನಂ ಆಶ್ರಯದಲ್ಲಿ ಅಟ್ಟಾಮುಟ್ಟಾ ಮಕ್ಕಳ ನಾಟಕೋತ್ಸವವು ನ.28 ರಿಂದ 30 ರ ವರೆಗೆ ಪುತ್ತೂರು ಸುದಾನ ವಿದ್ಯಾಸಂಸ್ಥೆಯ ಎಡ್ವರ್ಡ್ ಹಾಲ್ ನಲ್ಲಿ ನಡೆಯಲಿದೆ.
ಸ್ಥಾನ ಅವಧಿ ಹಂಚಿಕೆ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿದೆ. ಬಿಜೆಪಿ ಮತ್ತು ಶಿವಸೇನೆ ನಡುವೆ ಅಧಿಕಾರ ಹಂಚಿಕೆ ಸೂತ್ರವನ್ನು ಅಂತಿಮಗೊಳಿಸಲಾಗಿದೆ ಎಂದು ಹೇಳಲಾಗಿದೆ.ದೇವೇಂದ್ರ ಫಡ್ನವೀಸ್ ಅವರು ಮೊದಲ 2.5 ವರ್ಷಗಳ ಕಾಲ ಮಹಾರಾಷ್ಟ್ರ ಸಿಎಂ ಆಗಿ ಸೇವೆ ಸಲ್ಲಿಸುತ್ತಾರೆ.
ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 2 ಗ್ರಾ.ಪಂ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ 2 ವಾರ್ಡ್ ಗಳಲ್ಲೂ ಕಾಂಗ್ರೆಸ್ ಜಯಭೇರಿ ಭಾರಿಸಿದೆ.
ಕೆಎಸ್ಆರ್ ಟಿಸಿ ಬಸ್ ಮತ್ತು ಮಿನಿ ಗೂಡ್ಸ್ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ಹೊಸಮಠ ಸಮೀಪದ ದೇರಾಜೆಯಲ್ಲಿ ನಡೆದಿದೆ.
ಪುತ್ತೂರು ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಬಳಿಯಿಂದ ಎಪಿಎಂಸಿ ರಸ್ತೆಗೆ ತೆರಳುವಲ್ಲಿ ನಿಲ್ದಾಣದ ಬಳಿಯ ತಿರುವನ್ನು ತೆರವು ಮಾಡುವಂತೆ ಶಾಸಕ ಅಶೋಕ್ ರೈ ಸೂಚನೆ ನೀಡಿದ್ದಾರೆ.
ಅಕ್ರಮ ಮರಳುಗಾರಿಕೆ ಅವ್ಯಾಹತವಾಗಿ ಮುಂದುವರಿದಿದ್ದು, ರವಿವಾರ ಮುಂಜಾವ ಮರಳುಗಾರಿಕೆಯಲ್ಲಿ ನಿರತರಾಗಿದ್ದವರು ಸ್ಥಳೀಯ ಮೀನುಗಾರ ಯುವಕನೋರ್ವನಿಗೆ ಗಂಭೀರವಾಗಿ ಹಲ್ಲೆ ನಡೆಸಿರುವ ಘಟನೆ ಸಂಭವಿಸಿದೆ.
ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ.ರಿ ಮೆಲ್ಕಾರ್ ಬಂಟ್ವಾಳ ಇದರ ತೃತೀಯ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆಯ ಬಿಡುಗಡೆಯು ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜರಗಿತು.
ಸೋಮೇಶ್ವರ ಇಲ್ಲಿನ ರುದ್ರಬಂಡೆಯಿಂದ ಸಮುದ್ರಕ್ಕೆ ಹಾರಿದ ಯುವತಿಯನ್ನು ಈಜುಗಾರರು ರಕ್ಷಿಸಿದ ಘಟನೆ ಉಳ್ಳಾಲದಲ್ಲಿ ನಡೆದಿದೆ.
Welcome, Login to your account.
Welcome, Create your new account
A password will be e-mailed to you.