ಕರಾವಳಿ

ಕಡಬ: ಸೇತುವೆ ಅಧಿಕೃತ ಉದ್ಘಾಟನೆಗೆ ಮುನ್ನವೇ ಲಕ್ಷ ರೂ ಮೌಲ್ಯದ ಸೋಲಾರ್ ದೀಪಗಳನ್ನು ಕದ್ದೊಯ್ದ ಕಳ್ಳರು

ಎಡಮಂಗಲ-ಕಡಬವನ್ನು ಸಂಪರ್ಕಿಸುವ ಪ್ರಮುಖ ಸೇತುವೆಯಾಗಿರುವ ಪಿಜಕ್ಕಳದ ಪಾಲೋಳಿ ಸೇತುವೆಯಲ್ಲಿ ಅಳವಡಿಸಿರುವ ಲಕ್ಷ ರೂ ಬೆಲೆಬಾಳುವ ದಾರಿದೀಪಗಳನ್ನು ಕಳ್ಳರು ಕದ್ದೊಯ್ದ ಘಟನೆ ಡಿ.10 ರಾತ್ರಿ ನಡೆದಿದೆ

ಡಿ. 14ರಂದು ಸಾವರ್ಕರ್ ಸಭಾಭವನ ಉದ್ಘಾಟನೆ | ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನಲ್ಲಿ 3 ಕೋಟಿ ರೂ.…

ವಿವೇಕಾನಂದ ವಿದ್ಯಾವರ್ಧಕ ಸಂಘದ ವತಿಯಿಂದ ವಿವೇಕಾನಂದ ಕಾಲೇಜ್ ಆಫ್ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿಯಲ್ಲಿ ಸುಮಾರು 3 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಸುಸಜ್ಜಿತ ಹವಾನಿಯಂತ್ರಿತ ಸಾವರ್ಕರ್ ಸಭಾಂಗಣದ ಉದ್ಘಾಟನೆ ಡಿ. 14ರ ಮಧ್ಯಾಹ್ನ 12 ಗಂಟೆಗೆ ನಡೆಯಲಿದೆ 

ಡಿ.14, 19, 20ರಂದು ಸವಣೂರು ವಿದ್ಯಾರಶ್ಮಿ ವಿದ್ಯಾಲಯದಲ್ಲಿ “ಕ್ರೀಡಾ ರಶ್ಮಿ”, “ಸಮ್ಮಾನ ರಶ್ಮಿ”, “ಸಂಭ್ರಮ…

ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ವಾರ್ಷಿಕ ಕ್ರೀಡಾಕೂಟ ‘ಕ್ರೀಡಾ ಸಂಭ್ರಮ, ಬಹುಮಾನ ವಿತರಣೆ ‘ಸಮ್ಮಾನ ರಶ್ಮಿ’ ಹಾಗೂ ವಾರ್ಷಿಕೋತ್ಸವ ಸಮಾರಂಭ ‘ಸಂಭ್ರಮ ರಶ್ಮಿ’ ಡಿ.14, 19 ಹಾಗೂ 20 ರಂದು ನಡೆಯಲಿದೆ ಎಂದು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸವಣೂರು ಸೀತಾರಾಮ ರೈ ತಿಳಿಸಿದ್ದಾರೆ.

ಬಲ್ನಾಡು ಗ್ರಾಮ ಅರಣ್ಯ ಸಮಿತಿಯ ನೂತನ ಅಧ್ಯಕ್ಷರಾಗಿ  ಸಾಜ ರಾಧಾಕೃಷ್ಣ ಆಳ್ವ ಆಯ್ಕೆ

ಬಲ್ನಾಡು ಗ್ರಾಮ ಅರಣ್ಯ ಸಮಿತಿ ಕಾರ್ಯಕಾರಿಣಿಗೆ ಮುಂದಿನ 5 ವರ್ಷಕ್ಕೆ ನೂತನ ಅಧ್ಯಕ್ಷರಾಗಿ ಸಾಜ ರಾಧಾಕೃಷ್ಣ ಆಳ್ವ ಆಯ್ಕೆಯಾಗಿದ್ದಾರೆ.

ಸೋಮೇಶ್ವರ: ಸಮುದ್ರಕ್ಕೆ ಹಾರಿ ವ್ಯಕ್ತಿ ಆತ್ಮಹತ್ಯೆ..!

ಸೋಮೇಶ್ವರ ರುದ್ರಪಾದೆಯಿಂದ  ಹಾರಿದ ಮಂಗಳೂರಿನ ಪಡೀಲು ವೀರನಗರ ನಿವಾಸಿ ಉದಯ್ ಕುಮಾರ್ (46) ಮೃತದೇಹ ಸಮೀಪದ ಅಲಿಮಕಲ್ಲು ಎಂಬಲ್ಲಿ ಸಂಜೆ ಹೊತ್ತಿಗೆ ಪತ್ತೆಯಾಗಿದೆ.

ಪುತ್ತೂರಿನಲ್ಲಿ ವೈಭವದ ಶ್ರೀನಿವಾಸ ಕಲ್ಯಾಣೋತ್ಸವ: ಕಡಬ ತಾಲೂಕು ಸಮಿತಿ ರಚನೆ 

ಕಡಬ ತಾಲೂಕಿನಲ್ಲಿ ಡಿ.6 ರಂದು ಆಮಂತ್ರಣ ಪತ್ರಿಕೆ ಬಿಡುಗಡೆ ನಡೆದು ಕಡಬ ತಾಲೂಕು ಘಟಕದ  ಶ್ರೀನಿವಾಸ ಕಲ್ಯಾಣೋತ್ಸವ ಪದಾಧಿಕಾರಿಗಳ ಆಯ್ಕೆ  ಮಾಡಲಾಯಿತು.

ಮಹಿಳೆಯರಿಗೆ ಉಚಿತ ಕೋಳಿ ಮರಿ ವಿತರಣೆ

ಗ್ರಾಮೀಣ ಭಾಗದ ಪರಿಶಿಷ್ಟ ಜಾತಿ, ಪಂಗಡ, ಸಾಮಾನ್ಯ ವರ್ಗದ ರೈತ ಮಹಿಳೆಯರಿಗೆ ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಲದ ವತಿಯಿಂದ 2024-25ನೇ ಸಾಲಿಗೆ 5 ವಾರದ ತಲಾ 20 ಕೋಳಿ ಮರಿಗಳನ್ನು ಉಚಿತವಾಗಿ ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.

ಮಂಗಳೂರಿನಿಂದ ದೆಹಲಿಗೆ ಕಾಲ್ನಡಿಗೆ ಜಾಥಾ ವೇಳೆ ಗುಜರಾತಿನಲ್ಲಿ ಅಪಘಾತ! ಚಾರ್ಮಾಡಿಯ ಮೂಸಾ ಶರೀಫ್ ಸಹಿತ…

ಅತ್ಯಾಚಾರಿಗಳಿಗೆ ತಕ್ಷಣವೇ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿ ಮಂಗಳೂರಿನಿಂದ ದಿಲ್ಲಿಗೆ ಕಾಲ್ನಡಿಗೆ ಜಾಥಾ ಮಾಡುತ್ತಿದ್ದ ತಂಡದಲ್ಲಿದ್ದ ಇಬ್ಬರು ಗುಜರಾತಿನಲ್ಲಿ ಅಪಘಾತಕ್ಕೆ ಬಲಿಯಾದ ದಾರುಣ ಘಟನೆ ನಿನ್ನೆ ಸಂಭವಿಸಿದೆ. ಇವರಲ್ಲಿ ಒಬ್ಬರನ್ನು ದಕ್ಷಿಣ ಕನ್ನಡ ಜಿಲ್ಲೆಯ ಚಾರ್ಮಾಡಿಯ ಮೂಸಾ ಶರೀಫ್ ಎಂದು…

ಮಂಗಳೂರು: ಪಾರ್ಕ್ ಮಾಡಿದ್ದ ಕಾರಿನಿಂದ 6.80 ಲಕ್ಷ ರೂ. ಮೌಲ್ಯದ ಚಿನ್ನಾಭರಣ,ಲ್ಯಾಪ್ ಟಾಪ್ ಕಳವು:

ಪಾರ್ಕ್ ಮಾಡಿದ್ದ ಕಾರಿನ ಗ್ಲಾಸ್ ಒಡೆದು ಕಾರಿನೊಳಗಿದ್ದ 6,80,000ರೂ. ಮೌಲ್ಯದ ಚಿನ್ನಾಭರಣ, ಮತ್ತು ಲ್ಯಾಪ್ ಟಾಪ್ ಇರುವ ವ್ಯಾನಿಟ್‌ ಬ್ಯಾಗ್‌ ಅನ್ನು ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೂರ್ವ ಠಾಣೆಯ ಪೊಲೀಸರು ಕ್ಷಿಪ್ರ ಕಾರ್ಯಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದು, ಕಳವು ಮಾಡಿದ…

ಮುರುಡೇಶ್ವರ: ಮೂವರು ವಿದ್ಯಾರ್ಥಿನಿಯರು ಸಮುದ್ರ ಪಾಲು; ಓರ್ವಳ ಶವ ಪತ್ತೆ!!

ಸಮುದ್ರ ತೀರದಲ್ಲಿ ದುರಂತ ಸಂಭವಿಸಿದ್ದು ಮುಳಬಾಗಿಲು ಪಟ್ಟಣ ದಿಂದ ಪ್ರವಾಸಕ್ಕೆ ಬಂದಿದ್ದ 54 ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿನಿಯರು ಸಮುದ್ರ ನೀರಲ್ಲಿ ಕೊಚ್ಚಿ ಹೋಗಿದ್ದಾರೆ. ಓರ್ವ ವಿದ್ಯಾರ್ಥಿನಿ ಶವ ಪತ್ತೆಯಾಗಿದೆ.