ದ.ಕ. ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸುರತ್ಕಲ್ ಕಡಂಬೋಡಿ ನಿವಾಸಿ ಹೇಮಂತ್ (50) ಅಲ್ಪಕಾಲದ ಅಸೌಖ್ಯದಿಂದ ರವಿವಾರ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.
ಸ್ಪಷ್ಟವಾದ ಕಾರಣವಿಲ್ಲದೆ ಎಸ್.ಎಸ್.ಎಲ್.ಸಿ.ವಿದ್ಯಾರ್ಥಿಯೋರ್ವ ಮನೆಯ ಬಚ್ಚಲು ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅಗಸ್ಟ್ 7 ರಂದು ಬುಧವಾರ ರಾತ್ರಿ ವೇಳೆ ನಡೆದಿದೆ.
ಮೂರು ದಿನಗಳಿಂದ ನಾಪತ್ತೆಯಾಗಿದ್ದ ಬಳ್ಪದ ಯುವಕನ ಮೃತದೇಹ ಬುಧವಾರ ಪಂಜದ ಹೊಳೆಯಲ್ಲಿ ಪತ್ತೆಯಾಗಿದೆ.
ವಿಟ್ಲ ಸಾಲೆತ್ತೂರು ನಿವಾಸಿ ಜಗನ್ನಾಥ್ ರವರ ಮನೆಗೆ ಕಳ್ಳರು ನುಗ್ಗಿ ಚಿನ್ನಾಭರಣ, ನಗದು ಸೇರಿದಂತೆ ಬೆಲೆಬಾಳುವ ವಸ್ತುಗಳನ್ನು ಕಳವುಗೈದ ಘಟನೆ ವರದಿಯಾಗಿದೆ.
ಮಂಗಳೂರು: ಇಲ್ಲಿನ ಎಸ್.ಕೆ. ಗೋಲ್ಡ್’ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಯ ವಜ್ರಮಹೋತ್ಸವ ಸಂಭ್ರಮಾಚರಣೆ 2024ರ ಪ್ರಯುಕ್ತ ಬೆಳ್ಳಂಪಳ್ಳಿಯ ಜೈ ಹಿಂದ್ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳ ಅಗತ್ಯ ವಸ್ತುಗಳ ಹಸ್ತಾಂತರ ಕಾರ್ಯಕ್ರಮ ಜುಲೈ 31ರಂದು ನಡೆಯಿತು. ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ…
ಪಾಂಡೇಶ್ವರದ ಪಬ್‌ನಲ್ಲಿ ಮಹಿಳೆಗೆ ಕಿರುಕುಳ ನೀಡಿದ ಆರೋಪದಲ್ಲಿ ಪುತ್ತೂರು ನಿವಾಸಿಗಳಾದ ಮಹೇಶ್ (28), ವಿನಯ್ (30), ನಿತೇಶ್ (32) ಮತ್ತು ಪ್ರಿತೇಶ್ (33) ಅವರನ್ನು ಪೊಲೀಸರು ಬಂಧಿಸಿದ್ದಾರೆ.
ಮಂಗಳೂರು: ಮಂಗಳೂರು ಧಕ್ಕೆಯಿಂದ ಆಳ ಸಮುದ್ರ ಮೀನುಗಾರಿಕೆ ತೆರಳಿದ್ದ ಬೋಟ್ ವೊಂದು ಸೋಮವಾರ ಬೆಳಗಿನ ಜಾವ ಸಮುದ್ರ ಮಧ್ಯೆ ಬೆಂಕಿಗಾಹುತಿಯಾದ ಘಟನೆ ವರದಿಯಾಗಿದೆ.
ಪುತ್ತೂರು: ಭಾರೀ ಮಳೆ ಹಿನ್ನೆಲೆಯಲ್ಲಿ ಆಗಸ್ಟ್ 2ರಂದು ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಭಾರೀ ಮಳೆಯಿಂದ ಮನೆಯೊಂದು ಸಂಪೂರ್ಣ ಕುಸಿದು ಬಿದ್ದ ಪರಿಣಾಮ ಮಹಿಳೆಯೋರ್ವರು ಮೃತಪಟ್ಟಿರುವ ಘಟನೆ ನೆಲ್ಲಿಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೋರುಗುಡ್ಡೆಯ ಜನತಾ ಕಾಲನಿಯಲ್ಲಿ ಬುಧವಾರ ರಾತ್ರಿ ನಡೆದಿದೆ.
ಬಸ್ ಪ್ರಯಾಣಿಕರಿಗೆ ಹಾರ್ಟ್ ಅಟ್ಯಾಕ್ ಸೂಚನೆ ದೊರಕಿದ ತಕ್ಷಣ, ಬಸ್ ನೇರವಾಗಿ ಆಸ್ಪತ್ರೆ ಒಳಾಂಗಣಕ್ಕೆ ನುಗ್ಗಿ ಚಿಕಿತ್ಸೆ ಕೊಡಿಸಿದ ಘಟನೆ ಮಂಗಳೂರಿನಲ್ಲಿ ನಡೆಯಿತು.
Welcome, Login to your account.
Welcome, Create your new account
A password will be e-mailed to you.