ಕಲ್ಲರ್ಪೆಯ ಜಯಭಾರತಿ (56) ಅವರು ಮನೆಯಲ್ಲಿ ಶನಿವಾರ ರಾತ್ರಿ ಮಲಗಿದ್ದ ಸಂದರ್ಭದಲ್ಲಿ ಮಹಿಳೆಯ ಬಾವ ಶಂಕರ ಅವರು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ ಗಂಭೀರ ಗಾಯಗೊಂಡಿರುವ ಮಹಿಳೆಯನ್ನು ಸಂಬಂಧಿಕರು ಸುಳ್ಯದ ಆಸ್ಪತ್ರೆಗೆ ಕರೆತಂದು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಂಟ್ವಾಳ: ಇಲ್ಲಿನ ಖಾಸಗಿ ಶಾಲೆಯ ವಿದ್ಯಾರ್ಥಿಗಳನ್ನು ಕರೆದುಕೊಂಡು ಬರುತ್ತಿದ್ದ ಬಸ್ ಚಾಲಕನಿಗೆ ಮೂರ್ಚೆ ರೋಗ ( ಪಿಡ್ಸ್) ಉಂಟಾಗಿ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಪೊಳಲಿ ಸಮೀಪದ ಬಡಕಬೈಲು ಎಂಬಲ್ಲಿ ಅ.14ರಂದು ಬೆಳಿಗ್ಗೆ ನಡೆದಿದೆ.
ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಮತ್ತು ಸೌಹಾರ್ದ ಯಕ್ಷಗಾನ ಸಮಿತಿ ಸಹಯೋಗದಲ್ಲಿ ಶ್ರೀ ಶಾರದಾ ಕಲಾಮಂಟಪದಲ್ಲಿ ಜರಗಿದ 30ನೇ ವರ್ಷದ ಶ್ರೀ ಶಾರದೋತ್ಸವ ಕಾರ್ಯಕ್ರಮದಲ್ಲಿ ಉಪನ್ಯಾಸಕ, ಯಕ್ಷಗಾನ ಅರ್ಥಧಾರಿ ಗುಡ್ಡಪ್ಪ ಬಲ್ಯರನ್ನು ಸನ್ಮಾನಿಸಲಾಯಿತು.
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳಾದ ಪರಶುರಾಮ್ ವಾಘ್ಮೋರೆ ಮತ್ತು ಮನೋಹರ್ ಯಡವೆಗೆ ವಿಶೇಷ ನ್ಯಾಯಾಲಯ ಅಕ್ಟೋಬರ್ 9ರಂದು ಜಾಮೀನು ನೀಡಿದ್ದು ಜೈಲಿನಿಂದ ಹೊರಬಂದ ಆರೋಪಿಗಳಿಗೆ ಹಿಂದೂಪರ ಸಂಘಟನೆಗಳು ಸನ್ಮಾನಿಸಿದೆ.
ಕಾರ್ಕಳ ತಾಲೂಕು ಕಚೇರಿ ಜಂಕ್ಷನ್ ಬಳಿ ಬೈಪಾಸ್ ರಸ್ತೆಯಲ್ಲಿಯಿರುವ ಎಂಆರ್ಪಿಎಲ್ ಪೆಟ್ರೋಲ್ ಬಂಕ್ನಲ್ಲಿ ಕಾರಿಗೆ ಟ್ಯಾಂಕ್ ತುಂಬ ಪೆಟ್ರೋಲ್ ತುಂಬಿಸಿ ಹಣ ಕೊಡದೆ ಪರಾರಿಯಾಗಿದ್ದ ಅಸಾಮಿಯನ್ನು ಪತ್ತೆಹಚ್ಚುವಲ್ಲಿ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ.
ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಆಚರಿಸಲಾಗುತ್ತಿರುವ “ಮಂಗಳೂರು ದಸರಾ’ ಸಂಭ್ರಮದ ಬೃಹತ್ ಶೋಭಾಯಾತ್ರೆ ಅ.13ರಂದು ಸಂಜೆ 4 ಗಂಟೆಗೆ ಆರಂಭವಾಗಿ ಅ.14ರ ಮುಂಜಾನೆ ಶಾರದೆಯ ಜಲಸ್ತಂಭನದ ಮೂಲಕ ಸಮಾಪನಗೊಳ್ಳಲಿದೆ.
ಉಜಿರೆಯಲ್ಲಿರುವ ರುಡ್ ಸೆಟ್ ಸಂಸ್ಥೆಯಲ್ಲಿ ನ.5ರಿಂದ ಡಿ.4ರ ವರೆಗೆ ಮೂವತ್ತು ದಿನಗಳ ಉಚಿತ ಕಂಪ್ಯೂಟರ್ ಟ್ಯಾಲಿ ತರಬೇತಿಯನ್ನು ಆಯೋಜಿಸಲಾಗಿದೆ. ತರಬೇತಿಯು ಪ್ರತಿ ದಿನ ಬೆಳಿಗ್ಗೆ 9.30ರಿಂದ ಸಾಯಂಕಾಲ 6.00ರವರೆಗೆ ನಡೆಯುತ್ತದೆ.
ಪುತ್ತೂರು : ಈ ವರ್ಷದ ಗೌರಿ ಗಣೇಶ ಹಬ್ಬವನ್ನು ಸಾರ್ವಜನಿಕರು ಪರಿಸರ ಸ್ನೇಹಿಯಾಗಿ ಆಚರಿಸಬೇಕು ಎಂದು ದ.ಕ. ಜಿಲ್ಲಾಡಳಿತ ಸೂಚಿಸಿದೆ.
ಮಂಗಳೂರು: ಬೀದಿಬದಿ ವ್ಯಾಪಾರಿಗಳ ತೆರವು ಕಾರ್ಯಾಚರಣೆಯ ವೇಳೆ ಮಹಾನಗರ ಪಾಲಿಕೆಯ ವಿರುದ್ಧ ಒಗ್ಗೂಡಿ ಪ್ರತಿಭಟನೆ ನಡೆಸಿದ್ದ ಬೀದಿ ವ್ಯಾಪಾರಿಗಳ ಸಂಘದ ಪದಾಧಿಕಾರಿಗಳ ಮಧ್ಯೆ ಗುರುವಾರ ಹೊಡೆದಾಟ ನಡೆದಿದ್ದು, ಬಂದರು ಠಾಣೆಗೆ ದೂರು ನೀಡಲಾಗಿದೆ.
ಬಂಟ್ವಾಳ: ಸಾಲೆತ್ತೂರು - ಮುಡಿಪು ರಸ್ತೆ ಹದಗೆಟ್ಟು ವಾಹನ ಸಂಚಾರಕ್ಕೆ ತೀವ್ರ ತೊಡಕಾಗಿದೆ. ರಸ್ತೆ ಸರಿಪಡಿಸಲು ಮನವಿ ನೀಡಿದರೂ ಪ್ರಯೋಜನವಾಗಿಲ್ಲ. ಈ ಮನವಿಗೂ ಸ್ಪಂದನೆ ನೀಡದೇ ಹೋದರೆ, ಮುಂದಿನ ದಿನದಲ್ಲಿ ರಸ್ತೆ ತಡೆ ನಡೆಸಿ ಹೋರಾಟ ನಡೆಸಲಾಗುವುದು.
Welcome, Login to your account.
Welcome, Create your new account
A password will be e-mailed to you.