ದೇಶ

ಲೋಕಸಭಾ ಚುನಾವಣೆ: ಬಿಜೆಪಿ 4ನೇ ಪಟ್ಟಿ ಪ್ರಕಟ

ನವದೆಹಲಿ: ಲೋಕಸಭೆ ಚುನಾವಣೆ ರಣರಂಗಕ್ಕೆ ಸಕಲ ಸಿದ್ಧತೆ ನಡೆಸುತ್ತಿರುವ ಬಿಜೆಪಿಯು ಅಭ್ಯರ್ಥಿಗಳ ನಾಲ್ಕನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ನಾಲ್ಕನೇ ಪಟ್ಟಿಯಲ್ಲಿ 15 ಅಭ್ಯರ್ಥಿಗಳಿಗೆ ಬಿಜೆಪಿ ಟಿಕೆಟ್‌ ನೀಡಿದೆ. ಅದರಲ್ಲೂ, ಬಹುಭಾಷಾ ನಟಿ, ನಟ ಶರತ್‌ಕುಮಾರ್‌ ಅವರ ಪತ್ನಿ ರಾಧಿಕಾ ಶರತ್‌ ಕುಮಾರ್‌ ಅವರಿಗೆ…

ಸಿಎಂ ಹುದ್ದೆಯಲ್ಲಿದ್ದಾಗಲೇ ಜೈಲು ಪಾಲಾದರೆ ರಾಜ್ಯದ ಚುಕ್ಕಾಣಿ ನಡೆಸುವವರಾರು? ಅರವಿಂದ್ ಕೇಜ್ರಿವಾಲ್…

ಹೊಸದಿಲ್ಲಿ: “ಅರವಿಂದ್ ಕೇಜ್ರಿವಾಲ್ ಅವರು ದಿಲ್ಲಿ ಮುಖ್ಯಮಂತ್ರಿ ಆಗಿ ಮುಂದುವರಿಯಲಿದ್ದಾರೆ ಮತ್ತು ಜೈಲಿನಿಂದ ತಮ್ಮ ಕರ್ತವ್ಯವನ್ನು ನಿರ್ವಹಿಸಲಿದ್ದಾರೆ” ಎಂದು ಆಮ್ ಆದ್ಮಿ ಪಕ್ಷ ಹೇಳಿದೆ. ದೆಹಲಿ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿ ಕೇಜ್ರಿವಾಲ್‌ ಬಂಧನಕ್ಕೊಳಗಾದ ನಂತರ ಪಕ್ಷ ಹೀಗೆ ಹೇಳಿದೆ.…

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಬಂಧನ! ತುರ್ತು ವಿಚಾರಣೆಯ ಮೊರೆ ಹೋದ ಕೇಜ್ರಿವಾಲ್ ಕಾನೂನು ತಂಡ!

ಹೊಸದಿಲ್ಲಿ: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮನ್ಸ್ ನೀಡಲು ಜಾರಿ ನಿರ್ದೇಶನಾಲಯದ (ಇ.ಡಿ.) ತಂಡ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಗುರುವಾರ ಬಂಧಿಸಿದೆ. ನಿವಾಸಕ್ಕೆ ಗುರುವಾರ ಸಂಜೆ ಆಗಮಿಸಿದ ತನಿಖಾ ಸಂಸ್ಥೆಯ ತಂಡವು ಮನಿ ಲಾಂಡರಿಂಗ್ ಕಾಯ್ದೆಯ (ಪಿಎಂಎಲ್‌ಎ) ಸೆಕ್ಷನ್ 50 ರ…

ಹಳಿ ತಪ್ಪಿದ ಸಬರಮತಿ ಎಕ್ಸ್‌ಪ್ರೆಸ್‌ ರೈಲು!!

ಜೈಪುರ: ರಾಜಸ್ಥಾನದ ಅಜ್ಮೇರ್‌ ಜಿಲ್ಲೆಯಲ್ಲಿ ಸಬರಮತಿ-ಆಗ್ರಾ ಸೂಪರ್‌ಫಾಸ್ಟ್‌ ರೈಲು ಹಳಿ ತಪ್ಪಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಮದರ್‌ ರೈಲು ನಿಲ್ದಾಣದ ಬಳಿ ಭಾನುವಾರ ತಡರಾತ್ರಿ 1 ಗಂಟೆ ಸುಮಾರಿಗೆ ರೈಲು ಹಳಿ ತಪ್ಪಿದೆ ಎಂದು ರೈಲ್ವೆ ಇಲಾಖೆ ಮೂಲಗಳು ತಿಳಿಸಿವೆ. ತಡರಾತ್ರಿ ಸುಮಾರು 3 ಗಂಟೆ…

ಏ. 26, ಮೇ 7 ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ: ಇಲ್ಲಿದೆ ಆಯೋಗ ಪತ್ರಿಕಾಗೋಷ್ಠಿಯಲ್ಲಿ ನೀಡಿದ ವಿವರ

ನವದೆಹಲಿ: ಕರ್ನಾಟಕದಲ್ಲಿ ಏಪ್ರಿಲ್ 26ರಿಂದ ಮೇ 7ರವರೆಗೆ ಲೋಕಸಭಾ ಚುನಾವಣೆ ನಡೆಯಲಿದೆ. 7 ಹಂತಗಳಲ್ಲಿ ದೇಶಾದ್ಯಂತ ಚುನಾವಣೆ ಜರಗಲಿದೆ. ಕರ್ನಾಟಕದಲ್ಲಿ ಎರಡು ಹಂತದಲ್ಲಿ ಚುನಾವಣೆ ನಡೆಯಲಿದ್ದು, ಏಪ್ರಿಲ್ 26ಕ್ಕೆ ಮೊದಲ ಹಂತದಲ್ಲಿ, ಮೇ 7ರಂದು ಕರ್ನಾಟಕದಲ್ಲಿ ಎರಡನೇ ಹಂತದ ಚುನಾವಣೆ ನಡೆಯಲಿದೆ. ದಕ್ಷಿಣ…

ಅಮಿತಾಭ್‌ ಬಚ್ಚನ್‌ಗೆ ಆ್ಯಂಜಿಯೋ ಪ್ಲಾಸ್ಟಿ ಚಿಕಿತ್ಸೆ

ಮುಂಬಯಿ: ಬಾಲಿವುಡ್‌ ಹಿರಿಯ ನಟ ಅಮಿತಾಭ್‌ ಬಚ್ಚನ್‌(81) ಶುಕ್ರವಾರ ಇಲ್ಲಿನ ಕೋಕಿಲಾಬೆನ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಮಿತಾಬ್ ಬಚ್ಚನ್‌ ಅವರ ಕಾಲಿನ ರಕ್ತನಾಳಗಳಲ್ಲಿ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆ್ಯಂಜಿ­ಯೋಪ್ಲಾಸ್ಟಿ ನಡೆಸಲಾಗಿದೆ ಎಂದು ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿ­ದ್ದಾರೆ.…

ಮಮತಾ ಬ್ಯಾನರ್ಜಿಗೆ ಗಂಭೀರ ಗಾಯ | ರಕ್ತಸಿಕ್ತ ಫೊಟೋ ವೈರಲ್: ಅಷ್ಟಕ್ಕೂ ಆಗಿದ್ದೇನು??

ಕೋಲ್ಕತಾ: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ಜಾರಿಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಟಿಎಂಸಿ ಪಕ್ಷ ತನ್ನ ಎಕ್ಸ್‌ ಪೋಸ್ಟ್‌ನಲ್ಲಿಈ ವಿಚಾರ ತಿಳಿಸಿದ್ದು ”ನಮ್ಮ ನಾಯಕಿ ಮಮತಾ ಅವರಿಗೆ ಗಂಭೀರ ಗಾಯವಾಗಿದೆ. ದಯವಿಟ್ಟು ಅವರಿಗಾಗಿ ನೀವೆಲ್ಲ ಪ್ರಾರ್ಥನೆ ಸಲ್ಲಿಸಿ ” ಎಂದು…

ಒಂದು ರಾಷ್ಟ್ರ ಒಂದು ಚುನಾವಣೆ: ರಾಷ್ಟ್ರಪತಿಗೆ ವರದಿ ಸಲ್ಲಿಸಿದ ಮಾಜಿ ರಾಷ್ಟ್ರಪತಿ| ಸ್ಥಳೀಯಾಡಳಿತ ಚುನಾವಣೆ…

ನವದೆಹಲಿ: 2024 ರ ಲೋಕಸಭೆ ಚುನಾವಣೆಗೆ ಮುನ್ನ, ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿಯು ಬುಧವಾರ (ಮಾರ್ಚ್ 13) ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಒಂದು ರಾಷ್ಟ್ರ, ಒಂದು ಚುನಾವಣೆಯ ಸಮೀಕ್ಷೆ ಕುರಿತು ತನ್ನ ವರದಿಯನ್ನು ಸಲ್ಲಿಸಿತು.…

43 ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಹಂತ ಹಂತವಾಗಿ ಬಿಡುಗಡೆಗೊಳಿಸುತ್ತಿದೆ ಅದರಂತೆ ಅಸ್ಸಾಂ, ಗುಜರಾತ್, ಮಧ್ಯಪ್ರದೇಶ, ಉತ್ತರಾಖಂಡ್, ರಾಜಸ್ಥಾನ ಮತ್ತು ಕೇಂದ್ರಾಡಳಿತ ಪ್ರದೇಶವಾದ ದಿಯು ಮತ್ತು ದಮನ್ ಸೇರಿದಂತೆ ವಿವಿಧ ರಾಜ್ಯಗಳ 43…

CAA; ಏನಿದು ಪೌರತ್ವ ತಿದ್ದುಪಡಿ ಕಾಯ್ದೆ? ಯಾರಿಗೆಲ್ಲ ಸಿಗುತ್ತೆ ಭಾರತದ ಪೌರತ್ವ?

ಹೊಸದಿಲ್ಲಿ: ಲೋಕಸಭೆ ಚುನಾವಣೆ ದಿನಾಂಕ ಘೋಷಣೆಗೂ ಮುನ್ನ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಕೇಂದ್ರ ಸರಕಾರ ಜಾರಿಗೆ ತಂದಿದೆ. ಸಂಸತ್ತಿನಲ್ಲಿ ಅಂಗೀಕರಿಸಲ್ಪಟ್ಟ ಐದು ವರ್ಷಗಳ ನಂತರ ಕೇಂದ್ರ ಸರಕಾರ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ( CAA) ಜಾರಿಗೆ ತಂದಿದೆ. ಕಳೆದ ತಿಂಗಳು, ಗೃಹ ಸಚಿವ ಅಮಿತ್ ಶಾ ಅವರು ಈ…