Browsing: ಧಾರ್ಮಿಕ

:ಶ್ರೀ  ಕ್ಷೇತ್ರ ಧರ್ಮಸ್ಥಳದಲ್ಲಿ ಜರುಗುತ್ತಿರುವ ಕ್ಷೇತ್ರದ ಲಕ್ಷದೀಪೋತ್ಸವ ಪ್ರಯುಕ್ತ ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲಾ ಆವರಣದಲ್ಲಿ ರಾಜ್ಯಮಟ್ಟದ 45ನೇ ವರ್ಷದ ವಸ್ತುಪ್ರದರ್ಶನಕ್ಕೆ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ಉಪಸ್ಥಿತಿಯಲ್ಲಿ ಯೂನಿಸೆಫ್‌ ಹೈದರಾಬಾದ್ ಕಛೇರಿಯ ಮುಖ್ಯಸ್ಥರಾದ ಡಾ. ಝಲಾಲೆಮ್ ಬಿರಹಾನು ಟಾಪ್ಲಿ ಅವರು “ಸೈಕಲ್ ಅಗರಬತ್ತಿ”ಯನ್ನು ಬೆಳಗಿಸುವ ಮೂಲಕ ಮಂಗಳವಾರ ಚಾಲನೆ ನೀಡಿದರು.

ಪುತ್ತೂರು: ಪ್ರಪಂಚದಲ್ಲೇ ಅತೀ ಶ್ರೀಮಂತ ಭಾಷೆ ಕನ್ನಡ. ಇದರ ಹಬ್ಬ ಅಥವಾ ಆಚರಣೆಯಿಂದ ಭಾಷೆಯ ಶ್ರೀಮಂತಿಕೆ ಮುಂದಿನ ಪೀಳಿಗೆಗೆ ತಲುಪುತ್ತದೆ ಎಂದು ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ ಹೇಳಿದರು.

ಪುತ್ತೂರು: ಅಸಹಾಯಕರಿಗೆ ಮಾಡುವ ಅಗತ್ಯ ಸೇವೆಯೇ ಮಾನವ ಧರ್ಮ ಹಾಗೂ ಅದೇ  ಜೀವನದ ಸಾರ್ಥಕತೆ ಕೂಡ ಎಂದು ನರಿಮೊಗರು ಸರಸ್ವತಿ ವಿದ್ಯಾ ಮಂದಿರದ ಸಂಚಾಲಕ ಅವಿನಾಶ್ ಕೊಡೆಂಕಿರಿ ಹೇಳಿದರು. 

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಆಚರಿಸಲಾಗುತ್ತಿರುವ “ಮಂಗಳೂರು ದಸರಾ’ ಸಂಭ್ರಮದ ಬೃಹತ್‌ ಶೋಭಾಯಾತ್ರೆ ಅ.13ರಂದು ಸಂಜೆ 4 ಗಂಟೆಗೆ ಆರಂಭವಾಗಿ ಅ.14ರ ಮುಂಜಾನೆ ಶಾರದೆಯ ಜಲಸ್ತಂಭನದ ಮೂಲಕ ಸಮಾಪನಗೊಳ್ಳಲಿದೆ.

ಸುಬ್ರಹ್ಮಣ್ಯ : ಪಾರ್ಕಿಂಗ್ ಸಮಸ್ಯೆ ನಿಯಂತ್ರಿಸಲು ಹಾಗೂ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ದ. ಕ ಜಿಲ್ಲಾಧಿಕಾರಿಗಳ ಆದೇಶದಂತೆ ರಸ್ತೆ ಸಂಚಾರದಲ್ಲಿ ಹೊಸ ನಿಯಮ ಜಾರಿಗೊಳಿಸಲಾಗಿದೆ.