ರಾಜ್ಯ ವಾರ್ತೆ

ರೈತರ ಹೋರಾಟಕ್ಕೆ ಮಣಿದ     ಸರ್ಕಾರ ಪ್ರತೀ ಟನ್‌ ಗೆ ₹3300 ನಿಗದಿ!!

ರೈತರ ಪ್ರತಿಭಟನೆಯ ಕಿಚ್ಚು ತೀವ್ರಗೊಳ್ಳುತ್ತಿದ್ದಂತೆ ಎಚ್ಚೆತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ರೈತರು ಮತ್ತು ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಸಭೆ ನಡೆಸಿ, ಪ್ರತಿ ಟನ್‌ ಕಬ್ಬಿಗೆ 3,300 ರೂ ದರ ನಿಗದಿ ಮಾಡಿದ್ದಾರೆ. ಬೆಂಬಲ ಬೆಲೆಗೆ ಒತ್ತಾಯಿಸಿ ಕಬ್ಬು ಬೆಳೆಗಾರರು ಬೆಳಗಾವಿ, ವಿಜಯಪುರ…

ಗ್ರಾಪಂ ಸದಸ್ಯರ ಭತ್ತೆ ಹೆಚ್ಚಿಸಲು ಮನವಿ ನೀಡಿದ ಕಿಶೋರ್ ಕುಮಾರ್ ಪುತ್ತೂರು

ಪುತ್ತೂರು: ಗ್ರಾಮ ಪಂಚಾಯತ್ ಸದಸ್ಯರ ಪ್ರಯಾಣ ಭತ್ತೆ ಹಾಗೂ ದಿನಭತ್ತೆಯನ್ನು ಹೆಚ್ಚಿಸುವಂತೆ ಮತ್ತು ದೂರವಾಣಿ ಭತ್ತೆ ಪಾವತಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕಾರ್ಯದರ್ಶಿಗೆ ವಿಧಾನ ಪರಿಷತ್ ಶಾಸಕ ಕಿಶೋರ್ ಕುಮಾರ್ ಪುತ್ತೂರು ಮನವಿ ಸಲ್ಲಿಸಿದರು. ಕರ್ನಾಟಕ  ಪಂಚಾಯತ್ ರಾಜ್ (ಗ್ರಾಮ…

ಸಾರ್ವಜನಿಕ ಸ್ಥಳಗಳಲ್ಲಿ ಸಾಕು ನಾಯಿ ಬಿಟ್ಟರೆ ಎಚ್ಚರಿಕೆ! ಬೀದಿ ನಾಯಿಗಳಿಗೆ ಆಹಾರ ಹಾಕಲು ಜಾಗ ಗುರುತು

ಸಾಕು ನಾಯಿಯನ್ನು ಸಾರ್ವಜನಿಕ ಸ್ಥಳದಲ್ಲಿ ಬಿಟ್ಟರೆ ಕಾನೂನು ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ಉಡುಪಿ ನಗರಸಭೆ ನೀಡಿದೆ. ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಬೀದಿ ನಾಯಿಗಳಿಗೆ ಆಹಾರವನ್ನು ಹಾಕುವ ಬಗ್ಗೆ ಸಾರ್ವಜನಿಕರಿಂದ ದೂರು ಬಂದಿತ್ತು. ಈ ಹಿನ್ನೆಲೆಯಲ್ಲಿ ಬೀದಿ ನಾಯಿಗಳಿಗೆ ಅನಧಿಕೃತವಾಗಿ…

ಇಬ್ಬರನ್ನು ಬಲಿ ಪಡೆದ ಕಾಡಾನೆ ಸೆರೆ!

ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಕೆರೆಕಟ್ಟೆ ಸಮೀಪ ಇಬ್ಬರು ರೈತರನ್ನು ಬಲಿ ಪಡೆದಿದ್ದ ಕಾಡಾನೆಯನ್ನು, ಅರಣ್ಯ ಇಲಾಖೆಯು ಎರಡು ದಿನಗಳ ಸುದೀರ್ಘ ಕಾರ್ಯಾಚರಣೆಯ ಬಳಿಕ ಕೊನೆಗೂ ಸೆರೆಹಿಡಿದಿದೆ. ಈ ಆನೆಯು ಕುದುರೆಮುಖ ರಾಷ್ಟ್ರೀಯ ಉದ್ಯಾನವನದೊಳಗಿನ ಭಗವತಿ ಶಿಬಿರದ ಸಮೀಪದ ಅರಣ್ಯದಲ್ಲಿ ಅಡಗಿತ್ತು.…

ಸಭೆ ಸಮಾರಂಭಗಳಲ್ಲಿ ಕೆಎಂಎಫ್ ನಂದಿನಿ ಉತ್ಪನ್ನ ಬಳಕೆಗೆ ಕಟ್ಟುನಿಟ್ಟಿನ ಆದೇಶ!

ರಾಜ್ಯದ್ಯಂತ ಸರ್ಕಾರಿ ಕಚೇರಿಗಳಲ್ಲಿ ಮತ್ತು ಸಭೆ ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಾಟಲ್ ನಿಷೇಧಿಸಿ (Plastic Ban) ಮತ್ತು ಸಭೆ ಸಮಾರಂಭಗಳಲ್ಲಿ ಕೆಎಂಎಫ್‌ ನಂದಿನಿ ತಿನಿಸುಗಳನ್ನು ಬಳಸುವಂತೆ ಸಿದ್ದರಾಮಯ್ಯ ಸರ್ಕಾರ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ. ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಕಛೇರಿಗಳಲ್ಲಿ ಹಾಗೂ…

ನದಿ ತಿರುವು ಯೋಜನೆಗಳನ್ನು ಕೈಬಿಡಿ: ಸಿಎಂಗೆ ಮನವಿ

ನದಿ ತಿರುವು ಯೋಜನೆಗಳನ್ನು ಕೈಬಿಡಿ ಎಂಬ ಮನವಿಯನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ನೀಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಬೇಡ್ತಿ ಮತ್ತು ಅಘನಾಶಿನಿ ಕಣಿವೆಗಳ ನದಿ ತಿರುವು ಯೋಜನೆಗಳನ್ನು ರಾಜ್ಯ ಸರ್ಕಾರ ಕೈಬಿಡಬೇಕು. ಶರಾವತಿ ಪಂಪ್ ಸ್ಟೋರೇಜ್ ಯೋಜನೆಗೆ ನೀಡಿರುವ ಅನುಮತಿ ಹಿಂಪಡೆಯಬೇಕು ಎಂದು ಒತ್ತಾಯಿಸಿ…

ಮಂಗಳೂರನ್ನು ಹತೋಟಿಗೆ ತಂದದ್ದೇ ನಮ್ಮ ಅಧಿಕಾರಿಗಳು |ಪೊಲೀಸರಿಗೆ ಹೊಸ ಕ್ಯಾಪ್: ಸಮಾರಂಭದಲ್ಲಿ ಸಿಎಂ

ಬೆಂಗಳೂರು ಅ 28: ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ. ಇದರಿಂದ ಇಡೀ ಕರ್ನಾಟಕ ಜನತೆ ಪೊಲೀಸ್‌ ಇಲಾಖೆಗೆ ಕೃತಜ್ಞತೆ ಸಲ್ಲಿಸುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಆಯೋಜಿಸಿದ್ದ ಪೊಲೀಸ್…

ಆರ್.ಎಸ್.ಎಸ್. ನಿರ್ಬಂಧ: ರಾಜ್ಯ ಸರಕಾರಕ್ಕೆ ಹಿನ್ನಡೆ!

ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಸರ್ಕಾರಿ ಜಾಗಗಳಲ್ಲಿ ಆರ್​ಎಸ್​ಎಸ್ ಚಟುವಟಿಕೆಗಳು ಹಾಗೂ ಪಥಸಂಚಲನ ನಿರ್ಬಂಧಿಸಿ ಆದೇಶ ಹೊರಡಿಸಿದ್ದ ಕಾಂಗ್ರೆಸ್ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್​ನಲ್ಲಿ ಹಿನ್ನಡೆಯಾಗಿದೆ. ಪಥಸಂಚಲನ ನಿರ್ಬಂಧಿಸುವ ಸಂಬಂಧ ರಾಜ್ಯ ಸರ್ಕಾರ ನೀಡಿದ್ದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್​ನ …

ಪಥಸಂಚಲನದಲ್ಲಿ ಭಾಗಿ: ಹುದ್ದೆ ವಾಪಾಸ್!

ಆರ್‌ಎಸ್‌ಎಸ್‌(RSS) ಪಥಸಂಚಲನದಲ್ಲಿ ಗಣವಸ್ತ್ರ ಧರಿಸಿ ಭಾಗಿಯಾಗಿದ್ದ ತಿಪಟೂರಿನ ವೈದ್ಯ ಶ್ರೀಧರ್ ಹೆಸರನ್ನು ಯಶಸ್ವಿನಿ ಟ್ರಸ್ಟ್‌ನಿಂದ ತೆಗೆದುಹಾಕಲಾಗಿದೆ. ಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಭಾಗಿಯಾಗಿದ್ದ ವೈದ್ಯರಿಗೆ ಸರ್ಕಾರದ ಯಶಸ್ವಿನಿ ಟ್ರಸ್ಟ್‌ ಟ್ರಸ್ಟಿಯಾಗಿ ನೇಮಿಸಲಾಗಿತ್ತು. ಇದಕ್ಕೆ ತೀವ್ರ ವಿರೋಧ…

ರಾಜ್ಯದಲ್ಲಿ ಹೊಸ APL, BPL ಕಾರ್ಡ್ ಗೆ ಮತ್ತೆ ಅರ್ಜಿ ಸಲ್ಲಿಕೆ ಆರಂಭ!!

ಬೆಂಗಳೂರು : ರಾಜ್ಯದಲ್ಲಿ ಹೊಸ ಎಪಿಎಲ್, ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಕುಟುಂಬದ ಆದಾಯವನ್ನು ಪರಿಗಣಿಸಿ ಎಪಿಎಲ್ ನೀಡಬೇಕೋ ಅಥವಾ ಬಿಪಿಎಲ್‌ ನೀಡಬೇಕೋ ಎಂಬುದನ್ನು ನಿರ್ಧಾರ ಮಾಡಲಾಗುತ್ತದೆ.ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು…