ಸ್ಥಳೀಯ

ವಿಶಾಲಾಕ್ಷಿ ಆಚಾರ್ಯ ನಿಧನ

ಪುತ್ತೂರು: ಬೆಳ್ತಂಗಡಿಯ ಮುಂಡೂರು ಸೀತಾರಾಮ ಆಚಾರ್ಯ ಅವರ ಪತ್ನಿ ವಿಶಾಲಾಕ್ಷಿ ಆಚಾರ್ಯ (55 ವ) ಅವರು ಹೃದಯಾಘಾತದಿಂದ ಏ. 2ರಂದು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಸಾವಿತ್ರಿ ಆಚಾರ್ಯ ಅವರು ಮೂಲತಃ ಪುತ್ತೂರಿನ ದರ್ಬೆಯವರು. ಮೃತರು ಪತಿ, ಇಬ್ಬರು ಪುತ್ರರು, ಓರ್ವ ಪುತ್ರಿಯನ್ನು ಅಗಲಿದ್ದಾರೆ.

ಹವಾಮಾನ ಇಲಾಖೆ ನೀಡಿದೆ ಮಳೆಯ ಗುಡ್ ನ್ಯೂಸ್| ಅಶ್ವಿನಿ, ಭರಣಿ ಸಹಿತ ಮಳೆಯಾಗುವ ದಿನಾಂಕ ಪ್ರಕಟ!

ಬಿರುಬಿಸಿಲಿನಿಂದ ಕಂಗೆಟ್ಟಿರುವ ರಾಜ್ಯದ ಜನತೆಗೆ ಮಳೆಯ ಗುಡ್ ನ್ಯೂಸ್ ಸಿಕ್ಕಿದೆ. ಸದ್ಯ ರಾಜ್ಯದಲ್ಲಿ ಒಣಹವೆ ಮುಂದುವರೆದಿದೆ. ಬಿಸಿಲಿನಿಂದ ಬೆಂದ ಜನರಿಗೆ ಮುಂದಿನ ಮೂರ್ನಾಲ್ಕು ದಿನದ ಕರ್ನಾಟಕದ ಹಲವು ಕಡೆಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ತನ್ನ ವರದಿಯಲ್ಲಿ ತಿಳಿಸಿದೆ. ಹವಾಮಾನ ಇಲಾಖೆಯು…

ಹರ್ಷ ಶೋರೂಮ್ ಗೋದಾಮಿಗೆ ಅಗ್ನಿ ದುರಂತ- ಕೋಟ್ಯಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿ

ಪುತ್ತೂರು: ಪುತ್ತೂರು ದರ್ಬೆ ಸಂತೃಪ್ತಿ ಹೋಟೆಲ್ ಹಿಂಬದಿ ಹರ್ಷ ಶೋರೂಮ್ ಗೋದಾಮ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಕೋಟ್ಯಾಂತರ ಮೌಲ್ಯದ ಸೊತ್ತುಗಳು ಹಾನಿಗೊಂಡಿವೆ. ಅಗ್ನಿ ಶಾಮಕದಳದವರು ಬೆಂಕಿಯನ್ನು ನಂದಿಸುವ ಕಾರ್ಯಾಚರಣೆ ನಡೆಸಿದ್ದಾರೆ.

ಪುತ್ತೂರು: ಮತದಾನ ಜಾಗೃತಿ ಕಾರ್ಯಕ್ರಮ

ಪುತ್ತೂರು: ಚುನಾವಣೆ ಸುಸೂತ್ರವಾಗಿ ನಡೆಯಲು ಎಲ್ಲಾ ಇಲಾಖಾಧಿಕಾರಿಗಳ ಸಹಕಾರ ಅಗತ್ಯ ಈ ನಿಟ್ಟಿನಲ್ಲಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಮತದಾನ ಜಾಗೃತಿ ಅಭಿಯಾನಗಳನ್ನು ಹಮ್ಮಿಕೊಳ್ಳಿ ಎಂದು ಪುತ್ತೂರು ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾ ಅಧಿಕಾರಿ ಹಾಗೂ ಸಹಾಯಕ ಆಯುಕ್ತರಾದ ಜುಬಿನ್ ಮೊಹಪಾತ್ರ ಹೇಳಿದರು.…

ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು!

ಬೆಳ್ತಂಗಡಿ : ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವನ್ನಪ್ಪಿದ ಘಟನೆ ಗುರುವಾರ ರಾತ್ರಿ ನಡೆದಿದೆ. ಬೆಳ್ತಂಗಡಿ ಸಂತೆಕಟ್ಟೆ ಬಸ್ ನಿಲ್ದಾಣದ ಮುಂಭಾಗದಲ್ಲಿ ಶೇಖರ್ ಬಂಗೇರ ಹೇರಾಜೆ (65) ಎಂಬವರು ರಸ್ತೆ ದಾಟುತ್ತಿದ್ದ ವೇಳೆ ಯುವತಿ ಚಲಾಯಿಸುತ್ತಿದ್ದ ಸ್ಕೂಟರ್ ಢಿಕ್ಕಿ ಹೊಡೆದ ಪರಿಣಾಮ…

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಬೆಳ್ಳಿಚೇಡವು ಅಯ್ಯಪ್ಪ ಸ್ವಾಮಿಯ ಭಜನಾ ಮಂದಿರಕ್ಕೆ ಧನಸಹಾಯ

ಪುತ್ತೂರು: ನೆಟ್ಟಣಿಗೆ ಮುಡ್ನೂರು ಗ್ರಾಮದ ಬೆಳ್ಳಿ ಚೇಡವು ಅಯ್ಯಪ್ಪ ಸ್ವಾಮಿಯ ಭಜನಾ ಮಂದಿರದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟಾಯ್ಲೆಟ್, ಬಾತ್ ರೂಮ್ ಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರು ಗೊಂಡ 50,000 ರೂ.ನ ಮಂಜೂರಾತಿ ಪತ್ರವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ…

ಬೆಳಂದೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ | ಮತದಾನದ ಹಕ್ಕನ್ನು…

ಪುತ್ತೂರು: ಜಗತ್ತಿನಲ್ಲೇ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ದೇಶವಾದ ನಮ್ಮ ಭಾರತದಲ್ಲಿ ಮತ್ತೊಂದು ಚುನಾವಣಾ ಹಬ್ಬ ಬಂದಿದೆ. ಜನರಿಂದ ಆಳ್ವಿಕೆಯಾಗುವ ಈ ಸಮಾಜವು ಸಶಕ್ತವಾಗಬೇಕಾದರೆ ನಮ್ಮನ್ನು ಆಳುತ್ತಿರುವ ಸರ್ಕಾರ ಮತ್ತು ನಾವು ಆಯ್ಕೆ ಮಾಡುವ ಜನಪ್ರತಿನಿಧಿಗಳು ಸಚ್ಚಾರಿತ್ರರಾಗಿರಬೇಕು. ಅಂತಹ ವ್ಯಕ್ತಿಗಳಿಗೆ…

ಬ್ಯಾಂಕ್‌ ಕೆಲಸ ಬಿಟ್ಟು ಕಳ್ಳತನಕ್ಕೆ ಇಳಿದ ಕಿಲಾಡಿ ಕಳ್ಳಿ! ಲ್ಯಾಪ್’ಟಾಪ್ ಕಳ್ಳತನದಲ್ಲಿ ಚಾಲಾಕಿ…

ಬೆಂಗಳೂರು: ಎಚ್‌ಎಎಲ್ ಪೊಲೀಸರು ಕಾರ್ಯಾಚರಣೆ ನಡೆಸಿ ಕಿಲಾಡಿ ಕಳ್ಳಿಯನ್ನು ಬಂಧಿಸಿದ್ದಾರೆ. ಹೋಟೆಲ್, ಪಿಜಿಗಳನ್ನೇ ಟಾರ್ಗೆಟ್ ಮಾಡಿ ಲ್ಯಾಪ್‌ಟಾಪ್‌ಗಳನ್ನು ಜೆಸ್ಸಿ ಅಗರ್ ವಾಲ್ ಎಂಬಾಕೆ ಕದಿಯುತ್ತಿದ್ದಳು. ಹೋಟೆಲ್, ಪಿಜಿಗಳಲ್ಲಿ ರೂಂ ಪಡೆಯುವ ಈ ಖತರ್ನಾಕ್‌ ಲೇಡಿ ಕಳ್ಳತನಕ್ಕೆ ಸಂಚು ರೂಪಿಸುತ್ತಿದ್ದಳು.…

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪರ ಪ್ರಚಾರಕ್ಕೆ ಬರಲಿದ್ದಾರೆ ಸಿಎಂ, ಡಿಸಿಎಂ |ಪುತ್ತೂರಿನಲ್ಲಿ…

ಮಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪರ ಚುನಾವಣಾ ಪ್ರಚಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಮಿಸಲಿದ್ದಾರೆ ಎಂದು ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್.…

ಮುನಿಸು ತಣಿಸಲು ವಿಜಯೇಂದ್ರ ನೇತೃತ್ವದ ಸಮಿತಿ! ಆಖಾಡಕ್ಕಿಳಿದ ಮಾಜಿ ಸಿಎಂ ಯಡಿಯೂರಪ್ಪ

ಬೆಂಗಳೂರು: ಬಿಜೆಪಿಯಲ್ಲಿ ಸೃಷ್ಟಿಯಾಗಿರುವ ಬಂಡಾಯಕ್ಕೆ ತೇಪೆ ಹಚ್ಚುವುದಕ್ಕೆ ಈಗ ಪ್ರಕ್ರಿಯೆ ಪ್ರಾರಂಭವಾಗಿದೆ. ಅದಕ್ಕಾಗಿ ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪನವರೇ ಅಖಾಡಕ್ಕೆ ಇಳಿದಿದ್ದಾರೆ. ಇದರ ಜತೆಗೆ ಮುನಿಸಿ ಕೊಂಡವರನ್ನು ತಣಿಸುವುದಕ್ಕೆ ಹಿರಿಯ ನಾಯಕರನ್ನು ಒಳಗೊಂಡ ತಂಡವನ್ನು ಬಿಜೆಪಿ ರಚಿಸಿದೆ.…