ಸ್ಥಳೀಯ

ಇನ್’ಸ್ಟಾಗ್ರಾಂ ಲವ್: ಎದುರಲ್ಲಿ ನೋಡಿ ತಿರಸ್ಕರಿಸಿದ ಪ್ರಿಯಕರ: ಬಿಲ್ಡಿಂಗ್ ಏರಿದ ಪ್ರಿಯತಮೆ!

ಇನ್‌ಸ್ಟಾಗ್ರಾಂನಲ್ಲಿ ಲವ್ ಮಾಡಿ ಮದುವೆ ವಿಚಾರ ಬಂದಾಗ ಭಿನ್ನಾಭಿಪ್ರಾಯ ಮೂಡಿದ್ದು ಮಹಿಳೆ ಬಿಲ್ಡಿಂಗ್‌ ಏರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಂಜನಗೂಡು ತಾಲೂಕಿನಲ್ಲಿ ನಡೆದಿದೆ. ಬಿಹಾರ ಮೂಲದ ವಿವಾಹಿತ ಮಹಿಳೆ ನಾಸೀಂ ಬೇಗಂ (31) ಹಾಗೂ ಅದೇ ರಾಜ್ಯದ ಸದ್ಯ ಹಿಮ್ಮಾವು ಗ್ರಾಮದಲ್ಲಿ ವಾಸವಿರುವ ಅಸಿಬೂರ್…

ದೇವರಿಗೆ ದೀಪ ಹಚ್ಚುವ ವೇಳೆ ದುರ್ಘಟನೆ: ವಿದ್ಯಾರ್ಥಿನಿ ಸಾವು

ಶಾಲೆಯ ಸಮೀಪದ ದೇವಸ್ಥಾನವೊಂದರಲ್ಲಿ ದೀಪ ಹಚ್ಚಲು ಹೋದ ಸಂದರ್ಭ ಬಟ್ಟೆಗೆ ಬೆಂಕಿ ತಗುಲಿ ಗಾಯಗೊಂಡಿದ್ದ ವಿದ್ಯಾರ್ಥಿನಿ ಮೃತಪಟ್ಟ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಮೇಳಕೋಟೆ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಶಾಲೆಯ ಒಂದನೇ ತರಗತಿಯ ವಿದ್ಯಾರ್ಥಿನಿ ದೀಕ್ಷಾ ಮೃತಪಟ್ಟ ದುರ್ದೈವಿ ಬಾಲಕಿ. ಶಾಲೆಯಲ್ಲಿ…

ಸಭೆ, ಸಮಾರಂಭ, ಚುನಾವಣಾ ಪ್ರಚಾರಗಳಿಗೆ ಪೂರ್ವಾನುಮತಿ ಕಡ್ಡಾಯ!

ಮಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಎಲ್ಲಾ ರಾಜಕೀಯ ಪಕ್ಷಗಳ ಸಭೆ, ಸಮಾರಂಭ, ಚುನಾವಣಾ ಪ್ರಚಾರಗಳಿಗೆ ಅಗತ್ಯವಾಗಿರುವ ಪೂರ್ವಾನುಮತಿಯನ್ನು ಕಡ್ಡಾಯವಾಗಿ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಸೂಚನೆ ನೀಡಿದ್ದಾರೆ. ಲೋಕಸಭಾ ಚುನಾವಣೆ-2024ರ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ…

ಅಂಗನವಾಡಿ, ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಕಳ್ಳತನ!! | ಮೊಟ್ಟೆನ ಆಮ್ಲೆಟ್ ಮಾಡಿದ್ರು, ಟಾಯ್ಲೆಟಿಗೆ ಮಣ್ಣು…

ಪುತ್ತೂರು: ನಗರದ ಕೆಎಸ್‍ ಆರ್ ಟಿಸಿ ಬಸ್ ನಿಲ್ದಾಣದ ಬಳಿ ಇರುವ ನೆಲ್ಲಿಕಟ್ಟೆ ಅಂಗನವಾಡಿ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕಳ್ಳರು ನುಗ್ಗಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಅಂಗನವಾಡಿಯ ಬೀಗ ಒಡೆದು ನುಗ್ಗಿದ ಕಳ್ಳರು ಅಂಗನವಾಡಿಯಲ್ಲಿ ದಾಸ್ತಾನಿರಿಸಿದ್ದ ಸುಮಾರು 25 ಕ್ಕೂ ಅಧಿಕ ಮೊಟ್ಟೆಗಳನ್ನು…

ಬ್ಯಾಂಡ್ ಬ್ಯಾನರ್’ನೊಂದಿಗೆ ಮನೆಗೆ ತೆರಳಿ ಎಚ್ಚರಿಕೆ ಪ್ರಕರಣ!| 9 ಮಂದಿ ಆರೋಪಿಗಳ ವಶಕ್ಕೆ ಪಡೆದ…

ಪುತ್ತೂರು: ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ನಡೆಸಿದ್ದಾರೆ ಎಂದು ಆರೋಪಿಸಿ ಬ್ಯಾಂಡ್ ಬ್ಯಾನರ್'ನೊಂದಿಗೆ ಮನೆಗೆ ತೆರಳಿ ಎಚ್ಚರಿಕೆ ನೀಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಒಂಭತ್ತು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನ್ಯಾಯಾಲಯದ ಪ್ರಕ್ರಿಯೆಯಂತೆ ಒಂಬತ್ತು ಮಂದಿ ಆರೋಪಿಗಳನ್ನು ವಶಕ್ಕೆ…

ಬಿಜೆಪಿಯೊಂದಿಗೆ ಮೈತ್ರಿ ಬೇಕಿತ್ತಾ? ಎಚ್.ಡಿ.ಕೆ. ಅಸಮಾಧಾನ

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಕೇವಲ ಎರಡು ಕ್ಷೇತ್ರಗಳಿಗಾಗಿ ನಾನು ಬಿಜೆಪಿ ಜೊತೆ ಮೈತ್ರಿ ಮಾಡಿಕೊಳ್ಳಬೇಕಿತ್ತಾ? ಜೆಡಿಎಸ್ ಸ್ವತಂತ್ರವಾಗಿ ಸ್ಪರ್ಧಿಸಿದಲ್ಲೂ ಹಾಸನ ಹಾಗೂ ಮಂಡ್ಯದಲ್ಲಿ ನಾವು ಗೆಲುವು ಸಾಧಿಸುತ್ತಿದ್ದೆವು ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಅಸಮಾಧಾನ…

ಮೋದಿ ಶಿವಮೊಗ್ಗ ಭೇಟಿ: ಅಭಿನಂದನೆ ಸಲ್ಲಿಸಿದ ದ.ಕ. ಬಿಜೆಪಿ ಅಭ್ಯರ್ಥಿ ಕ್ಯಾ. ಬೃಜೇಶ್ ಚೌಟ

ಮಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಶಿವಮೊಗ್ಗದ ಅಲ್ಲಮಪ್ರಭು ಮೈದಾನದಲ್ಲಿ ಸೋಮವಾರ ಆಯೋಜಿಸಿದ ಬೃಹತ್ ಸಾರ್ವಜನಿಕ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಿದರು. ಈ ವೇಳೆ ಮಂಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ನರೇಂದ್ರ ಮೋದಿಯವರನ್ನು ಮಾಲಾರ್ಪಣೆ ಮಾಡಿ…

ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್ ಪಲ್ಟಿ: ಚಾಲಕ ಚೇತನ್ ಕುಮಾರ್ ಮೃತ್ಯು, ಪ್ರಯಾಣಿಕರಿಗೆ ಗಾಯ

ಕಾಸರಗೋಡು: ಪೆರಿಯ ರಸ್ತೆಯಲ್ಲಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಚಾಲಕ ಸಾವನ್ನಪ್ಪಿದ ಘಟನೆ ಮಾ.18 ರ ಸೋಮವಾರ ಸಂಜೆ 4 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ. ಮಂಗಳೂರಿನಿಂದ ಕಣ್ಣೂರಿಗೆ ಹೋಗುತ್ತಿದ್ದ ಮೆಹಬೂಬ್ ಬಸ್ ಅಪಘಾತಕ್ಕೀಡಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ…

ಪುತ್ತೂರು: ಅಧಿಕಾರ ಸ್ವೀಕರಿಸಿದ ನೂತನ ತಹಸೀಲ್ದಾರ್

ಪುತ್ತೂರು: ಚುನಾವಣಾ ಹಿನ್ನೆಲೆಯಲ್ಲಿ ತಹಸೀಲ್ದಾರ್ ವರ್ಗಾವಣೆಗೊಂಡಿದ್ದು, ನೂತನ ತಹಸೀಲ್ದಾರ್ ಕುಂಞ ಅಹಮದ್ ಸೋಮವಾರ ಸಂಜೆ ಅಧಿಕಾರ ಸ್ವೀಕರಿಸಿದರು. ತಹಸೀಲ್ದಾರ್ ಆಗಿದ್ದ ಪುರಂದರ ಹೆಗಡೆ ಅವರು ಅಧಿಕಾರ ಹಸ್ತಾಂತರಿಸಿದರು. ಪುತ್ತೂರು ತಾಲೂಕು ಕಚೇರಿ ಸಿಬ್ಬಂದಿ ಉಪಸ್ಥಿತರಿದ್ದರು.

ಡಿವಿ – ಡಿಕೆಶಿ ‘ಹಸ್ತ’ಲಾಘವ!

ಬೆಂಗಳೂರು: ಒಂದೆಡೆ ಡಿವಿ ಸದಾನಂದ ಗೌಡ ಕಾಂಗ್ರೆಸ್ ಸೇರ್ತಾರೆ ಅನ್ನುವ ಸುದ್ದಿ. ಇನ್ನೊಂದೆಡೆ ಡಿ.ವಿ. ಸದಾನಂದ ಗೌಡ ಹುಟ್ಟುಹಬ್ಬ ಇಂದು. ಇದಕ್ಕೆ ಸಂಬಂಧ ಇದೆಯೋ, ಇಲ್ಲವೋ ಗೊತ್ತಿಲ್ಲ. ಆದರೆ ಡಿ.ವಿ. ಹುಟ್ಟುಹಬ್ಬಕ್ಕೆ ಡಿಕೆಶಿ ಶುಭಕೋರಿದ್ದಾರೆ. ಇಬ್ಬರೂ ನಾಯಕರು ಪರಸ್ಪರ ಹಸ್ತಲಾಘವ ಮಾಡಿಕೊಂಡಿರುವ ಫೊಟೋ…