ಸ್ಥಳೀಯ

ಸಂಟ್ಯಾರ್: ಸಾರ್ವಜನಿಕ ರಕ್ತದಾನ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ

ಅಪ್ಪು ಕಲ್ಲರ್ಪೆ ಸ್ಮರಣಾರ್ಥ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ (ರಿ) ಹಾಗೂ ಏ.ಜೆ ಆಸ್ಪತ್ರೆ ರಕ್ತನಿಧಿ ಮಂಗಳೂರು ಸಹಯೋಗದೊಂದಿಗೆ ಸಾರ್ವಜನಿಕ ರಕ್ತದಾನ ಶಿಬಿರ ಹಾಗೂ ಜನಪ್ರಿಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಮಂಗಳೂರು ಸಹಯೋಗದೊಂದಿಗೆ ಸಾರ್ವಜನಿಕ ಉಚಿತ ಆರೋಗ್ಯ ತಪಾಸಣಾ ಶಿಬಿರವು ನಡೆಯಿತು.  

 ಪ್ರಜ್ಞಾ ಆಶ್ರಮಕ್ಕೆ ಕಿಟ್ ವಿತರಣೆ, ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ರವೀಂದ್ರ ಅವರಿಗೆ ಗೌರವ 

ವಿಶೇಷ ಚೇತನರ ಕಾರ್ಯದಲ್ಲಿ ತೊಡಗಿರುವ ವಿಶೇಷ ಚೇತನ ವ್ಯಕ್ತಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ರವೀಂದ್ರ ಅವರನ್ನು ಪುತ್ತೂರು ರೋಟರ್ಯಾಕ್ಟ್ ಕ್ಲಬ್ ವಾರದ ಸಭೆಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

ಕಾಸರಗೋಡು ಮನೆ ಮುಂದೆ ಐದು ಚಿರತೆ ಪ್ರತ್ಯಕ್ಷ.!!

ಮುಳಿಯಾರು ಗ್ರಾಮ ಪಂಚಾಯತ್ ವ್ಯಾಪ್ತಿಗೊಳಪಟ್ಟ ಪ್ರದೇಶದಲ್ಲಿ ಚಿರತೆಗಳ ಭೀತಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಡಿ.25 ರಂದು ರಾತ್ರಿ ಇಲ್ಲಿನ ಮನೆಯೊಂದರ ಪರಿಸರದಲ್ಲಿ ಐದು ಚಿರತೆಗಳು ಗುಂಪಾಗಿ ಏಕಕಾಲದಲ್ಲಿ ಕಂಡು ಬಂದಿದೆ. 

ಜ.4: ಅರಸು ಮುಂಡ್ಯತ್ತಾಯ ದೈವಗಳ’ಪಾಂಗಳಾಯಿ ನೇಮೋತ್ಸವ’; ಪುತ್ತೂರಿನ ಎರಡನೇ ದಂಡನಾಯಕ ಅರಸು…

ಕಾರಣಿಕ ಕೇತ್ರವಾಗಿರುವ ಪರ್ಲಡ್ಕದ ಪಾಂಗಳಾಯಿ ಅರಸು ಮುಂಡ್ಯತ್ತಾಯ ದೈವಗಳ ವಾರ್ಷಿಕ ನೇಮೋತ್ಸವ, ವರ್ಷಾವಧಿ ಪೂಜೆ, ಗಣಹೋಮ, ಸತ್ಯನಾರಾಯಣ ಪೂಜಾ ಕಾರ್ಯಕ್ರಮಗಳು ಜ. 4ರಂದು ನಡೆಯಲಿದೆ ಎಂದು ಅರಸು ಮುಂಡ್ಯತ್ತಾಯ ದೈವಸ್ಥಾನದ ಸಮಿತಿ ಅಧ್ಯಕ್ಷ ಗೋಪಾಲಕೃಷ್ಣ ನಾಯ್ಕ ಕಲ್ಲಿಮಾರ್ ತಿಳಿಸಿದರು.

ಜ.4: ಒಕ್ಕಲಿಗ ಗೌಡ ಸೇವಾ ಸಂಘದಿಂದ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಒಕ್ಕಲಿಗ ಸ್ವಸಹಾಯ ಟ್ರಸ್ಟ್ …

ಪುತ್ತೂರು ತಾಲೂಕು ಗೌಡ ಸೇವಾ ಸಂಘದ ನೇತೃತ್ವದಲ್ಲಿ ಗೌಡ ಯುವ ಸಂಘ, ಗೌಡ ಮಹಿಳಾ ಸಂಘ ಮತ್ತು ಒಕ್ಕಲಿಗ ಸ್ವಸಹಾಯ ಟ್ರಸ್ಟ್ ಸಹಯೋಗದೊಂದಿಗೆ ವಾರ್ಷಿಕ ಸಮಾವೇಶ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಒಕ್ಕಲಿಗ ಸ್ವಸಹಾಯ ಟ್ರಸ್ಟ್ನ ದಶಮಾನೋತ್ಸವ  ಸಂಭ್ರಮವು ಜ. 4ರಂದು ತೆಂಕಿಲದ ಒಕ್ಕಲಿಗ ಗೌಡ ಸಮುದಾಯ …

ಬೊಳುವಾರು ವಿಶ್ವಕರ್ಮ ಸಭಾಭವನದಲ್ಲಿ 8 ವಟುಗಳಿಗೆ ಸಾಮೂಹಿಕ ಬ್ರಹ್ಮೋಪದೇಶ

ಬೊಳುವಾರು ವಿಶ್ವಬ್ರಾಹ್ಮಣ ಸೇವಾ ಸಂಘ, ವಿಶ್ವಕರ್ಮ ಯುವ ಸಮಾಜ, ವಿಶ್ವಕರ್ಮ ಮಹಿಳಾ ಮಂಡಳಿ, ಮಂಗಳೂರು ಎಸ್.ಕೆ. ಗೋಲ್ಡ್ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ – ಆಪರೇಟಿವ್ ಸೊಸೈಟಿ ಆಶ್ರಯದಲ್ಲಿ ಭಾನುವಾರ ಬೊಳುವಾರು ವಿಶ್ವಕರ್ಮ ಸಭಾಭವನದಲ್ಲಿ ಉಚಿತ ಸಾಮೂಹಿಕ ಬ್ರಹ್ಮೋಪದೇಶ ನೆರವೇರಿತು.

ಶ್ರೀನಿವಾಸ ಕಲ್ಯಾಣೋತ್ಸವ – ಧರ್ಮಸಂಗಮ: ಕಾರ್ಯಕರ್ತರ ಮಹಾಸಭೆ 

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ  ಮುಂಭಾಗ ಡಿ.28 - 29ರಂದು ಜರಗುವ ಶ್ರೀನಿವಾಸ ಕಲ್ಯಾಣೋತ್ಸವ ಮತ್ತು ಧರ್ಮಸಂಗಮ ಕಾರ್ಯಕ್ರಮಕ್ಕೆ ಆನ್ ಲೈನ್ ನಲ್ಲಿ ನೊಂದಾಯಿತ ಕಾರ್ಯಕರ್ತರ ಮಹಾಸಭೆ ಡಿ.22ರಂದು ಸುಭದ್ರ ಕಲ್ಯಾಣ ಮಂಟಪದಲ್ಲಿ ನಡೆಯಿತು.

ಸಂಸ್ಕೃತಿಯಿಂದ ವಿಮುಖವಾಗದಂತೆ ಅರಿವು ಮೂಡಿಸಬೇಕು: ಎಡನೀರು ಶ್ರೀಗಳು 

ಸಮಾಜದ ಮುಖ್ಯವಾಹಿನಿಯಾದ ಯುವ ಜನಾಂಗವು ಸಂಸ್ಕೃತಿಯಿಂದ ವಿಮುಖವಾಗದಂತೆ ನೋಡಿಕೊಳ್ಳುವ ಜವಾಬ್ದಾರಿ ಹಿರಿಯರಿಗಿದೆ. ಹಿರಿಯರ ಪ್ರಯತ್ನದಿಂದ ಮರೆಯಾಗುತ್ತಿರುವ ಸಂಸ್ಕಾರಗಳನ್ನು ಮರುಕಳಿಸುವಂತೆ ಮಾಡಲು ಸಾಧ್ಯವೆಂದು ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿ  ತಿಳಿಸಿದರು.