ಸ್ಥಳೀಯ

ಮಾರ್ನೆಮಿಗುಡ್ಡೆ ನಿವಾಸಿ ಸುಂದರ ನಿಧನ!

ವಿಟ್ಲ: ಅನಾರೋಗ್ಯದಿಂದಾಗಿ ಮಾರ್ನೆಮಿಗುಡ್ಡೆ ನಿವಾಸಿ ಸುಂದರ (67) ನಿಧನರಾದರು. ಇವರು ಸುಮಾರು  ವರುಷಗಳಿಂದ ಕಾರು ಹಾಗೂ ಆಟೋ ರಿಕ್ಷಾ ಚಾಲಕರಾಗಿದ್ದು, ಎಲ್ಲರಿಗೂ ಚಿರಪರಿಚಿತರಾಗಿದ್ದರು.

ಸರ್ಕಾರಿ ಕೋಟಾ ಬಿ.ಎಡ್ ಸೀಟುಗಳಿಗೆ ಅರ್ಜಿ ಆಹ್ವಾನ

ರಾಜ್ಯದ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಬಿ.ಎಡ್. ಕಾಲೇಜುಗಳಲ್ಲಿ 2024- 25ನೇ ಸಾಲಿನಲ್ಲಿ ಲಭ್ಯವಿರುವ ಸರ್ಕಾರಿ ಕೋಟಾ ಸೀಟು ಗಳ ಪ್ರವೇಶಕ್ಕೆ ಶಾಲಾ ಶಿಕ್ಷಣ ಇಲಾಖೆ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಿದೆ. 

ಎಂ ಗೋಪಾಲಕೃಷ್ಣ ಈಶ ಅವರಿಗೆ ಗೌರವ ಡಾಕ್ಟರೇಟ್ ಪದವಿ

ಪುತ್ತೂರು: ಇಲ್ಲಿನ ನೆಲ್ಲಿಕಟ್ಟೆಯಲ್ಲಿರುವ ಈಶ ವಿದ್ಯಾಲಯದ ಪ್ರಾಂಶುಪಾಲ ಎಂ. ಗೋಪಾಲಕೃಷ್ಣ ಈಶ ಅವರ ಶಿಕ್ಷಣ ಹಾಗೂ ಸಾಮಾಜಿಕ ಕ್ಷೇತ್ರದ ಸಾಧನೆಯನ್ನು ಗುರುತಿಸಿ ಗೌರವ ಡಾಕ್ಟರೇಟ್ ಪದವಿ ಪ್ರಧಾನ ಮಾಡಲಾಗಿದೆ.

5,8,9,11ನೇ ತರಗತಿಗೆ ಬೋರ್ಡ್ ಪರೀಕ್ಷೆ ಇಲ್ಲ!

ಸುಪ್ರೀಂ ಕೋರ್ಟ್ನಲ್ಲಿ ಪ್ರಕರಣ ಇನ್ನೂ ಇತ್ಯರ್ಥವಾಗದೆ ಇರುವ ಹಿನ್ನೆಲೆಯಲ್ಲಿ 5, 8, 9 ಹಾಗೂ 11ನೇ ತರಗತಿಗೆ ಈ ವರ್ಷ ಬೋರ್ಡ್ ಪರೀಕ್ಷೆ ನಡೆಸುವುದಿಲ್ಲ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ನಕಲಿ ವೈದ್ಯನ ಬಂಧನ!

ಫ್ರೆಂಡ್ಸ್ ಕ್ಲಬ್‌ ನೇತೃತ್ವದಲ್ಲಿ ವೈದ್ಯಕೀಯ ಶಿಬಿರವು ಮಂಜೇಶ್ವರ ಪಚ್ಚಂಪಾರೆಯಲ್ಲಿ  ನಡೆಸಲಾಗಿತ್ತು.   ನಕಲಿ ಔಷಧಿ ತಯಾರಿಸುವುದರೊಂದಿಗೆ ಚಿಕಿತ್ಸೆಯನ್ನೂ ನೀಡುತ್ತಿದ್ದ ಆರೋಪದಮೇಲೆ ನಕಲಿ ವೈದ್ಯನನ್ನು ಮಂಜೇಶ್ವರ ಪೊಲೀಸರು ಬಂಧಿಸಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿದ ಕಾರು ಚರಂಡಿಗೆ!

ರಾಷ್ಟ್ರೀಯ ಹೆದ್ದಾರಿಯ ಪುಂಜಾಲಕಟ್ಟೆ- ಚಾರ್ಮಾಡಿ ರಸ್ತೆಯ ಬೆಳ್ತಂಗಡಿ ಸಮೀಪದ ಕಾಶಿಬೆಟ್ಟು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಚರಂಡಿಗೆ ಬಿದ್ದ ಘಟನೆ ನಡೆದಿದೆ.

ಪ್ರವಾಸಿ ಬಸ್ ಹರಿದು ವಿದ್ಯಾರ್ಥಿ ಸಾವು!

ಕಾಲೇಜಿಗೆ ಹೋಗಲು ಬಸ್ ನಿಲ್ದಾಣದಲ್ಲಿ ಕಾಯುತ್ತಿದ್ದ ವಿದ್ಯಾರ್ಥಿ ಪ್ರಥಮ್ ಮೇಲೆ ಬಸ್ ಹರಿದು ಆಸ್ಪತ್ರೆ ದಾಖಲಿಸುವ ವೇಳೆ ಮಾರ್ಗ ಮಧ್ಯದಲ್ಲಿ ಪ್ರಥಮ್ ಕೊನೆಯುಸಿರೆಳೆದಿದ್ದಾನೆ.

ರೋಗಿಗೆ ಸಂಬಂಧ ಪಟ್ಟ ದಾಖಲೆ ಪತ್ರಗಳನ್ನು ನೀಡದ ಆಸ್ಪತ್ರೆಗೆ ಬಿಸಿ ಮುಟ್ಟಿಸಿದ ಗ್ರಾಹಕರ ನ್ಯಾಯಾಲಯ! ಗ್ರಾಹಕ…

ಅನಾರೋಗ್ಯ ಪೀಡಿತರಾಗಿ ಮಂಗಳೂರಿನ ಫಲ್ನೀರ್ ಬಳಿ ಇರುವ ಯುನಿಟಿ ಆಸ್ಪತ್ರೆಗೆ ದಾಖಲಾಗಿದ್ದ ಇಬ್ರಾಹಿಂ ಯು.ಎಚ್ ರವರ ವೈದ್ಯಕೀಯ ದಾಖಲೆಗಳನ್ನು ನೀಡದ ಕಾರಣ ಮಂಗಳೂರಿನ ವಕೀಲರಾದ ಪಿ.ಬಿ ಭಟ್ ರವರು ಗ್ರಾಹಕರ ಆಯೋಗದ ನ್ಯಾಯಾಲಯದಲ್ಲಿ ಕಕ್ಷಿದಾರರ ಪರವಾಗಿ ದೂರು ದಾಖಲಿಸಿ, ಯುನಿಟಿ ಅಸ್ಪತ್ರೆಯವರು ರೋಗಿಗೆ ಸಂಬಂಧ…