ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯಲ್ಲಿ ( Sindhudurg district of Maharashtra) 50 ವರ್ಷದ ಮಹಿಳೆಯೊಬ್ಬರು (woman) ಕಾಡಿನಲ್ಲಿ ಮರಕ್ಕೆ ಸರಪಳಿಯಲ್ಲಿ ಕಟ್ಟಿಹಾಕಿರುವ ರೀತಿಯಲ್ಲಿ ಪತ್ತೆಯಾಗಿದ್ದಾರೆ.
ಸ್ನಾನಕ್ಕೆಂದು ಬಾತ್ ರೂಮ್ ಒಳಗೆ ತೆರಳಿದ್ದ ಯುವಕನೋರ್ವ ಗ್ಯಾಸ್ ಗೀಸರ್ ವಿಷಾನಿಲ ಸೋರಿಕೆಯಾಗಿದ್ದರಿಂದ ಉಸಿರುಗಟ್ಟಿ ಮೃತಪಟ್ಟ ಘಟನೆ ರವಿವಾರ ರಾತ್ರಿ ಕೋಟೆಬಾಗಿಲಿನಲ್ಲಿ ಸಂಭವಿಸಿದೆ.
ಟಿಕೇಟ್ ಏರಿಕೆ ಸಂದರ್ಭ ಸಹಾಯಕ್ಕೆ ಧಾವಿಸುತ್ತಿದ್ದ ರೈಲ್ವೇ ಇಲಾಖೆ, ಈ ಬಾರಿಯ ಗುಡ್ಡ ಕುಸಿತಕ್ಕೆ ರೈಲು ಸಂಪರ್ಕ ಸ್ಥಗೊತಗೊಳಿಸಿದೆ. ಪರಿಣಾಮ, ಖಾಸಗಿ ಬಸ್ ಟಿಕೇಟ್ ದರ ಎರಡು - ಮೂರು ಪಟ್ಟು ಹೆಚ್ಚಳ ಮಾಡಿವೆ.
ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಶಿರಾಡಿ ಘಾಟ್‌ನ ಎಡಕುಮೇರಿ ಕಡಗರವಳ್ಳಿ ಮಧ್ಯೆ ಭೂಕುಸಿತದಿಂದಾಗಿ 14 ರೈಲುಗಳ ಸಂಚಾರ ರದ್ದಾಗಿದೆ. ಹಳಿ ದುರಸ್ತಿ ಕಾರ್ಯ ಮುಂದುವರಿದಿದ್ದು, ಭಾರಿ ಮಳೆಯಿಂದಾಗಿ ಪುನಃಸ್ಥಾಪನೆ ಕಾಮಗಾರಿ ವಿಳಂಬವಾಗುತ್ತಿದೆ. ಹೀಗಾಗಿ ಆಗಸ್ಟ್ 10ರ ವರೆಗೆ ಈ ಮಾರ್ಗದಲ್ಲಿ ರೈಲು ಸಂಚಾರ…
ದರ್ಬೆಯ ಗುರುಪ್ರಸಾದ್ ಮೋಟಾರ್ ವರ್ಕ್ಸ್ ಹಾಗೂ ಗುರುಪ್ರಸಾದ್ ಕಟ್ಟಡದ ಮಾಲಕ, ದರ್ಬೆ ನಿವಾಸಿ ವಾಸುದೇವ ಆಚಾರ್ಯ (77 ವ.) ಅವರು ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ಸಂಜೆ ನಿಧನರಾದರು. ಅವರು ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ಹೇಳಲಾಗಿದೆ.
ಬಂಟ್ವಾಳ: ಇಲ್ಲಿನ ಅಲ್ಲಿಪಾದೆ ಸಂತ ಅಂತೋನಿಯವರ ಇಗರ್ಜಿ ಇದರ ವೈ.ಸಿ.ಎಸ್. ವತಿಯಿಂದ ಅಲ್ಲಿಪಾದೆಯ ಸಾರ್ವಜನಿಕ ಬಸ್ ತಂಗುದಾಣ ಸ್ವಚ್ಛತಾ ಕಾರ್ಯ ಭಾನುವಾರ ನಡೆಯಿತು.
ಶಿರಾಡಿ ಘಾಟ್ ನ ದೋಣಿಗಲ್ ನಲ್ಲಿ ಗುಡ್ಡ ಕುಸಿತಗೊಂಡಿದೆ. ಪರಿಣಾಮ ಮಂಗಳೂರು - ಬೆಂಗಳೂರು ನಡುವಿನ ಪ್ರಮುಖ ಸಂಪರ್ಕ ಕೊಂಡಿಯಾಗಿದ್ದ ಶಿರಾಡಿ ಘಾಟ್ ಸಂಪರ್ಕ ಕಡಿತಗೊಂಡಿದೆ.
ನೆಹರುನಗರ ನಿವಾಸಿ, ವಿದೇಶದಲ್ಲಿ ಉದ್ಯೋಗದಲ್ಲಿದ್ದ ಭರತ್ (44 ವ.) ದುಬೈಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಶುಕ್ರವಾರ ಮೃತದೇಹವನ್ನು ಸ್ವಗೃಹಕ್ಕೆ ತರಲಾಯಿತು.
ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಹಿಂದೂ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಿಡಿಸಿದ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರಿನ ಕಾಟನ್ ಪೇಟ್ ಪೊಲೀಸರು ಪುನೀತ್ ಕೆರೆಹಳ್ಳಿಯನ್ನು ಬಂಧಿಸಿದ್ದಾರೆ.
ಮಂಗಳೂರು-ಬೆಂಗಳೂರು ರೈಲ್ವೇ ಮಾರ್ಗದಲ್ಲಿ ಮಣ್ಣು ಜರಿದ ಹಿನ್ನಲೆ ಮಂಗಳೂರು-ಬೆಂಗಳೂರು ರೈಲು ಸಂಪರ್ಕ ಸ್ಥಗಿತಗೊಂಡಿದೆ.
Welcome, Login to your account.
Welcome, Create your new account
A password will be e-mailed to you.