ಕಲ್ಲರ್ಪೆಯ ಜಯಭಾರತಿ (56) ಅವರು ಮನೆಯಲ್ಲಿ ಶನಿವಾರ ರಾತ್ರಿ ಮಲಗಿದ್ದ ಸಂದರ್ಭದಲ್ಲಿ ಮಹಿಳೆಯ ಬಾವ ಶಂಕರ ಅವರು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ ಗಂಭೀರ ಗಾಯಗೊಂಡಿರುವ ಮಹಿಳೆಯನ್ನು ಸಂಬಂಧಿಕರು ಸುಳ್ಯದ ಆಸ್ಪತ್ರೆಗೆ ಕರೆತಂದು ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಂಟ್ವಾಳ: ಇಲ್ಲಿನ ಖಾಸಗಿ ಶಾಲೆಯ ವಿದ್ಯಾರ್ಥಿಗಳನ್ನು ಕರೆದುಕೊಂಡು ಬರುತ್ತಿದ್ದ ಬಸ್ ಚಾಲಕನಿಗೆ ಮೂರ್ಚೆ ರೋಗ ( ಪಿಡ್ಸ್) ಉಂಟಾಗಿ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಪೊಳಲಿ ಸಮೀಪದ ಬಡಕಬೈಲು ಎಂಬಲ್ಲಿ ಅ.14ರಂದು ಬೆಳಿಗ್ಗೆ ನಡೆದಿದೆ.
ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಮತ್ತು ಸೌಹಾರ್ದ ಯಕ್ಷಗಾನ ಸಮಿತಿ ಸಹಯೋಗದಲ್ಲಿ ಶ್ರೀ ಶಾರದಾ ಕಲಾಮಂಟಪದಲ್ಲಿ ಜರಗಿದ 30ನೇ ವರ್ಷದ ಶ್ರೀ ಶಾರದೋತ್ಸವ ಕಾರ್ಯಕ್ರಮದಲ್ಲಿ ಉಪನ್ಯಾಸಕ, ಯಕ್ಷಗಾನ ಅರ್ಥಧಾರಿ ಗುಡ್ಡಪ್ಪ ಬಲ್ಯರನ್ನು ಸನ್ಮಾನಿಸಲಾಯಿತು.
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳಾದ ಪರಶುರಾಮ್ ವಾಘ್ಮೋರೆ ಮತ್ತು ಮನೋಹರ್ ಯಡವೆಗೆ ವಿಶೇಷ ನ್ಯಾಯಾಲಯ ಅಕ್ಟೋಬರ್ 9ರಂದು ಜಾಮೀನು ನೀಡಿದ್ದು ಜೈಲಿನಿಂದ ಹೊರಬಂದ ಆರೋಪಿಗಳಿಗೆ ಹಿಂದೂಪರ ಸಂಘಟನೆಗಳು ಸನ್ಮಾನಿಸಿದೆ.
ಕಾರ್ಕಳ ತಾಲೂಕು ಕಚೇರಿ ಜಂಕ್ಷನ್ ಬಳಿ ಬೈಪಾಸ್ ರಸ್ತೆಯಲ್ಲಿಯಿರುವ ಎಂಆರ್ಪಿಎಲ್ ಪೆಟ್ರೋಲ್ ಬಂಕ್ನಲ್ಲಿ ಕಾರಿಗೆ ಟ್ಯಾಂಕ್ ತುಂಬ ಪೆಟ್ರೋಲ್ ತುಂಬಿಸಿ ಹಣ ಕೊಡದೆ ಪರಾರಿಯಾಗಿದ್ದ ಅಸಾಮಿಯನ್ನು ಪತ್ತೆಹಚ್ಚುವಲ್ಲಿ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ.
ಪುತ್ತೂರು: 33 ಕೆ.ವಿ. ಕಾವು- ಸುಳ್ಯ ವಿದ್ಯುತ್ ಮಾರ್ಗದಲ್ಲಿ ಅ. 15 (ಮಂಗಳವಾರ) ರ ಬೆಳಿಗ್ಗೆ 9:30 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ನಿಲುಗಡೆ ನಡೆಯಲಿದೆ.
ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಆಚರಿಸಲಾಗುತ್ತಿರುವ “ಮಂಗಳೂರು ದಸರಾ’ ಸಂಭ್ರಮದ ಬೃಹತ್ ಶೋಭಾಯಾತ್ರೆ ಅ.13ರಂದು ಸಂಜೆ 4 ಗಂಟೆಗೆ ಆರಂಭವಾಗಿ ಅ.14ರ ಮುಂಜಾನೆ ಶಾರದೆಯ ಜಲಸ್ತಂಭನದ ಮೂಲಕ ಸಮಾಪನಗೊಳ್ಳಲಿದೆ.
ಮೈಸೂರಿನಲ್ಲಿ ವಿಶ್ವವಿಖ್ಯಾತ ಜಂಬೂ ಸವಾರಿಗೆ ಚಾಲನೆ ನೀಡಲಾಯಿತು.
ಬೆಡ್ ಶೀಟ್ ಮತ್ತು ಲುಂಗಿಯ ನೆರವಿನಿಂದ 20 ಅಡಿಯ ಜೈಲು ಗೋಡೆಯನ್ನು ಏರಿ ಐದು ಮಂದಿ ಪೋಕ್ಸೋ ವಿಚಾರಣಾಧೀನ ಕೈದಿಗಳು ಪರಾರಿಯಾಗಿರುವ ಘಟನೆ ವರದಿಯಾಗಿದೆ.
ಸವಣೂರು: ಪಿಕಪ್ ಮತ್ತು ಬೈಕ್ ಮಧ್ಯೆ ಅಪಘಾತ ಸಂಭವಿಸಿ ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡ ಘಟನೆ ಸವಣೂರು ಸಮೀಪ ಚಾಪಳ್ಳ ಎಂಬಲ್ಲಿ ಸೋಮವಾರ ನಡೆದಿದೆ.
Welcome, Login to your account.
Welcome, Create your new account
A password will be e-mailed to you.