ಕಾರೊಂದು ಹಿಮ್ಮುಖವಾಗಿ ಚಲಿಸಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಘಟನೆ ಮುಕ್ರಂಪಾಡಿಯಲ್ಲಿ ಗುರುವಾರ ರಾತ್ರಿ ನಡೆದಿದೆ.
ದ.ಕ ಜಿಲ್ಲೆಯಾದ್ಯಂತ ನಿರಂತರ ಮಳೆ ಸುರಿಯುತ್ತಿರುವ ಹಿನ್ನೆಲೆ ನಾಳೆ(ಜೂ.28) ದ.ಕ ಜಿಲ್ಲೆಯ ಎಲ್ಲಾ ಪ್ರಾಥಮಿಕ-ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಿ ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನೀಡಿದ್ದಾರೆ.
ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದಲ್ಲಿ ಮನೆ ಸಮೀಪದ ಕಂಬದ ಸ್ಟೇ ವಯರ್‌ನಿಂದ ವಿದ್ಯುತ್ ಪ್ರವಹಿಸಿ ಪ್ರತೀಕ್ಷಾ ಶೆಟ್ಟಿ (20) ದಾರುಣ ಸಾವನ್ನಪ್ಪಿದ್ದಾರೆ.
ಹಲ್ಲೆ ನಡೆಸಿದ ಆರೋಪಿಯನ್ನು ಬಂಧಿಸಲು ವಿಫಲವಾದ ಕಂಕನಾಡಿ ನಗರ ಠಾಣೆಯ ಪೊಲೀಸ್ ಅಧಿಕಾರಿಗಳ ವಿರುದ್ಧ ಮಂಗಳೂರು ವಕೀಲರ ಸಂಘದ ಸದಸ್ಯರಿಂದ ಪ್ರತಿಭಟನೆ ನಡೆಯಿತು.
ಯಡೂರು ಸಮೀಪ ಮತ್ತಿಗ ಬಳಿ ಮೀನು ಹಿಡಿಯಲು ಹೋಗಿ ವಾಪಾಸ್ ಬರುವಾಗ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾಗಿ ಇಬ್ಬರ ಸ್ಥಿತಿ ಗಂಭೀರವಾಗಿ ಮಣಿಪಾಲ ಆಸ್ಪತ್ರೆಗೆ ರವಾನಿಸಲಾಗಿತ್ತು. ಅದರಲ್ಲಿ ಓರ್ವ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ.
ವಿದ್ಯುತ್ ತಂತಿ ಕಡಿದು ಬಿದ್ದ ವಿದ್ಯುತ್ ತಗುಲಿದ ಪರಿಣಾಮ ಇಬ್ಬರು ದಾರುಣವಾಗಿ ಮೃತಪಟ್ಟ ಘಟನೆ ನಗರದ ರೊಸಾರಿಯೋ ಬಳಿ ನಡೆದಿದೆ.
ತಾಲೂಕಿನೆಲ್ಲೆಡೆ ಭಾರಿ ಮಳೆಗೆ ಅನೇಕ ಕಡೆ ಧರೆ ಕುಸಿದ ಘಟನೆ ನಡೆಯುತ್ತಿದ್ದು ಪುತ್ತೂರು ಬನ್ನೂರಿನ ಜೈನರಗುರಿ ಸಮೀಪ ಮಜೀದ್ ಎಂಬರ ಮನೆ ಮೇಲೆ ಧರೆ ಕುಸಿದ ಪರಿಣಾಮ ಮನೆ ಹಾನಿಗೊಂಡ ಮತ್ತು ನಿದ್ದೆಯಲ್ಲಿದ್ದ ಮಕ್ಕಳು ಮಣ್ಣಿನಡಿಯಲ್ಲಿ ಸಿಲುಕಿದ ಘಟನೆ ಜೂ.27 ರ ನಸುಕಿನ ಜಾವ ನಡೆದಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಜೂ. 27 ರಂದು ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮು ಮುಗಿಲನ್ ತಿಳಿಸಿದ್ದಾರೆ.
ದಿಲ್ಲಿ ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಅಧಿಕೃತವಾಗಿ ಬಂಧಿಸಲು ದಿಲ್ಲಿಯ ನ್ಯಾಯಾಲಯವೊಂದು ಇಂದು ಸಿಬಿಐಗೆ ಅನುಮತಿ ನೀಡಿದೆ.
ಎಪಿಎಂಸಿ ಪ್ರಾಂಗಣದ ಬಸ್ಸು ತಂಗುದಾಣದಲ್ಲಿ ಕಳೆದ ಹಲವಾರು ದಿನಗಳಿಂದ ಇದ್ದ ಸುಮಾರು 70 ವರ್ಷ ವಯೋಮಾನದ ವೆಂಕಪ್ಪ ಶೆಟ್ಟಿ ಅವರನ್ನು ಜಿಡೆಕಲ್ಲಿನಲ್ಲಿನ ದೀಪಶ್ರೀ ವೃದ್ಧರ ಹಾಗೂ ನಿರ್ಗತಿಕರ ಪುನರ್ವಸತಿ ಕೇಂದ್ರಕ್ಕೆ ಸೇರಿಸಲಾಯಿತು.
Welcome, Login to your account.
Welcome, Create your new account
A password will be e-mailed to you.