Thursday, December 12
Share News

ಜೇಬಿನಲ್ಲಿಟ್ಟಿದ್ದ ಮೊಬೈಲ್ ಫೋನ್ ಸ್ಫೋಟಗೊಂಡ ಪರಿಣಾಮ ಶಿಕ್ಷಕರೊಬ್ಬರು ಮೃತಪಟ್ಟಿದ್ದಾರೆ.

ಮಹಾರಾಷ್ಟ್ರದ ಗೊಂಡಿಯಾ ಜಿಲ್ಲೆಯ ಅರ್ಜುನಿ ಮೋರ್ಗಾಂವ್ ತಾಲೂಕಿನ ಸಿರೆಗಾಂವ್ ಅಣೆಕಟ್ಟೆ ಪ್ರದೇಶದಲ್ಲಿ ಈ ಘಟನೆ ನಡೆದಿದೆ.

ಶಿಕ್ಷಕ ಸುರೇಶ್ ಸಂಗ್ರಾಮೆ (55) ಮೃತಪಟ್ಟ ಶಿಕ್ಷಕ. ಗಂಭೀರವಾಗಿ ಗಾಯಗೊಂಡಿರುವ ಇಸ್ಮಾ ನಾಥು ಗಾಯಕ್ವಾಡ್ (56) ಭಂಡಾರಾ ಜಿಲ್ಲಾ ಜನರಲ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ . ಇಬ್ಬರೂ ಸಂಬಂಧಿಕರಾಗಿದ್ದು, ಭಂಡಾರಾ ಜಿಲ್ಲೆಯ ಸಾಕೋಲಿ ತಾಲೂಕಿನ ಸಿರೆಗಾವೋಲ ನಿವಾಸಿಗಳಾಗಿದ್ದಾರೆ.

ಶುಕ್ರವಾರ ಸಂಜೆ ವೇಳೆ ಸಂಬಂಧಿಕರ ಕಾರ್ಯಕ್ರಮಕ್ಕೆ ಅರ್ಜುನಿ ಮೋರ್ಗಾಂವ್‌ಗೆ ಹೋಗುತ್ತಿದ್ದಾಗ ಏಕಾಏಕಿ ಜೇಬಿನಲ್ಲಿದ್ದ ಮೊಬೈಲ್ ಫೋನ್ ಬಾಂಬ್ ರೀತಿ ಸ್ಫೋಟಗೊಂಡಿದೆ. ಸ್ಫೋಟಕ್ಕೆ ಕಾರಣವೇನು ಎಂಬುದು ತಿಳಿದುಬಂದಿಲ್ಲ. ಈ ಘಟನೆಯಿಂದ ಸುತ್ತಮುತ್ತಲಿನ ಜನ ಬೆಚ್ಚಿಬಿದ್ದಿದ್ದಾರೆ.


Share News

Comments are closed.

Exit mobile version