2021ನೇ ವರ್ಷದ ಕನ್ನಡ ಸಿನಿಮಾಗಳಿಗೆ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ಘೋಷಿಸಲಾಗಿದೆ. ನಟ ರಕ್ಷಿತ್ ಶೆಟ್ಟಿ ಅವರು ಅಭಿನಯಿಸಿದ ‘777 ಚಾರ್ಲಿ’ ಸಿನಿಮಾ ಪ್ರಮುಖ ಪ್ರಶಸ್ತಿಗಳನ್ನು ಪಡೆದುಕೊಂಡಿದೆ. ‘ದೊಡ್ಡಹಟ್ಟಿ ಬೋರೆ ಗೌಡ’ ಸಿನಿಮಾಗೆ ಮೊದಲ ಅತ್ಯುತ್ತಮ ಚಿತ್ರ ಪ್ರಶಸ್ತಿಯನ್ನು ನೀಡಲಾಗಿದೆ.
777 ಚಾರ್ಲಿ ಸಿನಿಮಾದ ನಟನೆಗೆ ರಕ್ಷಿತ್ ಶೆಟ್ಟಿ ಅವರಿಗೆ ಅತ್ಯುತ್ತಮ ನಟ, ಮ್ಯೂಟ್ ಸಿನಿಮಾದಲ್ಲಿ ನಟನೆಗಾಗಿ ಅರ್ಚನಾ ಜೋಯ್ಸ್ ಅವರಿಗೆ ಅತ್ಯುತ್ತಮ ನಟಿ ಪ್ರಶಸ್ತಿಗೆ ಆಯ್ಕೆ ಆಗಿದ್ದಾರೆ. ದೊಡ್ಡಹಟ್ಟಿ ಬೋರೇಗೌಡ ಸಿನಿಮಾಗೆ ಅತ್ಯುತ್ತಮ ಸಿನಿಮಾ ಪ್ರಶಸ್ತಿ ಘೋಷಣೆ ಮಾಡಲಾಗಿದೆ. 777 ಚಾರ್ಲಿ ಸಿನಿಮಾಗೆ 2ನೇ ಅತ್ಯುತ್ತಮ ಸಿನಿಮಾ ಪ್ರಶಸ್ತಿ ಇದಾಗಿದೆ. ಬಿಸಿಲು ಕುದುರೆ ಸಿನಿಮಾಗೆ 3ನೇ ಅತ್ಯುತ್ತಮ ಸಿನಿಮಾ ಪ್ರಶಸ್ತಿ ದೊರೆತಿದೆ.
ರತ್ನನ್ ಪ್ರಪಂಚ’ ಸಿನಿಮಾದ ಅಭಿನಯಕ್ಕಾಗಿ ಪ್ರಮೋದ್ ಅವರು ಅತ್ಯುತ್ತಮ ಪೋಷಕ ನಟ ಹಾಗೂ ಉಮಾಶ್ರೀ ಅವರು ಅತ್ಯುತ್ತಮ ಪೋಷಕ ನಟಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ‘ಬಿಸಿಲು ಕುದುರೆ’ ಸಿನಿಮಾದ ಸಂಗೀತಕ್ಕಾಗಿ ಇಮ್ಮಿಯಾಜ್ ಸುಲ್ತಾನ್ ಅವರಿಗೆ ‘ಅತ್ಯುತ್ತಮ ಸಂಗೀತ ನಿರ್ದೇಶನ’ ಪ್ರಶಸ್ತಿ ನೀಡಲಾಗಿದೆ. ‘ಕೇಕ್’ ಚಿತ್ರದ ನಟನೆಗೆ ಮಾಸ್ಟರ್ ಅತೀಶ್ ಶೆಟ್ಟಿಗೆ ಅತ್ಯುತ್ತಮ ಬಾಲನಟ ಪ್ರಶಸ್ತಿ ನೀಡಲಾಗಿದೆ. ‘ಭೈರವಿ’ ಸಿನಿಮಾದ ಅಭಿನಯಕ್ಕಾಗಿ ಬೇಬಿ ಭೈರವಿಗೆ ಅತ್ಯುತ್ತಮ ಬಾಲ ನಟಿ ಪ್ರಶಸ್ತಿ ನೀಡಲಾಗಿದೆ.