tamanvi
ಸಿನೇಮಾ

ಕಾಂತಾರದ ಬಳಿಕ ಶಿವಾಜಿ ಪಾತ್ರಕ್ಕೆ ಬಣ್ಣ ಹಚ್ಚಲಿದ್ದಾರೆ ರಿಷಬ್ ಶೆಟ್ಟಿ!!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಕಾಂತಾರ ಖ್ಯಾತಿಯ ರಿಷಬ್ ಶೆಟ್ಟಿ ಅವರ ಮುಂದಿನ ಮಹತ್ವಾಕಾಂಕ್ಷೆಯ ಚಿತ್ರದ ಬಗ್ಗೆ ಬಿಗ್ ಅಪ್‌ಡೇಟ್ ಹೊರಬಿದ್ದಿದೆ. ದೇಶ ಕಂಡ ಅಪ್ರತಿಮ ರಾಜ ಛತ್ರಪತಿ ಶಿವಾಜಿ ಮಹಾರಾಜ್ ಅವರ ಜೀವನಗಾಥೆಯನ್ನು ತೆರೆಯ ಮೇಲೆ ತರಲಿದ್ದಾರೆ ಎನ್ನುವುದೇ ಬಿಗ್ ಅಪ್’ಡೇಟ್.

maithri

‘ದಿ ಪ್ರೈಡ್ ಆಫ್ ಭಾರತ್: ಛತ್ರಪತಿ ಶಿವಾಜಿ ಮಹಾರಾಜ್’ (The Pride of Bharat: Chhatrapati Shivaji Maharaj) ಹೆಸರಿನಲ್ಲಿ ಎರಡು ಭಾಗಗಳಲ್ಲಿ ದೃಶ್ಯಕಾವ್ಯ ಮೂಡಿಬರಲಿದೆ. ಚಿತ್ರದ ಬಜೆಟ್ ಬರೋಬ್ಬರಿ 500 ಕೋಟಿ ರೂಪಾಯಿ ದಾಟಲಿದ್ದು, ಭಾರತೀಯ ಚಿತ್ರರಂಗದಲ್ಲೇ ಅತ್ಯಂತ ದುಬಾರಿ ಐತಿಹಾಸಿಕ ಚಿತ್ರಗಳಲ್ಲಿ ಒಂದಾಗಿ ಇದು ಮೂಡಿಬರಲಿದೆ.

ಸಂದೀಪ್ ಸಿಂಗ್ ನಿರ್ದೇಶನದ ಈ ಸಿನಿಮಾವನ್ನು ಕೇವಲ ಮೂರು ಗಂಟೆಗಳ ಒಂದೇ ಚಿತ್ರವಾಗಿ ಕಟ್ಟಿ ಕೊಡುವುದು ಕಷ್ಟ ಎಂದು ನಿರ್ಮಾಪಕರು ಭಾವಿಸಿದ್ದಾರೆ. ಶಿವಾಜಿ ಮಹಾರಾಜ್ ಅವರ ನಾಯಕತ್ವ, ರಾಜತಾಂತ್ರಿಕ ನಡೆ ಮತ್ತು ಅವರ ಸಾಮ್ರಾಜ್ಯದ ಇತಿಹಾಸವನ್ನು ಸಂಪೂರ್ಣವಾಗಿ ಪ್ರೇಕ್ಷಕರಿಗೆ ತಲುಪಿಸಲು ಎರಡು ಭಾಗಗಳಾಗಿ ಮಾಡಲು ತೀರ್ಮಾನಿಸಲಾಗಿದೆ.

ಬಾಲಿವುಡ್‌ನ ಖ್ಯಾತ ನಟ ಅರ್ಜುನ್ ರಾಂಪಾಲ್ ಈ ಚಿತ್ರದಲ್ಲಿ ಪ್ರಮುಖ ವಿಲನ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಶೆಫಾಲಿ ಶಾ ಅವರು ರಾಜಮಾತೆ ಜೀಜಾಬಾಯಿ ಪಾತ್ರಕ್ಕೆ ಬಣ್ಣ ಹಚ್ಚುತ್ತಿದ್ದಾರೆ. ಪ್ರೀತಮ್ ಅವರ ಸಂಗೀತ ಹಾಗೂ ರವಿವರ್ಮನ್ ಅವರ ಛಾಯಾಗ್ರಹಣ ಈ ಚಿತ್ರಕ್ಕಿರಲಿದೆ.

ಸದ್ಯ ರಿಷಬ್ ಶೆಟ್ಟಿ ಅವರು ಜೈ ಹನುಮಾನ್ ಸಿನಿಮಾದಲ್ಲಿ ಹನುಮಾನ್ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಇದರ ಕೆಲಸ ಪೂರ್ಣಗೊಂಡ ಬಳಿಕವಷ್ಟೇ ಶಿವಾಜಿ ಮಹಾರಾಜರ ಸಿನಿಮಾಕ್ಕೆ ಹಸಿರು ನಿಶಾನೆ ಸಿಗಲಿದೆ ಎಂದು ಹೇಳಲಾಗುತ್ತಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಧರ್ಮದೈವಕ್ಕಿಂತ ವಿಭಿನ್ನ ಕಥಾಹಂದರದ ಧರ್ಮಚಾವಡಿ | ನಾಳೆ (ಜುಲೈ 11) ಉಭಯ ಜಿಲ್ಲೆಗಳಲ್ಲಿ ಬಿಡುಗಡೆ: ನಿತಿನ್ ರೈ ಕುಕ್ಕುವಳ್ಳಿ

ಪುತ್ತೂರು: ತುಳು ಸಿನಿರಂಗದಲ್ಲಿ ಸದ್ದು ಮಾಡಿದ ಧರ್ಮ ದೈವ ಸಿನಿಮಾದ ಬಳಿಕ ಇದೀಗ ಧರ್ಮ ಚಾವಡಿ…

ಒಂದು ಸೇತುವೆಯ ಕಥೆಗೆ `ಜೈ’ | ತುಳುವಿನ ಘನತೆ, ಗಂಭೀರತೆಗೆ ಕಲಶ ಪ್ರಾಯ ಹಾಲಿವುಡ್ ಸ್ಟಾರ್ ಸುನಿಲ್ ಶೆಟ್ಟಿ ಅಭಿನಯ

`ಕಾರ್ ಪತ್ತುನವು ತುಳು ನಾಡ್’ದ ಸಂಸ್ಕೃತಿ, ಕಾರ್ ವೊಯ್ಪುನವ್ವತ್’ (ಕಾಲು ಹಿಡಿಯುವುದು ತುಳು…

ಮಲಯಾಳಂ – ತುಳುವಿನ ಸ್ಪರ್ಶವಿರುವ ಕೋಸ್ಟಲ್ ವುಡ್’ನ ‘ಮೀರಾ’ | ನಿರ್ಮಾಪಕ, ನಿರ್ದೇಶಕ, ನಾಯಕ, ನಾಯಕಿ ಎಲ್ಲರೂ ಹೊಸಬರೇ!!

ತುಳು ರಂಗ ಭೂಮಿಯ ಅಪ್ಪ - ತುಳು ಸಿನಿಮಾ ರಂಗದ ಮಗಳು. ಇವರೆರಡರ ನಡುವಿನ ಬಾಂಧವ್ಯ, ರಂಗಭೂಮಿ…