ಸಿನೇಮಾ

ಬ್ರಹ್ಮಗಂಟು ಸೀರಿಯಲ್ ನಟಿ ಶೋಭಿತಾ ಆತ್ಮಹತ್ಯೆ!!

ಎರಡೊಂದ್ಲಾ ಮೂರು’, ‘ಒಂದ್‌ ಕಥೆ ಹೇಳಾ’ ಮುಂತಾದ ಸಿನಿಮಾಗಳಲ್ಲಿ ನಟಿಸಿದ್ದ ಶೋಭಿತಾ ಶಿವಣ್ಣ ನಿಧನರಾಗಿದ್ದಾರೆ. ‘ಬ್ರಹ್ಮಗಂಟು’ ಸೀರಿಯಲ್ ಮೂಲಕ ಅವರು ಖ್ಯಾತಿ ಪಡೆದಿದ್ದರು. ಆತ್ಮಹತ್ಯೆ ಮಾಡಿಕೊಂಡು ಅವರು ಸಾವಿಗೀಡಾಗಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಎರಡೊಂದ್ಲಾ ಮೂರು’, ‘ಒಂದ್‌ ಕಥೆ ಹೇಳಾ’ ಮುಂತಾದ ಸಿನಿಮಾಗಳಲ್ಲಿ ನಟಿಸಿದ್ದ ಶೋಭಿತಾ ಶಿವಣ್ಣ ನಿಧನರಾಗಿದ್ದಾರೆ. ‘ಬ್ರಹ್ಮಗಂಟು’ ಸೀರಿಯಲ್ ಮೂಲಕ ಅವರು ಖ್ಯಾತಿ ಪಡೆದಿದ್ದರು. ಆತ್ಮಹತ್ಯೆ ಮಾಡಿಕೊಂಡು ಅವರು ಸಾವಿಗೀಡಾಗಿದ್ದಾರೆ.

akshaya college

ಎರಡೊಂದ್ಲಾ ಮೂರು’, ‘ಒಂದ್‌ ಕಥೆ ಹೇಳಾ’ ಮುಂತಾದ ಸಿನಿಮಾಗಳಲ್ಲಿ ನಟಿಸಿದ್ದ ಶೋಭಿತಾ ಶಿವಣ್ಣ ನಿಧನರಾಗಿದ್ದಾರೆ. ‘ಬ್ರಹ್ಮಗಂಟು’ ಸೀರಿಯಲ್ ಮೂಲಕ ಅವರು ಖ್ಯಾತಿ ಪಡೆದಿದ್ದರು. ಆತ್ಮಹತ್ಯೆ ಮಾಡಿಕೊಂಡು ಅವರು ಸಾವಿಗೀಡಾಗಿದ್ದಾರೆ. ಹಾಸನ‌‌ ಮೂಲದ ಸಕಲೇಶಪುರದನಟಿ ಶೋಭಿತಾ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಮಾಹಿತಿ ಇದೆ. ಸದ್ಯ ‘ಫಸ್ಟ್ ಡೇ ಫಸ್ಟ್ ಶೋ’ ಸಿನಿಮಾದಲ್ಲಿ ನಟಿಸಿದ್ದ ಶೋಭಿತಾ ಅವರು ಮದುವೆ ಬಳಿಕ ಸಿನಿಮಾಗಳಲ್ಲಿ ನಟಿಸುವುದು ಕಡಿಮೆ ಆಗಿತ್ತು

ಎರಡು ವರ್ಷಗಳ ಹಿಂದೆ ಮದುವೆಯಾದ ಶೋಭಿತಾ ಅವರು ಹೈದರಾಬಾದ್‌ನಲ್ಲಿ ವಾಸವಾಗಿದ್ದರು. ನಟಿಯ ಆತ್ಮಹತ್ಯೆಗೆ ಕಾರಣ ಏನು ಎಂಬುದು ಗೊತ್ತಾಗಿಲ್ಲ. ಶನಿವಾರ (ನವೆಂಬರ್​ 30) ರಾತ್ರಿ ಘಟನೆ ನಡೆದಿರುವ ಸಾಧ್ಯತೆ ಇದೆ. ಶನಿವಾರವಷ್ಟೇ ಸೋಶಿಯಲ್‌ ಮೀಡಿಯಾದಲ್ಲಿ ಸ್ಟೋರಿ ಶೇರ್ ಮಾಡಿದ್ದರು. ಆ ಬಳಿಕ ಅವರು ಆತ್ಮಹತ್ಯೆಯ ನಿರ್ಧಾರ ಮಾಡಿದ್ದು ಅಚ್ಚರಿಗೆ ಕಾರಣ ಆಗಿದೆ.

ಶೋಭಿತಾ ಮದುವೆ ಆದಾಗಿಂದ ಇಂಡಸ್ಟ್ರಿಯಿಂದ‌ ಅಂತರ ಕಾಯ್ದುಕೊಂಡಿದ್ದರು. ಮರಣೋತ್ತರ ಪರೀಕ್ಷೆ ನಂತರ ಬೆಂಗಳೂರಿಗೆ ಮೃತದೇಹ ತರುವ ಸಾಧ್ಯತೆ ಇದೆ. ಅವರ ನಿಧನಕ್ಕೆ ಸಿನಿಮಾ ಮತ್ತು ಸೀರಿಯಲ್ ಸೆಲೆಬ್ರಿಟಿಗಳು ಸಂತಾಪ ಸೂಚಿಸುತ್ತಿದ್ದಾರೆ. ಹಲವು ವರ್ಷಗಳಿಂದ ಬಣ್ಣದ ಲೋಕದಲ್ಲಿ ಸಕ್ರಿಯವಾಗಿದ್ದ ಶೋಭಿತಾ ಅವರು ಏಕಾಏಕಿ ದುಡುಕಿನ ನಿರ್ಧಾರ ತೆಗೆದುಕೊಂಡಿದ್ದಕ್ಕೆ ಎಲ್ಲರಿಗೂ ಆಘಾತ ಆಗಿದೆ.

ಶೋಭಿತಾ ಅವರಿಗೆ 30 ವರ್ಷ ವಯಸ್ಸು ಆಗಿತ್ತು. 12ಕ್ಕೂ ಅಧಿಕ ಸೀರಿಯಲ್​ಗಳಲ್ಲಿ ಅವರು ನಟಿಸಿದ್ದರು. ಮಂಗಳಗೌರಿ ಮದುವೆ, ಗಾಳಿಪಟ, ಕೃಷ್ಣ ರುಕ್ಮಿಣಿ, ಮನೆ ದೇವ್ರು, ಅಮ್ಮಾವ್ರು, ದೀಪವು ನಿನ್ನದೇ ಗಾಳಿಯೂ ನಿನ್ನದೇ ಮುಂತಾದ ಧಾರಾವಾಹಿಗಳ ಮೂಲಕ ಅವರು ಪರಿಚಿತರಾಗಿದ್ದರು. ಶೋಭಿತಾ ನಿಧನಕ್ಕೆ ಸಂಬಂಧಿಸಿದಂತೆ ತನಿಖೆ ಆರಂಭಿಸಲಾಗಿದೆ. ತನಿಖೆ ಪೂರ್ಣಗೊಂಡ ಬಳಿಕ ಅವರ ಸಾವಿಗೆ ಕಾರಣ ಏನು ಎಂಬುದು ತಿಳಿಯಲಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಧರ್ಮದೈವಕ್ಕಿಂತ ವಿಭಿನ್ನ ಕಥಾಹಂದರದ ಧರ್ಮಚಾವಡಿ | ನಾಳೆ (ಜುಲೈ 11) ಉಭಯ ಜಿಲ್ಲೆಗಳಲ್ಲಿ ಬಿಡುಗಡೆ: ನಿತಿನ್ ರೈ ಕುಕ್ಕುವಳ್ಳಿ

ಪುತ್ತೂರು: ತುಳು ಸಿನಿರಂಗದಲ್ಲಿ ಸದ್ದು ಮಾಡಿದ ಧರ್ಮ ದೈವ ಸಿನಿಮಾದ ಬಳಿಕ ಇದೀಗ ಧರ್ಮ ಚಾವಡಿ…