Gl harusha
ಸಿನೇಮಾ

ನಟ ದರ್ಶನ್ ಗೆ ಜಾಮೀನು ವಿಸ್ತರಣೆ; ಡಿಸೆಂಬರ್ 11ಕ್ಕೆ ಶಸ್ತ್ರಚಿಕಿತ್ಸೆ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿರುವ ನಟ ದರ್ಶನ್  ಅವರ ಮಧ್ಯಂತರ ಜಾಮೀನು ಅವಧಿಯನ್ನು ಹೈಕೋರ್ಟ್ ಸೋಮವಾರ ವಿಸ್ತರಿಸಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆರೋಪಿಯಾಗಿರುವ ನಟ ದರ್ಶನ್  ಅವರ ಮಧ್ಯಂತರ ಜಾಮೀನು ಅವಧಿಯನ್ನು ಹೈಕೋರ್ಟ್ ಸೋಮವಾರ ವಿಸ್ತರಿಸಿದೆ.

srk ladders
Pashupathi
Muliya

ಬೆನ್ನು ನೋವಿನಿಂದ ಬಳಲುತ್ತಿರುವ ನಟ ದರ್ಶನ್ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮುಂದಿನ ದಿನಾಂಕದವರೆಗೂ ಮಧ್ಯಂತರ ಜಾಮೀನು ವಿಸ್ತರಣೆ ಮಾಡಿ ಹೈಕೋರ್ಟ್ ಆದೇಶ ನೀಡಿದೆ.

ಸೋಮವಾರ ಹೈಕೋರ್ಟ್ನಲ್ಲಿ ನಟ ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆ ನಡೆಯಿತು. ದರ್ಶನ್ ಪರ ವಕೀಲರಾದ ಸಿವಿ ನಾಗೇಶ್ ವಾದ ಮಂಡಿಸಿದ್ದು, ಎಸ್‌ಪಿಪಿ ಪ್ರಸನ್ನ ಕುಮಾ‌ರ್ ಕೂಡ ಪ್ರತಿವಾದ ಮಂಡಿಸಿದರು. ಸುದೀರ್ಘ ವಾದ, ಪ್ರತಿವಾದ ಆಲಿಸಿದ ನ್ಯಾಯಾಧೀಶರು ದಿನಾಂಕ ಘೋಷಿಸದೆ ತೀರ್ಪು ಕಾಯ್ದಿರಿಸಿದ್ದಾರೆ.

ಜತೆಗೆ ಆದೇಶ ಬರುವವರೆಗೂ ನಟ ದರ್ಶನ್ ವೈದ್ಯಕೀಯ ಜಾಮೀನು ಅವಧಿ ವಿಸ್ತರಿಸಿದ್ದಾರೆ.

ಡಿಸೆಂಬರ್ 11ಕ್ಕೆ ನಟ ದರ್ಶನ್ ಅವರ ಶಸ್ತ್ರಚಿಕಿತ್ಸೆಗೆ ದಿನಾಂಕ ನಿಗದಿ ಆಗಿದೆ. ಈ ಬಗ್ಗೆ ನ್ಯಾಯಾಲಯಕ್ಕೆ ಮಾಹಿತಿ ನೀಡಲಾಗಿದೆ. ಆದ್ದರಿಂದ ಅವರ ಜಾಮೀನು ಅವಧಿಯನ್ನು ವಿಸ್ತರಣೆ ಮಾಡಲಾಗಿದೆ. ರೆಗ್ಯುಲರ್ ಬೇಲ್ ವಿಚಾರಣೆಯ ವಾದ-ಪ್ರತಿವಾದ ಮುಗಿದಿದೆ. ಆದೇಶವನ್ನು ಹೈಕೋರ್ಟ್ ಕಾಯ್ದಿರಿಸಿದೆ. ಆದೇಶ ಬರುವವರೆಗೆ ದರ್ಶನ್ ಅವರ ಮಧ್ಯಂತರ ಜಾಮೀನು ಅವಧಿ ಮುಂದುವರಿಯಲಿದೆ ಎಂದು ಹೈಕೋರ್ಟ್ ಹೇಳಿದೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಮಲಯಾಳಂ – ತುಳುವಿನ ಸ್ಪರ್ಶವಿರುವ ಕೋಸ್ಟಲ್ ವುಡ್’ನ ‘ಮೀರಾ’ | ನಿರ್ಮಾಪಕ, ನಿರ್ದೇಶಕ, ನಾಯಕ, ನಾಯಕಿ ಎಲ್ಲರೂ ಹೊಸಬರೇ!!

ತುಳು ರಂಗ ಭೂಮಿಯ ಅಪ್ಪ - ತುಳು ಸಿನಿಮಾ ರಂಗದ ಮಗಳು. ಇವರೆರಡರ ನಡುವಿನ ಬಾಂಧವ್ಯ, ರಂಗಭೂಮಿ…