pashupathi
ಸಿನೇಮಾ

‘ಕಾಂತಾರ: ಚಾಪ್ಟರ್ 1’ ಚಿತ್ರದ ಶೂಟ್: ಧರಣಿಯ ಎಚ್ಚರಿಕೆ ಕೊಟ್ಟ ಗ್ರಾಮಸ್ಥರು!

tv clinic
‘ಕಾಂತಾರ’ ಸಿನಿಮಾ ಹಿಟ್ ಆದ ಬಳಿಕ ರಿಷಬ್ ಶೆಟ್ಟಿ ಅವರು ‘ಕಾಂತಾರ: ಚಾಪ್ಟರ್ 1’ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಇದು ಚಿತ್ರದ ಪ್ರೀಕ್ವೆಲ್. ಈ ಸಿನಿಮಾದ ಶೂಟಿಂಗ್ ಕುಂದಾಪುರದ ಸುತ್ತಮುತ್ತ ಸಾಗುತ್ತಿದೆ. ಇದರಲ್ಲಿಯೂ ಮಣ್ಣಿನ ಕಥೆ ಹೇಳಲು ರಿಷಬ್ ಶೆಟ್ಟಿ ರೆಡಿ ಆಗಿದ್ದಾರೆ. ಹೀಗಿರುವಾಗಲೇ ಅರಣ್ಯ ಜಾಗದಲ್ಲಿ ಬೆಂಕಿ ಹಚ್ಚಿ ಪರಿಸರಕ್ಕೆ ಹಾನಿಮಾಡುತ್ತಿರುವ ಆರೋಪ ತಂಡದ ಮೇಲೆ ಬಂದಿದೆ. ಸಿನಿಮಾ ತಂಡದ ವಿರುದ್ಧ ಪ್ರತಿಭಟನೆ ಮಾಡುವ ಎಚ್ಚರಿಕೆಯನ್ನು ಗ್ರಾಮಸ್ಥರು ನೀಡಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

akshaya college

‘ಕಾಂತಾರ’ ಯಶಸ್ಸಿನ ಬಳಿಕ ಹೊಂಬಾಳೆ ಫಿಲ್ಮ್ಸ್ ‘ಕಾಂತಾರ 2’ ಮಾಡುವ ಆಸಕ್ತಿ ತೋರಿಸಿತು. ರಿಷಬ್ ಶೆಟ್ಟಿ ಅವರು ಹೊಸ ಕಥೆಯೊಂದಿಗೆ ಎರಡನೇ ಪಾರ್ಟ್ ಮಾಡಲು ರೆಡಿ ಆಗಿದ್ದಾರೆ. ಚಿತ್ರದ ಶೂಟಿಂಗ್ ಹಾಗೂ ಅದರ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಕುಂದಾಪುರದಲ್ಲೇ ನಡೆಯುತ್ತಿದೆ. ಈ ಕಾರಣಕ್ಕೆ ರಿಷಬ್ ಅವರು ತಮ್ಮ ಹುಟ್ಟೂರಿಗೆ ಶಿಫ್ಟ್ ಆಗಿದ್ದಾರೆ.

ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹೆರೂರು ಗ್ರಾಮದ ಅರಣ್ಯ ಪ್ರದೇಶದಲ್ಲಿ ಶೂಟಿಂಗ್ ನಡೆಸಲಾಗುತ್ತಿದೆ. ಜನವರಿ 2ರಿಂದ ಈ ಭಾಗದಲ್ಲಿ ಚಿತ್ರೀಕರಣ ಮಾಡಲಾಗುತ್ತಿದೆ. ಚಿತ್ರತಂಡ, ಶೂಟಿಂಗ್ಗಾಗಿ ಗೋಮಾಳ ಜಾಗಕ್ಕೆ ಪರವಾನಗಿ ಪಡೆದಿದೆ. ಆದರೆ, ಅರಣ್ಯ ಜಾಗದಲ್ಲಿ ಬೆಂಕಿ ಹಚ್ಚಿ ಪರಿಸರಕ್ಕೆ ಹಾನಿ ಮಾಡುತ್ತಿರುವ ಆರೋಪವನ್ನು ಗ್ರಾಮಸ್ಥರು ಮಾಡಿದ್ದು, ಚಿತ್ರತಂಡದ ನಡೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

‘ಚಿತ್ರೀಕರಣಕ್ಕೆ ಯಾವೆಲ್ಲಾ ಪರವಾನಿಗೆ ನೀಡಿದ್ದಾರೆ ಎಂಬ ಮಾಹಿತಿ ಕೊಡಬೇಕು. ಅರಣ್ಯ, ಕಂದಾಯ ಇಲಾಖೆಯವರು ಮಾಹಿತಿ ಬಹಿರಂಗಪಡಿಸಬೇಕು’ ಎಂದು ಆಗ್ರಹಿಸಿದ್ದಾರೆ. ಸದ್ಯ ಕಾಡಿನಲ್ಲಿ ಬೆಂಕಿ ಹಚ್ಚಿದ್ದರಿಂದ ಕಾಡುಪ್ರಾಣಿಗಳು ಜನವಸತಿ ಪ್ರದೇಶಕ್ಕೆ ಬರುತ್ತಿವೆ ಎನ್ನಲಾಗಿದೆ. ವನ್ಯಜೀವಿಗಳಿರುವ ಪ್ರದೇಶದಲ್ಲಿ ಚಿತ್ರೀಕರಣ ನಡೆಸಬಾರದು ಎಂಬುದು ಗ್ರಾಮಸ್ಥರ ಆಗ್ರಹ. ‘ಕೂಡಲೇ ಶೂಟಿಂಗ್​​ ಸ್ಥಗಿತಗೊಳಿಸಿ ಪರಿಸರ ಉಳಿಸಿ. ಇಲ್ಲವಾದರೆ ಡಿಸಿ ಕಚೇರಿ ಮುಂದೆ ಧರಣಿ ನಡೆಸುತ್ತೇವೆ’ ಎಂದು ಗ್ರಾಮಸ್ಥರ ಎಚ್ಚರಿಕೆ ನೀಡಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts