ಸಿನೇಮಾ

ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ: ಸುದೀಪ್, ಅನುಪಮ ಗೌಡ ಅತ್ಯುತ್ತಮ ನಟ, ನಟಿ ಪುರಸ್ಕಾರ

ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ: ಸುದೀಪ್, ಅನುಪಮ ಗೌಡ ಅತ್ಯುತ್ತಮ ನಟ, ನಟಿ ಗೌರವ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: 2019ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ: ಸುದೀಪ್, ಅನುಪಮ ಗೌಡ ಅತ್ಯುತ್ತಮ ನಟ, ನಟಿ ಗೌರವ ‘ಪೈಲ್ವಾನ್’ ಚಿತ್ರದಲ್ಲಿನ ಅತ್ಯುತ್ತಮ ನಟನೆಗಾಗಿ ಸುದೀಪ್ ಗೆ ಈ ಪ್ರಶಸ್ತಿ ಬಂದಿದೆ. ಇನ್ನೂ ಗ್ರಿಲ್ಲರ್ ಚಿತ್ರ ‘ತ್ರಯಂಬಕಂನ ‘ ಅಮೋಘ ನಟನೆಗಾಗಿ ಅನುಪಮ ಗೌಡ ‘ಅತ್ಯುತ್ತಮ ನಟಿ’ ಪ್ರಶಸ್ತಿ ಗೆದ್ದುಕೊಂಡಿದ್ದಾರೆ.

akshaya college

ಹಿರಿಯ ನಿರ್ದೇಶಕ ಪಿ. ಶೇಷಾದ್ರಿ ಅವರ ‘ಮೋಹನದಾಸ’ ಮೊದಲ ಅತ್ಯುತ್ತಮ ಚಿತ್ರವಾಗಿದ್ದು, ಡಾರ್ಲಿಂಗ್ ಕೃಷ್ಣ ನಿರ್ದೇಶನದ ಲವ್ ಮಾಸ್ಟೆಲ್‌, ಅತ್ಯಂ ಕ್ರಮವಾಗಿ ಎರಡನೇ ಹಾಗೂ ಮೂರನೇ ಅತ್ಯುತ್ತಮ ಚಿತ್ರವಾಗಿವೆ. ಡಾರ್ಲಿಂಗ್ ಕೃಷ್ಣ ಹಾಗೂ ಮಿಲನಾ ನಾಗರಾಜ್‌ ಅಭಿನಯದ ‘ಲವ್ ಮಾಸ್ಟೆಲ್’ ಗೆ ಅತ್ಯುತ್ತಮ ಚಿತ್ರಕಥೆ ಪ್ರಶಸ್ತಿ ಬಂದಿದೆ. ಇದೇ ಚಿತ್ರದ ರಘು ದೀಕ್ಷಿತ್ ಗೆ ಅತ್ಯುತ್ತಮ ಹಿನ್ನೆಲೆ ಗಾಯಕ ಪ್ರಶಸ್ತಿ ಒಲಿದು ಬಂದಿದೆ.

ಇನ್ನೂ ನಾಗತಿಹಳ್ಳಿ ಚಂದ್ರಶೇಖ‌ರ್ ನಿರ್ದೇಶಕ ಇಂಡಿಯಾ VS ಇಂಗ್ಲೆಂಡ್ ಅತ್ಯುತ್ತಮ ಜನಪ್ರಿಯ ಮನೋರಂಜನಾ ಚಿತ್ರವಾಗಿದೆ. ಕನ್ನೇರಿ ಅತ್ಯುತ್ತಮ ಸಾಮಾಜಿಕ ಕಾಳಜಿಯ ಚಿತ್ರವಾಗಿದೆ. ದರ್ಶನ್ ಅಭಿನಯದ ಯಜಮಾನ ಚಿತ್ರದ ಸಂಗೀತ ಸಂಯೋಜನೆಗೆ ವಿ. ಹರಿಕೃಷ್ಣ ಅತ್ಯುತ್ತಮ ಸಂಗೀತ ನಿರ್ದೇಶಕ ಪ್ರಶಸ್ತಿ ಪಡೆದುಕೊಂಡಿದ್ದಾರೆ.

2018ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ಘೋಷಿಸಲಾಗಿದ್ದರೂ ಪ್ರಶಸ್ತಿ ಪ್ರದಾನ ಸಮಾರಂಭ ನಡೆದಿರಲಿಲ್ಲ. ನಂತರದ ವರ್ಷಗಳಲ್ಲಿ ಕೋವಿಡ್ ಕಾರಣಗಳಿಂದ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ಪ್ರಕಟಿಸಿರಲಿಲ್ಲ. ಮಾರ್ಚ್ 2024 ರಂದು 15ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ ವೇಳೆಯಲ್ಲಿ 2019ರ ಚಲನಚಿತ್ರ ಪ್ರಶಸ್ತಿ ಪ್ರಕಟಿಸಲು ಸಮಿತಿ ರಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದರು


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಧರ್ಮದೈವಕ್ಕಿಂತ ವಿಭಿನ್ನ ಕಥಾಹಂದರದ ಧರ್ಮಚಾವಡಿ | ನಾಳೆ (ಜುಲೈ 11) ಉಭಯ ಜಿಲ್ಲೆಗಳಲ್ಲಿ ಬಿಡುಗಡೆ: ನಿತಿನ್ ರೈ ಕುಕ್ಕುವಳ್ಳಿ

ಪುತ್ತೂರು: ತುಳು ಸಿನಿರಂಗದಲ್ಲಿ ಸದ್ದು ಮಾಡಿದ ಧರ್ಮ ದೈವ ಸಿನಿಮಾದ ಬಳಿಕ ಇದೀಗ ಧರ್ಮ ಚಾವಡಿ…