tamanvi
ವಾಣಿಜ್ಯ ವಾರ್ತೆ

ವಿಟ್ಲ, ಉಪ್ಪಿನಂಗಡಿ, ಮಾಡಾವು, ಕುಂಬ್ರ, ಪುತ್ತೂರು ಚೇಂಬರ್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರಿಯ ಕಾರ್ಯಕಾರಿ ಸಮಿತಿ ಸಭೆ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಪುತ್ತೂರು ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ ಇದರ ನೇತೃತ್ವದಲ್ಲಿ ಪುತ್ತೂರು ವಿಧಾನಸಭಾ ವ್ಯಾಪ್ತಿಯ ವಿಟ್ಲ , ಉಪ್ಪಿನಂಗಡಿ , ಮಾಡಾವು ಹಾಗೂ ಕುಂಬ್ರ ಚೇಂಬರ್ ಆಫ್ ಕಾಮರ್ಸ್ ಇದರ ಕಾರ್ಯಕಾರಿ ಸಮಿತಿಯ ಸದಸ್ಯರ ಜೊತೆ ಸಭೆ ಪುತ್ತೂರಿನ ಮುಳಿಯ ಜೆಸಿ ಹಾಲಿನಲ್ಲಿ ನಡೆಯಿತು.

ಪುತ್ತೂರು  ವಿಧಾನಸಭಾ ವ್ಯಾಪ್ತಿಯ ವರ್ತಕರ ಸಮಸ್ಯೆಗಳು ಹಾಗೂ ಎಲ್ಲಾ ವರ್ತಕರೂ ಒಗ್ಗಟ್ಟಿನಿಂದ ಸಮಸ್ಯೆಗಳಿಗೆ ಸ್ಪಂದಿಸುವ ದೃಷ್ಟಿಯಲ್ಲಿ ಇದೇ ಮೊದಲ ಬಾರಿಗೆ ವರ್ತಕರ ಸಂಘದ ಜಂಟಿ ಸಭೆಯನ್ನು ಆಯೋಜಿಸಲಾಗಿತ್ತು. 

ಸಭೆಯ ಅಧ್ಯಕ್ಷತೆ ವಹಿಸಿದ್ದ ಪುತ್ತೂರು ಚೇಂಬರ್  ಆಫ್ ಕಾಮರ್ಸ್ ಮತ್ತು ಇಂಡಸ್ಟ್ರಿ ಅಧ್ಯಕ್ಷ ರವಿಕೃಷ್ಣ ಡಿ ಕಲ್ಲಜೆ ಮಾತನಾಡಿ, ಸಭೆಯ ಉದ್ದೇಶ ವಿವರಿಸಿದರು. ವರ್ತಕರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ವರ್ತಕರಿಗೆ ಲೈಸನ್ಸ್ ಪಡೆಯಲು ಆಗುತ್ತಿರುವ ಸಮಸ್ಯೆಗಳ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಮುಂದಿನ ದಿನಗಳಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಸಂಬಂಧಪಟ್ಟ ಸಮಸ್ಯೆಗಳಿಗೆ ಕಾನೂನಾತ್ಮಕವಾಗಿ ಪರಿಹಾರ ಕಂಡುಕೊಳ್ಳುವ ಬಗ್ಗೆ ತೀರ್ಮಾನಿಸಲಾಯಿತು.

ಈ ಸಭೆಯಲ್ಲಿ ವಿಟ್ಲ ವರ್ತಕ ಸಂಘದ ಅಧ್ಯಕ್ಷ ಬಾಬು, ಉಪ್ಪಿನಂಗಡಿ ವರ್ತಕರ ಸಂಘದ ಅಧ್ಯಕ್ಷ ಪ್ರಶಾಂತ್ ಡಿ ಕೋಸ್ಟಾ, ಮಾಡಾವು ಸಂಘದ ಅಧ್ಯಕ್ಷ ಮೊಹಮ್ಮದ್ ರಿಯಾಜ್ ಹಾಗೂ ಈ ಎಲ್ಲಾ ಸಂಘದ ಕಾರ್ಯಕಾರಿ ಸದಸ್ಯರು, ಪುತ್ತೂರು ಚೇಂಬರ್ ನ ಕಾರ್ಯದರ್ಶಿ ಉಲ್ಲಾಸ್ ಪೈ, ಪೂರ್ವ ಅಧ್ಯಕ್ಷ ಜಾನ್ ಕುಟಿನ್ಹಾ, ವಾಮನ್ ಪೈ, ಕಾರ್ಯಕ್ರಮದ ಸಂಯೋಜಕರಾದ ಶ್ರೀಕಾಂತ್ ಕೊಳತ್ತಾಯ, ಮುಳಿಯ ಜ್ಯುವೆಲರ್ಸ್ ಮಾಲಕ ಕೃಷ್ಣನಾರಾಯಣ ಮುಳಿಯ ಹಾಗೂ ಎಲ್ಲಾ ಸದಸ್ಯರು ಭಾಗವಹಿಸಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿನಲ್ಲಿ ಆ.29ರಂದು ಸರ್ಕಾರಿ ನೌಕರರ 2025-26ನೇ ಸಾಲಿನ ವಾರ್ಷಿಕ ಮಹಾಸಭೆ ಮತ್ತು ಅಭಿನಂದನಾ ಕಾರ್ಯಕ್ರಮ

ಪುತ್ತೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪುತ್ತೂರು ತಾಲೂಕು ಶಾಖೆಯ ವತಿಯಿಂದ…

ಟೈಮ್ಸ್ ವ್ಯಾಪಾರ ಪ್ರಶಸ್ತಿ–2026: ಗೃಹ ನಿರ್ಮಾಣ ಕ್ಷೇತ್ರದಲ್ಲಿ ಯು ಆರ್ ಪ್ರಾಪರ್ಟೀಸ್‌ಗೆ ವರ್ಷದ ಶ್ರೇಷ್ಠ ಗೌರವ

ಮಂಗಳೂರು: ನಗರದ ಅವತಾರ್ ಹೋಟೆಲ್‌ನಲ್ಲಿ ನಡೆದ ಟೈಮ್ಸ್ ವ್ಯಾಪಾರ ಪ್ರಶಸ್ತಿ–2026 ಸಮಾರಂಭದಲ್ಲಿ…

ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ 21ನೇ ಶಾಖೆ ನೆಹರುನಗರದಲ್ಲಿ ಇಂದು ಶುಭಾರಂಭ

ಪುತ್ತೂರು: ರಜತ ಮಹೋತ್ಸವದ ಸಂಭ್ರಮಾಚರಣೆಯಲ್ಲಿರುವ ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ…