Gl harusha
ಅಪರಾಧ

ನಟಿ ಬಂಧನದ ಬೆನ್ನಲ್ಲೇ ಡಿಜಿಪಿ ರಾಮಚಂದ್ರ ರಾವ್ ವಿರುದ್ಧ ತನಿಖೆಗೆ ಆದೇಶ!

ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿ ಇದೀಗ ನಟಿ ರನ್ಯಾ ರಾವ್ ಮಲತಂದೆ ಡಿಜಿಪಿ ರಾಮಚಂದ್ರ ರಾವ್ ಅವರು ವಿಮಾನ ನಿಲ್ದಾಣದಲ್ಲಿ ನಟಿ ರನ್ಯಾಗೆ ಪ್ರೋಟೋಕಾಲ್ ನೀಡಿದ ಬಗ್ಗೆ ತನಿಖೆ ನಡೆಸಿ, ಒಂದು ವಾರದ ಒಳಗೆ ವರದಿ ಸಲ್ಲಿಸುವಂತೆ ಕರ್ನಾಟಕ ಗೃಹ ಇಲಾಖೆ ಮಂಗಳವಾರ ಆದೇಶಿಸಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ಚಿನ್ನ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿ ಇದೀಗ ನಟಿ ರನ್ಯಾ ರಾವ್ ಮಲತಂದೆ ಡಿಜಿಪಿ ರಾಮಚಂದ್ರ ರಾವ್ ಅವರು ವಿಮಾನ ನಿಲ್ದಾಣದಲ್ಲಿ ನಟಿ ರನ್ಯಾಗೆ ಪ್ರೋಟೋಕಾಲ್ ನೀಡಿದ ಬಗ್ಗೆ ತನಿಖೆ ನಡೆಸಿ, ಒಂದು ವಾರದ ಒಳಗೆ ವರದಿ ಸಲ್ಲಿಸುವಂತೆ ಕರ್ನಾಟಕ ಗೃಹ ಇಲಾಖೆ ಮಂಗಳವಾರ ಆದೇಶಿಸಿದೆ.

Pashupathi

ಪ್ರಕರಣಕ್ಕೆ ಸಂಬಂಧಿಸಿ ತರುಣ್ ರಾಜು ಎಂಬವರನ್ನು ಡಿಆರ್ ಐ ಅಧಿಕಾರಿಗಳು ಸೋಮವಾರ ಬಂಧಿಸಿರುವ ಬೆನ್ನಲ್ಲೇ ತನಿಖೆ ಚುರುಕುಗೊಂಡಿದೆ.

akshaya college

ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ರಾಮಚಂದ್ರ ರಾವ್ ಕೂಡ ಶಾಮಿಲಾಗಿದ್ದಾರೆಯೇ? ದುಬೈನಿಂದ ಬೆಂಗಳೂರಿಗೆ ಚಿನ್ನ ಸಾಗಿಸುವಾಗ ಶಿಷ್ಟಾಚಾರ ದುರ್ಬಳಕೆ ಆಗಿರುವುದರಲ್ಲಿ ಅವರ ಕೈವಾಡ ಇದೆಯೇ ಎಂಬ ಬಗ್ಗೆ ಒಂದು ವಾರದ ಒಳಗೆ ತನಿಖೆ ನಡೆಸಲು ಸೂಚಿಸಲಾಗಿದೆ.

ಚಿನ್ನ ಸಾಗಾಟ ಮಾಡುವಾಗ ನಟಿ ರನ್ಯಾ ಅವರು ಐಪಿಎಸ್ ಅಧಿಕಾರಿ ರಾಮಚಂದ್ರ ರಾವ್ ಹೆಸರು ಬಳಸಿದ್ದರು. ಹೀಗಾಗಿ ಶಿಷ್ಟಾಚಾರದ ಸೌಲಭ್ಯ ಪಡೆಯಲು ಕಾರಣವಾದ ಸಂಗತಿಗಳು ಯಾವುವು? ಕೇಸ್ ನಲ್ಲಿ ರಾಮಚಂದ್ರರಾವ್ ಪಾತ್ರ ಏನೇನಿದೆ ಎಂಬ ಬಗ್ಗೆ ತನಿಖೆ ನಡೆಸಲು ಅಧಿಕಾರಿಗಳನ್ನು ನೇಮಿಸಲಾಗಿದ್ದು, ಒಂದು ವಾರದಲ್ಲಿ ತನಿಖೆ ಪ್ರಾರಂಭಿಸಿ ವರದಿ ಸಲ್ಲಿಸಬೇಕಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts