ಅಪರಾಧ

ಕರ್ನಾಟಕ ಬಿಜೆಪಿ ಮಹಿಳಾ ಜನರಲ್ ಸೆಕ್ರೆಟರಿ ಆತ್ಮಹತ್ಯೆ!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ಕರ್ನಾಟಕ ಬಿಜೆಪಿ ಜನರಲ್ ಸೆಕ್ರೆಟರಿ ಮಂಜುಳಾ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಾರ್ಚ್ 11 ಬೆಂಗಳೂರಿನ ಮತ್ತಿಕೆರೆಯ ನಿವಾಸದಲ್ಲೇ ಮಂಜುಳಾ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

akshaya college

ಮನೆಯಲ್ಲಿ ಡೆತ್ ನೋಟ್ ಸಹ ಪತ್ತೆಯಾಗಿದ್ದು, ನನ್ನ ಸಾವಿಗೆ ನಾನೇ ಕಾರಣ ಎಂದು ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿದ್ದಾರೆ. ಸ್ಥಳಕ್ಕೆ ಯಶವಂತಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಂಗಳವಾರ ಮಧ್ಯಾಹ್ನ ಮತ್ತಿಕೆರೆಯ ಮನೆಯಲ್ಲಿ ಮಂಜುಳಾ ಸಾವಿಗೆ ಶರಣಾದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಯಶವಂತಪುರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ನಂತರ ಮೃತದೇಹವನ್ನ ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ನಂತರ, ಸಾವಿನ ಸ್ಥಳವನ್ನು ಪರಿಶೀಲನೆ ಮಾಡಿದಾಗ ಪೊಲೀಸರಿಗೆ ಮಂಜುಳಾ ಬರೆದಿಟ್ಟಿದ್ದ ಡೆತ್ ನೋಟ್ ಸಿಕ್ಕಿದ್ದು, ಈ ಬಗ್ಗೆ ತನಿಖೆ ನಡೆಸಿದ್ದಾರೆ.

ಹಲವು ವರ್ಷಗಳಿಂದ ಬಿಜೆಪಿಯ ಸಕ್ರಿಯ ಕಾರ್ಯಕರ್ತರಾಗಿ ಬೆಳೆದು ಬಂದಿದ್ದ ಮಂಜುಳಾ, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ಜನರಲ್ ಸೆಕ್ರೆಟರಿ ಹುದ್ದೆ ಸಿಕ್ಕಿತ್ತು.ಆದ್ರೆ, ಇತ್ತೀಚೆಗೆ ಮಂಜುಳಾ ಅವರು ಗಂಡನನ್ನು ಕಳೆದುಕೊಂಡಿದ್ದಳು. ಬಳಿಕ ಅವರು ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದರು. ಹೀಗಾಗಿ ಮಂಜುಳಾ ಅವರು ಪಕ್ಷದ ಕಾರ್ಯಚಟುವಟಿಕೆಗಳಿಂದ ಪಾಲ್ಗೊಳ್ಳಲಾಗದೇ ದೂರವಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts